ಕೊರೊನಾ ಶಂಕಿತ ವ್ಯಕ್ತಿ ಆಸ್ಪತ್ರೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ!
ನವದೆಹಲಿ, ಮಾರ್ಚ್ 18: ಕೊರೊನಾ ವೈರಸ್ ಸೋಂಕು ಶಂಕೆಯ ಮೇಲೆ ದೆಹಲಿಯ ಸಪ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದ 37 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬುಧವಾರ ರಾತ್ರಿ ನಡೆದಿದೆ.
ಬುಧವಾರ ಬೆಳಿಗ್ಗೆ ಸಿಡ್ನಿಯಿಂದ ಆಗಮಿಸಿದ್ದ ತನ್ವಿರ್ ಸಿಂಗ್ ಎನ್ನುವ ವ್ಯಕ್ತಿಯನ್ನು ಕೊರೊನಾ ಶಂಕೆಯ ಮೇಲೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಅವರಿಗೆ ಸೋಂಕು ದೃಢಪಟ್ಟಿತ್ತು ಎನ್ನಲಾಗಿದೆ. ಆಸ್ಪತ್ರೆಯ ಏಳನೇ ಮಹಡಿಯಿಂದ ಜಿಗಿದು ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪಂಜಾಬ್‌ನ ಶಹೀದ್ ಭಗತ್ ಸಿಂಗ್ ಜಿಲ್ಲೆಯ ವ್ಯಕ್ತಿಯಾಗಿದ್ದು, ಕಳೆದ ಒಂದು ವರ್ಷದಿಂದ ಆಸ್ಟ್ರೇಲಿಯದ ಸಿಡ್ನಿಯಲ್ಲಿ ನೆಲಸಿದ್ದರು ಎಂದು ದೆಹಲಿ ಆಗ್ನೇಯ ವಿಭಾಗದ ಪೊಲೀಸರು ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ 9 ಕ್ಕೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೊರೊನಾ ಶಂಕೆಯ ಮೇಲೆ ಆಸ್ಪತ್ರೆಗೆ ಸೇರಿಸಲಾಗಿತ್ತು ಎಂದು ವರದಿಗಳು ಹೇಳಿವೆ.












Click it and Unblock the Notifications