ನವೆಂಬರ್ 24ರ ವರೆಗೆ ಟೋಲ್ ಕಟ್ಟುವ ಅಗತ್ಯವಿಲ್ಲ

Posted By:
Subscribe to Oneindia Kannada

ನವದೆಹಲಿ, ನವೆಂಬರ್, 17: ಗರಿಷ್ಠ ಮುಖಬೆಲೆಯ ನೋಟುಗಳನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನವೆಂಬರ್ 24 ರವರೆಗೂ ಟೋಲ್ ಕಟ್ಟುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ನವೆಂಬರ್ 18ರ ವರೆಗೂ ಟೋಲ್ ಕಟ್ಟುವ ಅಗತ್ಯವಿಲ್ಲ ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಅಭಿವೃದ್ಧಿ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದರು. ಈ ಅವಧಿಯನ್ನು ನ.24 ಮಧ್ಯರಾತ್ರಿ ವರೆಗೆ ವಿಸ್ತರಿಸಲಾಗಿದೆ.

Suspension of tolls for extended till November 24 midnight

ಟೋಲ್ ಕಟ್ಟಲು ಚಿಲ್ಲರೆ ಸಮಸ್ಯೆ ಎದುರಾಗುವುದರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ಉಂಟಾಗಬಹುದು ಎಂದು ಟೋಲ್ ಶುಲ್ಕವನ್ನು ತೆಗೆಯಲಾಗಿತ್ತು.

ಪರಿಸ್ಥಿತಿಯನ್ನು ಅವಲೋಕಿಸಿಯೇ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸರ್ಕಾರ ತಿಳಿಸಿದ್ದು, ಖಾಸಗಿ ಸಂಸ್ಥೆಗಳು ನಿರ್ವಹಿಸುತ್ತಿರುವ ಟೋಲ್ ಕೇಂದ್ರಗಳ ನಷ್ಟವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಲಾಗಿದೆ.

ನವೆಂಬರ್ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ರೂ. 500 ಹಾಗು, ರೂ. 1000 ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ ನಂತರ ಟೋಲ್ ಸಂಗ್ರಹ ಕೇಂದ್ರಗಳಲ್ಲಿ ಚಿಲ್ಲರೆ ಸಮಸ್ಯೆ ಮತ್ತು ಹೆಚ್ಚು ಮಂದಿ ನೋಟು ಬದಲಾಯಿಸಿಕೊಳ್ಳುವ ಸಾಧ್ಯತೆ ಇದ್ದುದರಿಂದ ಟೋಲ್ ಶುಲ್ಕವನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The government on Thursday extended the suspension of tolls till November 24 midnight for all National Highways. Last week, the government had announced that tolls would be suspended till November 14 midnight.
Please Wait while comments are loading...