ಸುಪ್ರೀಂಕೋರ್ಟ್‌ನಲ್ಲಿ ಸ್ಫೋಟ ನಡೆಸುವುದಾಗಿ ಬೆದರಿಕೆ ಪತ್ರ
ನವದೆಹಲಿ, ಆಗಸ್ಟ್ 18 : ಸುಪ್ರೀಂಕೋರ್ಟ್ ಆವರಣದಲ್ಲಿ ಸ್ಫೋಟ ನಡೆಸುತ್ತೇವೆ ಎಂಬ ಅನಾಮಿಕ ಪತ್ರವೊಂದು ಬಂದಿದ್ದು, ದೆಹಲಿ ಪೊಲೀಸರು ಕೋರ್ಟ್‌ಗೆ ಭದ್ರತೆ ಹೆಚ್ಚಿಸಿದ್ದಾರೆ. ಕೆಲವು ದಿನಗಳ ಹಿಂದೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೆ ಜೀವ ಬೆದರಿಕೆ ಪತ್ರ ಬಂದಿತ್ತು.
ಮಂಗಳವಾರ ಇ ಮೇಲ್ ಮೂಲಕ ಸುಪ್ರೀಂಕೋರ್ಟ್ ಆವರಣದಲ್ಲಿ ಸ್ಫೋಟ ನಡೆಸುವುದಾಗಿ ಬೆದರಿಕೆ ಪತ್ರ ಬಂದಿದೆ. ಅನಾಮಧೇಯ ಇ ಮೇಲ್ ಐಡಿಯಿಂದ ಬಂದ ಪತ್ರದ ಬಗ್ಗೆ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದು ಹುಸಿ ಬಾಂಬ್ ಪತ್ರವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಬೆದರಿಕೆ ಪತ್ರದ ಹಿನ್ನಲೆಯಲ್ಲಿ ದೆಹಲಿ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ, ಸುಪ್ರೀಂಕೋರ್ಟ್‌ಗೆ ಭದ್ರತೆಯನ್ನು ಹೆಚ್ಚಿಸಿದ್ದಾರೆ, ಕೋರ್ಟ್ ಪ್ರವೇಶಿಸುವ ದ್ವಾರಗಳಲ್ಲಿ ತಪಾಸಣೆಯನ್ನು ನಡೆಸಲಾಗುತ್ತಿದೆ. ಪತ್ರ ಬಂದಿದ್ದು ಎಲ್ಲಿಂದ ಎಂಬ ಬಗ್ಗೆಯೂ ತನಿಖೆ ಕೈಗೊಂಡಿದ್ದಾರೆ. [ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ]
ನ್ಯಾಯಮೂರ್ತಿಗಳಿಗೆ ಬೆದರಿಕೆ ಬಂದಿತ್ತು : ಆಗಸ್ಟ್ 7ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿಗೆ ಜೀವ ಬೆದರಿಕೆ ಪತ್ರ ಬಂದಿತ್ತು. ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್ ಗಲ್ಲು ಶಿಕ್ಷೆ ತೀರ್ಪು ನೀಡಿದ್ದ ನ್ಯಾ.ದೀಪಕ್ ಮಿಶ್ರಾ ಅವರಿಗೆ ಬೆದರಿಕೆ ಪತ್ರ ಬಂದ ಹಿನ್ನಲೆಯಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು.
ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಚ್.ಎಲ್.ದತ್ತು ಅವರು ರಚನೆ ಮಾಡಿದ್ದ ತ್ರಿ ಸದಸ್ಯ ಪೀಠದಲ್ಲಿ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಪ್ರಫುಲ್ಲಾ ಸಿ ಪಂತ್ ಹಾಗೂ ಅಮಿತಾವ್ ರಾಯ್ ಅವರಿದ್ದರು. ಯಾಕೂಬ್ ಗಲ್ಲು ಶಿಕ್ಷೆಗೆ ತಡೆ ನೀಡುವ ಅರ್ಜಿಯ ವಿಚಾರಣೆಯನ್ನು ತಡರಾತ್ರಿ ಕೋರ್ಟ್‌ನಲ್ಲಿ ನಡೆಸಿ, ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಆದೇಶ ನೀಡಿದ್ದರು.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications