ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕ್ಷಮೆ ಕೇಳಿದರೆ ಸಂಸದರ ಅಮಾನತು ವಾಪಸ್: ಪ್ರಲ್ಹಾದ್ ಜೋಶಿ

|
Google Oneindia Kannada News

ನವದೆಹಲಿ, ಡಿಸೆಂಬರ್ 07: ಅಮಾನತುಗೊಂಡಿರುವ ಸಂಸದರು ಕ್ಷಮೆ ಕೇಳಿದಲ್ಲಿ ಅಮಾನತು ಆದೇಶ ಹಿಂಪಡೆಯಲಾಗುವುದು ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಪ್ರಧಾನಿ ನರಂದ್ರ ಮೋದಿ ಭಾಗವಹಿಸಿದ್ದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಸಚಿವರುಗಳು ಸಂಸದರ ಅಮಾನತು ಆದೇಶದ ಬಗ್ಗೆ ವಿವರಣೆ ನೀಡಿದ್ದಾರೆ ಎಂದೂ ಜೋಶಿ ತಿಳಿಸಿದ್ದಾರೆ.

ಪರಿಷತ್ ಫೈಟ್; ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದ ಜೆಡಿಎಸ್!ಪರಿಷತ್ ಫೈಟ್; ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದ ಜೆಡಿಎಸ್!

ಮುಂಗಾರು ಅಧಿವೇಶನದ ಕೊನೆಯ ದಿನದಂದು ಸಂಸತ್ ನಲ್ಲಿ ತೀವ್ರ ಗದ್ದಲ ಉಂಟುಮಾಡಿದ್ದ ಕಾರಣ ವಿಪಕ್ಷಗಳ 12 ಸಂಸದರನ್ನು ಚಳಿಗಾಲದ ಉಳಿದ ಅಧಿವೇಶನದ ರಾಜ್ಯಸಭೆಯ ಕಲಾಪದಿಂದ ಅಮಾನತುಗೊಳಿಸಲಾಗಿತ್ತು.

Suspension Of 12 MPs Can Be Revoked If They Apologise: Pralhad Joshi

ಇದೇ ವೇಳೆ, ಬಿಜೆಪಿ ಸಂಸದೀಯ ಮಂಡಳಿ ಸಭೆಯ ಬಗ್ಗೆ ವಿವರ ನೀಡಿರುವ ಅವರು, ಪದ್ಮ ಪ್ರಶಸ್ತಿ ಪುರಸ್ಕೃತರನ್ನೊಳಗೊಂಡ ಕಾರ್ಯಕ್ರಮಗಳನ್ನು ಆಯೋಜಿಸುವುದಕ್ಕೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ನಾವು ಸಂಸದರನ್ನು ಏಕೆ ಅಮಾನತು ಮಾಡಲಾಯಿತು ಎಂಬುದನ್ನು ವಿವರಿಸಿದ್ದೇವೆ. ಏನಾಯಿತು ಎಂಬುದನ್ನು ದೇಶವೇ ನೋಡಿದೆ. ದಾಖಲೆಗಳಲ್ಲಿದೆ. ಅವರು ಇಂದಿಗೂ ಕ್ಷಮೆ ಕೇಳಿದರೆ ನಾವು ಅಮಾನತು ಆದೇಶವನ್ನು ಹಿಂಪಡೆಯುವುದಕ್ಕೆ ಸಿದ್ಧರಿದ್ದೇವೆ ಎಂದು ಜೋಶಿ ಸಂಸದೀಯ ಮಂಡಳಿ ಸಭೆಯ ಬಳಿಕ ತಿಳಿಸಿದ್ದಾರೆ.

12 ಸಂಸದರನ್ನು ಸದನದದಿಂದ ಅಮಾನತು ಮಾಡಿರುವುದನ್ನು ರದ್ದುಪಡಿಸಬೇಕೆಂದು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಎರಡನೇ ಬಾರಿಗೆ ಮಧ್ಯಾಹ್ನ 2 ಗಂಟೆಯವರೆಗೆ ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಗಿದೆ.

ಸದನ ಸಮಾವೇಶಗೊಳ್ಳುತ್ತಿದ್ದಂತೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಟಿಆರ್ ಎಸ್, ಆಮ್ ಆದ್ಮಿ ಪಾರ್ಟಿ ಮತ್ತು ಎಡಪಕ್ಷಗಳು ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಮುಂದುವರಿಸಿದ್ದರಿಂದ ಮಧ್ಯಾಹ್ನದವರೆಗೂ ಕಲಾಪವನ್ನು ಮುಂದೂಡಲಾಯಿತು.

ಸದನದ ಬಾವಿಗಿಳಿದ ಅನೇಕ ಪ್ರತಿಪಕ್ಷಗಳ ಸದಸ್ಯರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದ ಪ್ರತಿಭಟಿಸಿದರು. ಪ್ರಜಾಪ್ರಭುತ್ವ ಹತ್ಯೆ ಮಾಡಬೇಡಿ, ಸರ್ವಾಧಿಕಾರತ್ವ ಪ್ರಜಾಪ್ರಭುತ್ವದಲ್ಲಿ ನಡೆಯುವುದಿಲ್ಲ ಎಂಬಂತಹ ಭಿತ್ತಿಪತ್ರ ಪ್ರದರ್ಶಿಸಿದರು.

ಈ ಮಧ್ಯೆ ಪ್ರಶ್ನೋತ್ತರ ಕಲಾಪ ಆರಂಭಿಸಿದ ರಾಜ್ಯಸಭೆ ಉಪ ಸಭಾಪತಿ ಹರಿವಂಶ್ ನಾರಾಯಣ್ ಸಿಂಗ್ , ಸದಸ್ಯರನ್ನು ತಮ್ಮ ಸ್ಥಾನಗಳಿಗೆ ತೆರಳಿ, ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು. ಆದರೆ, ಪ್ರತಿಪಕ್ಷಗಳ ಸದಸ್ಯರು ಕಿವಿಗೂಡದೇ ಗದ್ದಲ, ಗೊಂದಲ ಮುಂದುವರೆದ್ದರಿಂದ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೂ ರಾಜ್ಯಸಭೆ ಉಪಸಭಾಪತಿ ಮುಂದೂಡಲಾಗಿತ್ತು.

ರೈತರ ಸಾವು ಕುರಿತು ರಾಹುಲ್ ಗಾಂಧಿ ಮಾತು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸಿದ ಪ್ರತಿಭಟನೆಯಲ್ಲಿ ಸುಮಾರು 700 ರೈತರು ಸಾವನ್ನಪ್ಪಿದ್ದಾರೆ. ಪ್ರಧಾನಿಯವರು ದೇಶದ ರೈತರಲ್ಲಿ ಕ್ಷಮೆಯಾಚಿಸಿದ್ದಾರೆ. ತಾನು ತಪ್ಪು ಮಾಡಿದೆ ಎಂದು ಒಪ್ಪಿಕೊಂಡಿದ್ದಾರೆಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಮೃತ ರೈತರಿಗೆ ಪರಿಹಾರ ನೀಡಲ್ಲ ಎಂಬ ಸರ್ಕಾರದ ಹೇಳಿಕೆಯನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ, ನವೆಂಬರ್‌ 30ರಂದು ಕೃಷಿ ಸಚಿವರು ಮಾತನಾಡಿ ಪ್ರತಿಭಟನೆಯಲ್ಲಿ ಎಷ್ಟು ರೈತರು ಸತ್ತರು? ನಮ್ಮ ಬಳಿ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಹರಿಯಾಣದ 70 ರೈತರ ಮತ್ತೊಂದು ಪಟ್ಟಿಯನ್ನು ಮಾಡಿದ್ದೇವೆ. ಆದರೆ, ನೀವು ಮೃತ ರೈತರ ಮಾಹಿತಿ ಇಲ್ಲ ಎನ್ನುತ್ತಿದ್ದೀರಿ. ರೈತರಿಗೆ ಅವರ ಹಕ್ಕುಗಳನ್ನು ನೀಡಬೇಕು. ಅವರಿಗೆ ಪರಿಹಾರದ ಜೊತೆಗೆ ಅವರ ಕುಟುಂಬಗಳಿಗೆ ಉದ್ಯೋಗ ನೀಡಬೇಕು ಎಂದು ರಾಹುಲ್ ಗಾಂಧಿ ಲೋಕಸಭೆಯಲ್ಲಿ ಒತ್ತಾಯಿಸಿದ್ದಾರೆ.

ಪಂಜಾಬ್ ಸರ್ಕಾರವು ಸುಮಾರು 400 ರೈತರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಿರುವುದನ್ನು ನೋಡಿದ್ದೇವೆ. ಇದರಲ್ಲಿ 152 ಮಂದಿಯ ಕುಟುಂಬಗಳಿಗೆ ಉದ್ಯೋಗ ನೀಡಿದೆ. ನನ್ನ ಬಳಿ ಪಟ್ಟಿ ಇದೆ ಎಂದಿದ್ದಾರೆ.

English summary
Amid ruckus in Parliament for several days over the suspension of 12 MPs, Union Parliamentary Affairs Minister Pralhad Joshi said on Tuesday that the suspension of the Rajya Sabha MPs can be revoked if they apologise for their conduct in the House.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X