Breaking: ತೀಸ್ತಾ ಜಾಮೀನು ಅರ್ಜಿ; ಗುಜರಾತ್ ಸರ್ಕಾರಕ್ಕೆ ಸುಪ್ರೀಂ ನೋಟಿಸ್
ನವದೆಹಲಿ, ಆಗಸ್ಟ್ 22: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯ ಕುರಿತು ಗುಜರಾತ್ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ನೀಡಿದೆ.
ಆಗಸ್ಟ್ 25 ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ. ನ್ಯಾಯಮೂರ್ತಿ ಯು ಯು ಲಲಿತ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ತೀಸ್ತಾ ಸೆಟಲ್ವಾಡ್ ಮನವಿಗೆ ರಾಜ್ಯಕ್ಕೆ ನೋಟಿಸ್ ಜಾರಿ ಮಾಡಿದೆ.
2002 ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ ಮುಗ್ಧರನ್ನು ಬಂಧಿಸಲು ಪಿತೂರಿ ಮತ್ತು ಸಾಕ್ಷ್ಯವನ್ನು ನಿರ್ಮಿಸಿದ ಆರೋಪದಲ್ಲಿ ತೀಸ್ತಾ ಸೆಟಲ್ವಾಡ್ ಅವರನ್ನು ಜೂನ್‌ನಲ್ಲಿ ಬಂಧಿಸಲಾಗಿದೆ.

ಕಳೆದ ಆಗಸ್ಟ್ 3 ರಂದು ಗುಜರಾತ್ ಹೈಕೋರ್ಟ್ ತೀಸ್ತಾ ಜಾಮೀನು ಅರ್ಜಿಯ ಕುರಿತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ಸೆಪ್ಟೆಂಬರ್ 19 ರಂದು ಪ್ರಕರಣದ ವಿಚಾರಣೆಯನ್ನು ನಿಗದಿಪಡಿಸಿತ್ತು.
ಇದಕ್ಕೂ ಮೊದಲು, ಜುಲೈ 30 ರಂದು, ಅಹಮದಾಬಾದ್‌ನ ಸೆಷನ್ಸ್ ನ್ಯಾಯಾಲಯವು ಪ್ರಕರಣದಲ್ಲಿ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್‌ಬಿ ಶ್ರೀಕುಮಾರ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು. ಇವರನ್ನು ಬಿಡುಗಡೆ ಮಾಡಿದರೆ ಒಬ್ಬ ವ್ಯಕ್ತಿಯು ನಿರ್ಭಯವಾಗಿ ಆರೋಪಗಳನ್ನು ಮಾಡಿ ತಪ್ಪಿಸಿಕೊಳ್ಳಬಹುದು ಎಂಬ ಸಂದೇಶವನ್ನು ನೀಡುತ್ತದೆ ಎಂದು ಹೇಳಿದ್ದರು.
ಜೂನ್‌ನಲ್ಲಿ ಬಂಧಿತರಾದ ಸೆಟಲ್ವಾಡ್ ಮತ್ತು ಶ್ರೀಕುಮಾರ್, ಗೋಧ್ರಾ ನಂತರದ ಗಲಭೆ ಪ್ರಕರಣಗಳಲ್ಲಿ "ಮುಗ್ಧರನ್ನು" ಬಂಧಿಸಲು ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪವನ್ನು ಹೊಂದಿದ್ದಾರೆ.

ಪ್ರಕರಣದ ಮೂರನೇ ಆರೋಪಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾದಾಗ ಸಂಜೀವ್ ಭಟ್ ಈಗಾಗಲೇ ಮತ್ತೊಂದು ಕ್ರಿಮಿನಲ್ ಪ್ರಕರಣದಲ್ಲಿ ಜೈಲು ಸೇರಿದ್ದರು.
ತೀಸ್ತಾ ಸೆಟಲ್ವಾಡ್ ಅವರನ್ನು ಮುಂಬೈನ ಅವರ ನಿವಾಸದಲ್ಲಿ ಜೂನ್ 25, ಶನಿವಾರ ಸಂಜೆ ಗುಜರಾತ್‌ನ ಎಟಿಎಸ್ ಪೊಲೀಸರು ಬಂಧಿಸಿದ್ದರು. 2002ರ ಗಲಭೆ ಸಂಬಂಧ ನರೇಂದ್ರ ಮೋದಿಗೆ ದೋಷಮುಕ್ತಗೊಳಿಸಲಾಗಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದ ಒಂದು ದಿನ ಬಳಿಕ ಈ ಬೆಳವಣಿಗೆಯಾಗಿತ್ತು.
ಮುಂಬೈನವರಾದ ತೀಸ್ತಾ ನಾಗರಿಕ ಹಕ್ಕು ಹೋರಾಟಗಾರ್ತಿ ಮತ್ತು ಪತ್ರಕರ್ತೆ. 2002ರ ಗುಜರಾತ್ ಗಲಭೆ ವೇಳೆ ಕೋಮುಗಲಭೆಗಳಿಗೆ ಸರಕಾರಿ ಯಂತ್ರಗಳೇ ಪ್ರಚೋದನೆ ಮತ್ತು ಕುಮ್ಮಕ್ಕು ನೀಡಿದವು ಎಂಬುದು ಇವರು ಮಾಡಿದ ಪ್ರಮುಖ ಆರೋಪ.
ತೀಸ್ತಾ ಸೆಟಲ್ವಾಡ್ ಅವರ 'ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ (CJP- Citizens For Justice and Peace)" ಎಂಬ ಎನ್‌ಜಿಒ ಸಂಸ್ಥೆ ಇದೆ. ಇದು 2002ರ ಗುಜರಾತ್ ಗಲಭೆಯಲ್ಲಿ ಸಂತ್ರಸ್ತರಾದವರಿಗೆ ನ್ಯಾಯ ಒದಗಿಸಲೆಂದು ಮತ್ತು ಕೋರ್ಟ್‌ಗಳಲ್ಲಿ ವಕಲಾತು ವಹಿಸಲೆಂದು ಹುಟ್ಟುಹಾಕಿದ ಸಂಸ್ಥೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications