ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಪ್ರತಿಭಟನೆ:3 ಗಡಿ ಪ್ರದೇಶಗಳಲ್ಲಿ ಮತ್ತೆ ತಾತ್ಕಾಲಿಕವಾಗಿ ಇಂಟರ್ನೆಟ್ ಸೇವೆ ಸ್ಥಗಿತ

|
Google Oneindia Kannada News

ನವದೆಹಲಿ,ಫೆಬ್ರವರಿ 06: ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಪರಿಣಾಮ ಮೂರು ಗಡಿ ಪ್ರದೇಶಗಳಲ್ಲಿ ಮತ್ತೆ ಇಂಟರ್‌ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ರೈತರ ಛಕ್ಕಾ ಜಾಮ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿರುವುದಾಗಿ ಮತ್ತೊರ್ವ ಅಧಿಕಾರಿ ತಿಳಿಸಿದ್ದಾರೆ.ಈ ಹಿಂದೆ ಸಿಂಘು, ಗಾಜಿಪುರ ಮತ್ತು ಟಿಕ್ರಿ ಗಡಿ ಹಾಗೂ ಅವುಗಳಿಗೆ ಹೊಂದಿಕೊಂಡಂತಿರುವ ಪ್ರದೇಶಗಳಲ್ಲಿ ಜನವರಿ 31 ರಾತ್ರಿಯಿಂದ ಫೆಬ್ರವರಿ 2ರ ರಾತ್ರಿ 11 ಗಂಟೆಯವರೆಗೂ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.

Farmers protest

ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಸಿಂಘು, ಗಾಜಿಪುರ ಮತ್ತು ಟ್ರಿಕ್ರಿ ಗಡಿ ಭಾಗಗಳಲ್ಲಿ ಛಕ್ಕಾ ಜಾಮ್ಪ್ರತಿಭನೆ ಹಿನ್ನೆಲೆಯಲ್ಲಿ ಇಂದು ರಾತ್ರಿಯವರೆಗೂ 24 ಗಂಟೆಗಳ ಕಾಲ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಿ ಗೃಹ ವ್ಯವಹಾರಗಳ ಸಚಿವಾಲಯ ಆದೇಶ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಮುಗಿದ ಛಕ್ಕಾ ಜಾಮ್; ಕೇಂದ್ರಕ್ಕೆ ಅಕ್ಟೋಬರ್‌ 2ರವರೆಗೂ ಗಡುವು ನೀಡಿದ ರೈತರುಮುಗಿದ ಛಕ್ಕಾ ಜಾಮ್; ಕೇಂದ್ರಕ್ಕೆ ಅಕ್ಟೋಬರ್‌ 2ರವರೆಗೂ ಗಡುವು ನೀಡಿದ ರೈತರು

ಟೆಲಿಕಾಂ ಸೇವೆಗಳ ತಾತ್ಕಾಲಿಕ ಅಮಾನತು (ಸಾರ್ವಜನಿಕ ತುರ್ತು ಅಥವಾ ಸಾರ್ವಜನಿಕ ಸುರಕ್ಷತೆ) ನಿಯಮಗಳು 2017ರ ಅಡಿಯಲ್ಲಿ ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಮೂರು ಪ್ರದೇಶಗಳಲ್ಲದೇ, ಇವುಗಳನ್ನು ಹೊಂದಿಕೊಂಡಂತಿರುವ ಪ್ರದೇಶಗಳಲ್ಲಿಯೂ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

English summary
The Ministry of Home Affairs has ordered the suspension of internet services at Singhu, Ghazipur and Tikri borders of Delhi, where farmers have been protesting against the new farm laws, for 24 hours till Saturday night in the wake of their 'chakka jam' call, officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X