ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಸೆಂಬರ್ 5ಕ್ಕೆ ರೈತರು ಹಾಗೂ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಮಾತುಕತೆ

|
Google Oneindia Kannada News

ನವದೆಹಲಿ, ಡಿಸೆಂಬರ್ 03: ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಯನ್ನು ಹಿಂಪಡೆಯುವ ಕುರಿತು ರೈತರು ಕಳೆದ ಒಂದು ವಾರದಿಂದ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಕುರಿತು ರೈತರೊಂದಿಗೆ ಚರ್ಚಿಸಿ ಪ್ರತಿಭಟನೆ ತಿಳಿಗೊಳಿಸಲು ಕೇಂದ್ರ ಸರ್ಕಾರವು ಇಂದು ಸಂಧಾನ ಸಭೆಯನ್ನು ಕರೆದಿತ್ತು. ಇದೀಗ ಸಭೆ ಮುಕ್ತಾಯವಾಗಿದ್ದು, ಡಿಸೆಂಬರ್ 5ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದೆಹಲಿ: ರೈತರೊಂದಿನ ಸಂಧಾನ ಸಭೆಗೂ ಮುನ್ನ ಅಮರೀಂದರ್, ಶಾ ಭೇಟಿ ದೆಹಲಿ: ರೈತರೊಂದಿನ ಸಂಧಾನ ಸಭೆಗೂ ಮುನ್ನ ಅಮರೀಂದರ್, ಶಾ ಭೇಟಿ

ನವೆಂಬರ್.26ರಿಂದ ರೈತರ ಪ್ರತಿಭಟನೆ ಆರಂಭಗೊಂಡಿದ್ದು, ಇದುವರೆಗೂ ನಡೆಸಿದ ಮೂರು ಸಂಧಾನ ಸಭೆಗಳು ವಿಫಲವಾಗಿವೆ. ದಂತೆ ಸಭೆ ನಡೆಸಿದ್ದರು. ಕೇಂದ್ರ ಸರ್ಕಾರವು ರೈತರ ಮುಂದಿಟ್ಟ ಪ್ರಸ್ತಾವನೆಗಳನ್ನು ರೈತ ಮುಖಂಡರು ನಿರಾಕರಿಸಿದ್ದು, ಸಂಧಾನ ಮಾತುಕತೆಯು ಮುರಿದು ಬಿದ್ದಿತ್ತು.

Talks Between Farmers And Centre Conclude Next Meeting To Be Held On December 5

ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ವಿರುದ್ಧ ರೈತರು ನಡೆಸುತ್ತಿರುವ ದೆಹಲಿ ಚಲೋ ಪ್ರತಿಭಟನೆ 8ನೇ ದಿನಕ್ಕೆ ಕಾಲಿಟ್ಟಿದ್ದು ರೈತರು ದಿನದಿಂದ ದಿನಕ್ಕೆ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.

ಇಂದು ದೆಹಲಿ ಪೊಲೀಸರು ಭದ್ರತೆ ವ್ಯವಸ್ಥೆಯನ್ನು ತೀವ್ರಗೊಳಿಸಿದ್ದು ನಗರಕ್ಕೆ ಬಂದು ಹೋಗುವ ಪ್ರಯಾಣಿಕರಿಗೆ ಬದಲಿ ಮಾರ್ಗಗಳನ್ನು ಸೂಚಿಸಿದ್ದಾರೆ. ರಾಜಧಾನಿಯಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗಿರುವುದರಿಂದ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ನಿನ್ನೆ ಪ್ರತಿಭಟನಾನಿರತ ರೈತರು ಕೇಂದ್ರ ಸರ್ಕಾರ ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ಮತ್ತು ನೂತನ ಕೃಷಿ ಮಸೂದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದರು.

ಇಲ್ಲದಿದ್ದರೆ ದೆಹಲಿಯಲ್ಲಿ ಬೇರೆ ರಸ್ತೆಗಳನ್ನು ತಡೆಮಾಡಿ ಕೇಂದ್ರ ಸರ್ಕಾರ ತಮ್ಮ ಒತ್ತಾಯಕ್ಕೆ ಮಣಿಯದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.

English summary
The meeting of farmer leaders with the central government concludes. Next meeting to be held on December 5.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X