ಭಾರತ ಬಂದ್‌ಗೆ 10 ಕಾರ್ಮಿಕ ಸಂಘಟನೆಗಳ ಬೆಂಬಲ
ನವದೆಹಲಿ, ಡಿಸೆಂಬರ್ 08: ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ರೈತರು ಕರೆ ಕೊಟ್ಟಿರುವ ಭಾರತ ಬಂದ್‌ಗೆ ಹತ್ತು ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿವೆ.
ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್, ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್, ಹಿಂದ್ ಮಜ್ದೂರ್ ಸಭಾ, ಭಾರತೀಯ ಕಾರ್ಮಿಕ ಸಂಘಗಳ ಕೇಂದ್ರ, ಅಖಿಲ ಭಾರತ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್, ಟ್ರೇಡ್ ಯೂನಿಯನ್ ಕೋಆರ್ಡಿನೇಷನ್ ಸೆಂಟರ್, ಸ್ವಯಂ ಉದ್ಯೋಗಿ ಮಹಿಳಾ ಸಂಘ, ಅಖಿಲ ಭಾರತ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್, ಲೇಬರ್ ಪ್ರೋಗ್ರೆಸ್ಸಿವ್ ಫೆಡರೇಶನ್ ಮತ್ತು ಯುನೈಟೆಡ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಭಾರತ್ ಬಂದ್ ಗೆ ಬೆಂಬಲ ನೀಡಿವೆ.
ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಇಳಿಯುವುದಿಲ್ಲ ಮತ್ತು ಕೆಲಸದಿಂದ ದೂರವಿರುವುದಿಲ್ಲ. ಆದರೆ ರೈತರ ಆಂದೋಲನವನ್ನು ಬೆಂಬಲಿಸುತ್ತವೆ ಎಂದು ಹಿಂದ್ ಮಜ್ದೂರ್ ಸಭಾ ಪ್ರಧಾನ ಕಾರ್ಯದರ್ಶಿ ಹರ್ಭಜನ್ ಸಿಂಗ್ ಸಿಧು ಅವರು ತಿಳಿಸಿದ್ದಾರೆ.

ಕಾರ್ಮಿಕರು ನಾಳೆ ಭಾರತ ಬಂದ್ ಬೆಂಬಲಿಸಿ ಕರ್ತವ್ಯದಲ್ಲಿರುವಾಗ ಕಪ್ಪು ಪಟ್ಟಿಗಳನ್ನು ಧರಿಸಲಿದ್ದಾರೆ ಮತ್ತು ಕೆಲಸದ ಸಮಯದ ನಂತರ ಅಥವಾ ಮೊದಲು ವೇದಿಕೆಯು ಪ್ರತಿಭಟನೆ ಮತ್ತು ಮೆರವಣಿಗೆಗಳನ್ನು ನಡೆಸಲಿದೆ ಎಂದು ಅವರು ಹೇಳಿದ್ದಾರೆ.
ಭಾರತ ಬಂದ್‌ದಿನ ಅಗತ್ಯ ವಸ್ತುಗಳಿಗೆ ವಿನಾಯಿತಿ ಇದೆ. ಆಸ್ಪತ್ರೆ, ಮೆಡಿಕಲ್ ಶಾಪ್, ದಿನಸಿ ಅಂಗಡಿಗಳು, ಹಾಲು ದೊರೆಯುತ್ತದೆ ಮತ್ತು ಬಿಎಂಟಿಸಿ, ಕೆಎಸ್ಆರ್‌ಟಿಸಿ ಬಸ್ ಸಂಚಾರ ಎಂದಿನಂತೆ ಇರುತ್ತದೆ.
ಆಟೋ ಮತ್ತು ಟ್ಯಾಕ್ಸಿ ಯೂನಿಯನ್‌ಗಳು ಭಾರತ್ ಬಂದ್ ಬೆಂಬಲಿಸಿರುವುದರಿಂದ ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆ ಉಂಟಾಗಬಹುದು. ಅಲ್ಲದೆ ಬ್ಯಾಂಕ್ ಒಕ್ಕೂಟಗಳು ರೈತರಿಗೆ ಬೆಂಬಲ ನೀಡಿದ್ದು, ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರಬಹುದು.
ಎಂಪಿಎಂಸಿಯ ಕೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಬಂದ್‌ಗೆ ಬೆಂಬಲ ಕೊಟ್ಟಿದ್ದು ವ್ಯಾಪಾರ ವಹಿವಾಟು ಸ್ಥಗಿತವಾಗುವ ನಿರೀಕ್ಷೆ ಇದೆ.












Click it and Unblock the Notifications