ಇಂದು ಉಕ್ರೇನ್‌ನಿಂದ ಭಾರತಕ್ಕೆ ಆಗಮಿಸಲಿವೆ ಮೂರು ವಿಮಾನಗಳು

ಹೊಸದಿಲ್ಲಿ ಮಾರ್ಚ್ 1: ಉಕ್ರೇನ್ ಮೇಲೆ ರಷ್ಯಾ ನಿರಂತರ ದಾಳಿಯಿಂದಾಗಿ ಉಕ್ರೇನ್ ಜನ ಭಯಭೀತರಾಗಿದ್ದಾರೆ. ಜೀವವನ್ನೇ ಗಟ್ಟಿ ಹಿಡಿದುಕೊಂಡು ರಕ್ಷಣೆಗಾಗಿ ಬೇಡಿಕೆ ಇಟ್ಟಿದ್ದಾರೆ. ಮಾತ್ರವಲ್ಲ ರಷ್ಯಾ ಉಕ್ರೇನ್ ಯುದ್ಧದಿಂದಾಗಿ ಹಲವಾರು ದೇಶಗಳಿಗೂ ತೊಂದರೆಯಾಗಿದೆ. ವಿದ್ಯಾಭ್ಯಾಸಕ್ಕಾಗಿ ಹಾಗೂ ಇನ್ನಿತರ ಕಾರಣಗಳಿಂದ ಉಕ್ರೇನ್‌ಗೆ ತೆರಳಿದವರು ತಮ್ಮ ತಾಯಿನಾಡಿಗೆ ಮರಳಲು ಸಾಧ್ಯವಾಗದೆ ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಹೀಗೆ ಸಾವಿರಾರು ಭಾರತೀಯರು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಇಂದು 3 ವಿಮಾನಗಳು ಭಾರತಕ್ಕೆ ಬರಲಿವೆ.

ಈಗಾಗಲೇ 1406 ವಿದ್ಯಾರ್ಥಿಗಳು ಭಾರತಕ್ಕೆ ಬಂದಿದ್ದಾರೆ. ಇಂದು 3 ವಿಮಾನಗಳು ಭಾರತಕ್ಕೆ ಬರಲಿವೆ. 6 ವಿಮಾನಗಳು ಈಗಾಗಲೇ ಬಂದಿದ್ದು ಆರನೇ ವಿಮಾನದಲ್ಲಿ ಐವರು ಕನ್ನಡಿಗರು ಇದ್ದರು. ಇನ್ನೂ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಸತತ ಪ್ರಯತ್ನ ನಡೆಸಿದೆ. ಜೊತೆಗೆ ಉಕ್ರೇನ್‌ಗೆ ಪರಿಹಾರ ಸಾಮಾಗ್ರಿಯನ್ನು ಸಾಗಿಸಲು ಯೋಚಿಸಿದೆ. ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಊಟಕ್ಕೂ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಭಾರತೀಯರಿಗೆ ಇಲ್ಲಿಂದಲೇ ಪರಿಹಾರ ಕಿಟ್ ಕಳುಹಿಸಲು ನಿರ್ಧರಿಸಲಾಗಿದ್ದು ಇಂದು ಮೊದಲ ಕಿಟ್ ಕಳುಹಿಸಲು ನಿರ್ಧರಿಸಲಾಗಿದೆ. ಒಟ್ಟಿನಲ್ಲಿ ಉಕ್ರೇನ್‌ ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಇನ್ನಿಲದ ಪ್ರಯತ್ನ ಮಾಡುತ್ತಿದೆ.

ಉಕ್ರೇನ್ ಬಿಕ್ಕಟ್ಟಿನ ಕುರಿತು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ ಮತ್ತೊಂದು ಉನ್ನತ ಮಟ್ಟದ ಸಭೆ ನಡೆಸಿದರು. ಈ ಸಭೆಯಲ್ಲಿ ಯುದ್ಧ ಪೀಡಿತ ಪ್ರದೇಶಗಳಿಂದ ಭಾರತೀಯ ನಾಗರಿಕರ ಸುರಕ್ಷಿತ ವಾಪಸಾತಿಗೆ ಒತ್ತು ನೀಡಲಾಯಿತು. ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೇರಿದಂತೆ ಹಿರಿಯ ಸಚಿವರು ಸಭೆಯಲ್ಲಿ ಉಪಸ್ಥಿತರಿದ್ದರು. ಉಕ್ರೇನ್ ಮತ್ತು ರಷ್ಯಾ ನಡುವೆ ನಡೆಯುತ್ತಿರುವ ಯುದ್ಧದ ಕುರಿತು ಪ್ರಧಾನಿ ನೇತೃತ್ವದಲ್ಲಿ ಇದು ಎರಡನೇ ಸಭೆಯಾಗಿದೆ. ಅಲ್ಲಿರುವ ಎಲ್ಲಾ ಭಾರತೀಯರು ಸುರಕ್ಷಿತವಾಗಿರಲು ಮತ್ತು ಅವರು ಸುರಕ್ಷಿತವಾಗಿ ದೇಶಕ್ಕೆ ಮರಳಲು ಸಂಪೂರ್ಣವಾಗಿ ಸರ್ಕಾರ ಹಗಲಿರುಳು ಶ್ರಮಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Three Flights Are Scheduled to Arrive in India From Ukraine Today

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದು, "ನಾಲ್ವರು ಹಿರಿಯ ಸಚಿವರು ತಮ್ಮ ವಿಶೇಷ ಪ್ರತಿನಿಧಿಗಳನ್ನು ವಿವಿಧ ದೇಶಗಳಿಗೆ ಕಳುಹಿಸಿದ್ದರಿಂದ ನಾಗರಿಕರನ್ನು ಸ್ಥಳಾಂತರಿಸುವ ಪ್ರಯತ್ನಗಳನ್ನು ತೀವ್ರಗೊಳಿಸಲಾಗುವುದು" ಎಂದು ಹೇಳಿದ್ದಾರೆ. ಸರ್ಕಾರ ಈ ವಿಷಯಕ್ಕೆ ಎಷ್ಟು ಆದ್ಯತೆ ನೀಡುತ್ತಿದೆ ಎಂಬುದನ್ನು ಇದು ತೋರಿಸುತ್ತದೆ. ಉಕ್ರೇನ್ ಗಡಿಯಲ್ಲಿನ ಮಾನವೀಯ ಪರಿಸ್ಥಿತಿಯನ್ನು ಎದುರಿಸಲು ಪರಿಹಾರ ಸಾಮಗ್ರಿಗಳ ಮೊದಲ ಸಾಗಣೆಯನ್ನು ಇಂದು ಉಕ್ರೇನ್‌ಗೆ ಕಳುಹಿಸಲಾಗುವುದು ಎಂದು ಪ್ರಧಾನಿ ಹೇಳಿದರು.

Three Flights Are Scheduled to Arrive in India From Ukraine Today

ಜಗತ್ತು ಒಂದೇ ಕುಟುಂಬ ಎಂಬ ಭಾರತದ ಧ್ಯೇಯವಾಕ್ಯದಡಿಯಲ್ಲಿ, ಉಕ್ರೇನ್‌ನಲ್ಲಿ ಸಿಲುಕಿರುವ ನೆರೆಯ ದೇಶಗಳು ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳ ಜನರಿಗೆ ಭಾರತ ಸಹಾಯ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಮಾನವೀಯ ನೆರವಿನ ಅಡಿಯಲ್ಲಿ ಪರಿಹಾರ ಸಾಮಗ್ರಿಗಳ ಮೊದಲ ರವಾನೆಯನ್ನು ಇಂದು ಉಕ್ರೇನ್ ಗಡಿಗಳಿಗೆ ಕಳುಹಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಅರಿಂದಮ್ ಬಾಗ್ಚಿ ಮಾತನಾಡಿ, 'ಜಗತ್ತು ಒಂದೇ ಕುಟುಂಬ' ಎಂಬುದು ಭಾರತದ ಧ್ಯೇಯವಾಗಿದೆ. ಇದರಿಂದ ಪ್ರೇರಿತರಾದ ಪ್ರಧಾನಿ ಮೋದಿ, ಉಕ್ರೇನ್‌ನಲ್ಲಿ ಸಿಲುಕಿರುವ ಅಭಿವೃದ್ಧಿಶೀಲ ಮತ್ತು ನೆರೆಯ ರಾಷ್ಟ್ರಗಳ ನಾಗರಿಕರಿಗೂ ಭಾರತ ಸಹಾಯ ಮಾಡುತ್ತದೆ ಮತ್ತು ನೆರವು ಪಡೆಯಬಹುದು ಎಂದು ಹೇಳಿದರು.

ಉಕ್ರೇನ್ ಸರ್ಕಾರದ ಮನವಿಯ ಮೇರೆಗೆ ಭಾರತವು ಕೀವ್‌ಗೆ ವೈದ್ಯಕೀಯ ಮತ್ತು ಇತರ ಪರಿಹಾರ ಸಾಮಗ್ರಿಗಳನ್ನು ಕಳುಹಿಸುತ್ತದೆ ಎಂದು ಮೊದಲೇ ಘೋಷಿಸಲಾಗಿದೆ. ಈ ದಿಕ್ಕಿನಲ್ಲಿ ಮಾನವೀಯ ಆಧಾರದ ಮೇಲೆ ಕೆಲಸ ಮಾಡಲಾಗುತ್ತಿದೆ. ಮತ್ತೊಂದೆಡೆ, ಪಿಎಂ ನರೇಂದ್ರ ಮೋದಿ ಅವರು ರೊಮೇನಿಯಾ ಮತ್ತು ಸ್ಲೋವಾಕಿಯಾದಲ್ಲಿರುವ ತಮ್ಮ ಸಹವರ್ತಿಗಳೊಂದಿಗೆ ಮಾತನಾಡಿದ್ದಾರೆ ಮತ್ತು ಉಕ್ರೇನ್‌ನಿಂದ ಭಾರತೀಯರನ್ನು ಸ್ಥಳಾಂತರಿಸಲು ನೀಡಿದ ಸಹಾಯಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಿದರು. ಜೊತೆಗೆ ಭಾರತೀಯರಿಗೆ ವೀಸಾಗಳಿಲ್ಲದೆ ದೇಶದ ಭೂಪ್ರದೇಶವನ್ನು ಪ್ರವೇಶಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಮೋದಿ ರೊಮೇನಿಯಾದ ಪ್ರಧಾನಿಗೆ ಧನ್ಯವಾದ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+