ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಹಂದಿ ಜ್ವರ, ಅನಾರೋಗ್ಯಕ್ಕೆ ಚಿಕಿತ್ಸೆ
ನವದೆಹಲಿ, ಜನವರಿ 16 : ಇಡೀ ಕರ್ನಾಟಕದಲ್ಲಿ ಆಪರೇಷನ್ ಕಮಲ ಎಂಬ ಧ್ವನಿ ಕೇಳಿಬರುತ್ತಿದ್ದರೆ, ನಾವು ದೆಹಲಿಗೆ ಬಂದಿದ್ದು ಲೋಕಸಭೆ ಚುನಾವಣೆಗೆ ಪಕ್ಷದ ಕಾರ್ಯತಂತ್ರ ಏನಾಗಬೇಕು ಎಂದು ಚರ್ಚೆ ಮಾಡುವ ಸಲುವಾಗಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳುತ್ತಿದ್ದಾರೆ. ಆದರೆ ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷರೇ ತಮಗೆ ಅನಾರೋಗ್ಯ ಎಂದು ಟ್ವೀಟ್ ಮಾಡಿದ್ದಾರೆ.
मुझे स्वाइन फ्लू हुआ है, जिसका उपचार चल रहा है। ईश्वर की कृपा, आप सभी के प्रेम और शुभकामनाओं से शीघ्र ही स्वस्थ हो जाऊंगा।
— Amit Shah (@AmitShah) 16 January 2019
ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬುಧವಾರ ಟ್ವೀಟ್ ಮಾಡಿದ್ದು, ನನಗೆ ಹಂದಿ ಜ್ವರ ಬಂದಿದೆ. ಅದರ ಚಿಕಿತ್ಸೆ ಪಡೆಯುತ್ತಿದ್ದೇನೆ. ಈಶ್ವರನ ದಯೆ, ನಿಮ್ಮೆಲ್ಲರ ಪ್ರೀತಿ ಹಾಗೂ ಶುಭ ಕಾಮನೆಯಿಂದ ಶೀಘ್ರವಾಗಿ ಗುಣಮುಖನಾಗುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಟ್ವೀಟ್ ಗೆ ಸಾವಿರದ ಏಳುನೂರರಷ್ಟು ಕಾಮೆಂಟ್ ಗಳು ಬಂದಿವೆ ಹಾಗೂ ಒಂಬೈನೂರ ಮೂವತ್ತೆರಡು ಮಂದಿ ರೀ ಟ್ವೀಟ್ ಮಾಡಿದ್ದಾರೆ. ಅಂದ ಹಾಗೆ ಚುನಾವಣೆ ವರ್ಷವಾಗಿರುವ ಈ ಸಂದರ್ಭದಲ್ಲಿ ಇನ್ನೇನು ಕೇಂದ್ರದ ಮಧ್ಯಂತರ ಬಜೆಟ್ ಮಂಡನೆ ಆಗಲಿದೆ. ಜತೆಗೆ ರಾಜಕೀಯ ಬೆಳವಣಿಗೆಗಳು ಕುತೂಹಲ ಹುಟ್ಟಿಸಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಅಮಿತ್ ಶಾ ಮೇಲೆ ಗುರುತರವಾದ ಜವಾಬ್ದಾರಿ ಇದೆ.












Click it and Unblock the Notifications