Breaking: ಪಂಚ ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಇಂದು ಪ್ರಕಟ

ನವದೆಹಲಿ, ಜನವರಿ 8: ಕೇಂದ್ರ ಚುನಾವಣಾ ಆಯೋಗವು ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಶನಿವಾರ (ಜ.8) ಮಧ್ಯಾಹ್ನ 3.30ಕ್ಕೆ ಪ್ರಕಟಿಸಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿಯೇ ಕೇಂದ್ರ ಚುನಾವಣಾ ಆಯೋಗ 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.

ಚುನಾವಣಾ ಆಯೋಗದ ಅಧಿಕಾರಿಗಳು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಜೊತೆ ಗುರುವಾರ ಮಹತ್ವದ ಸಭೆ ನಡೆಸಿದ್ದು, ರಾಜ್ಯಗಳಲ್ಲಿನ ಕೋವಿಡ್ ಪರಿಸ್ಥಿತಿ ಕುರಿತು ಮಾಹಿತಿಯನ್ನು ಪಡೆದರು.

The Announcement of the 5 States Assembly Election Date at 3.30 pm Today

403 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಹಲವು ಹಂತಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ.

ಉತ್ತರ ಪ್ರದೇಶ (403), ಗೋವಾ (40), ಪಂಜಾಬ್ (117), ಉತ್ತರಾಖಂಡ (70), ಮಣಿಪುರ (60) ರಾಜ್ಯಗಳ ವಿಧಾನಸಭೆ ಚುನಾವಣೆ ಫೆಬ್ರವರಿ ಅಂತ್ಯ ಅಥವಾ ಮಾರ್ಚ್‌ ತಿಂಗಳಿನಲ್ಲಿ ನಡೆಯಬೇಕಿದೆ.

Recommended Video

      ಪಾಸಿಟಿವಿಟಿ ರೇಟ್ ಹೆಚ್ಚಳ - ಲಾಕ್ ಡೌನ್ ಆತಂಕ ಶುರು! | Oneindia Kannada
      The Announcement of the 5 States Assembly Election Date at 3.30 pm Today

      ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಆರೋಗ್ಯ ಸಚಿವಾಲಯದ ಜೊತೆ ಚರ್ಚಿಸಿರುವ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಣೆ ಮಾಡಲಿದೆ. ಗುರುವಾರ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಮತ್ತು ತಜ್ಞರ ಜೊತೆ ಚುನಾವಣಾ ಆಯೋಗದ ಅಧಿಕಾರಿಗಳು ಸಭೆ ನಡೆಸಿದ್ದರು. ಚುನಾವಣೆ ನಡೆಯುವ 5 ರಾಜ್ಯಗಳಲ್ಲಿ ಲಸಿಕೆ ನೀಡುವ ಕುರಿತು ಹೆಚ್ಚು ಗಮನ ಹರಿಸಬೇಕು ಎಂದು ಆಯೋಗ ಹೇಳಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+