• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸೋನಿಯಾ ಗಾಂಧಿ ಭೇಟಿಯಾದ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್

|
Google Oneindia Kannada News

ನವದೆಹಲಿ, ಜೂನ್ 18: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಂಧಿಯವರನ್ನು ಭೇಟಿಯಾದರು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ನಾನು ತಮಿಳುನಾಡು ಸಿಎಂ ಸ್ಟಾಲಿನ್ ಮತ್ತು ಅವರ ಪತ್ನಿ ದುರ್ಗಾವತಿ ಸ್ಟಾಲಿನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದಾಗಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ರೆಮ್‌ಡೆವಿರ್, ಆಕ್ಸಿಜನ್ ಸಿಲಿಂಡರ್ ಅಕ್ರಮವಾಗಿ ಸಂಗ್ರಹಿಸುವವರ ವಿರುದ್ಧ ಗೂಂಡಾ ಕೇಸ್: ಸ್ಟಾಲಿನ್ರೆಮ್‌ಡೆವಿರ್, ಆಕ್ಸಿಜನ್ ಸಿಲಿಂಡರ್ ಅಕ್ರಮವಾಗಿ ಸಂಗ್ರಹಿಸುವವರ ವಿರುದ್ಧ ಗೂಂಡಾ ಕೇಸ್: ಸ್ಟಾಲಿನ್

ಸೋನಿಯಾ ಅವರ ಜೊತೆ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ಸ್ಟಾಲಿನ್ ರಾಹುಲ್ ಗಾಂಧಿ ಅವರ ಜೊತೆ ಚರ್ಚಿಸಿದ್ದಾರೆ. ತಮಿಳು ನಾಡು ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚಿಸಲಾಯಿತು.

ಮೈತ್ರಿ ಪಾಲುದಾರರಾಗಿರುವ ಕಾಂಗ್ರೆಸ್ ಜೊತೆ, ರಾಜ್ಯ ಸರ್ಕಾರದ ಹೊಸ ಯೋಜನೆಗಳು, ಮತ್ತು ನೀತಿಗಳ ಬಗ್ಗೆ ಚರ್ಚಿಸಲಾಗಿದೆ ಎನ್ನಲಾಗಿದೆ.

ತಮಿಳುನಾಡು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಡಿಎಂಕೆ ಜತೆ ಮೈತ್ರಿ ಮಾಡಿಕೊಂಡಿತ್ತು. ಚುನಾವಣೆಯಲ್ಲಿ ಡಿಎಂಕೆ ಭರ್ಜರಿ ಜಯ ಗಳಿಸಿದ ಬಳಿಕ ಇದೇ ಮೊದಲ ಬಾರಿಗೆ ಸ್ಟಾಲಿನ್ ಮತ್ತು ರಾಹುಲ್ ಗಾಂಧಿ ಚರ್ಚೆ ನಡೆಸಿದ್ದಾರೆ.

ಕೋವಿಡ್ ಪರಿಸ್ಥಿತಿ ನಿರ್ವಹಣೆ ಹಾಗೂ ರಾಜ್ಯಕ್ಕೆ ಅಗತ್ಯವಿರುವ ಹಣಕಾಸು ನೆರವಿನ ಹಿನ್ನೆಲೆ ಎಂಕೆ ಸ್ಟಾಲಿನ್ ಇಂದು ಪ್ರಧಾನಿ ನರೇಂದ್ರ ಮೋದಿಯವರ ಬಳಿಯೂ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ಮೈತ್ರಿ ಪಾಲುದಾರರಾಗಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿನ ನೂತನ ಸರ್ಕಾರದ ಹೊಸ ಯೋಜನೆಗಳು ಮತ್ತು ನೀತಿಗಳ ಬಗ್ಗೆ ಸೋನಿಯಾ ಗಾಂಧಿ ಜತೆ ಚರ್ಚೆ ನಡೆಸಲಾಯಿತು ಎಂಬುದು ತಿಳಿದುಬಂದಿದೆ.

English summary
Tamil Nadu Chief Minister and DMK president MK Stalin today met Congress chief Sonia Gandhi at her residence, where Rahul Gandhi was also present. The Congress is DMK's junior partner in their alliance in Tamil Nadu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X