Get Updates
Get notified of breaking news, exclusive insights, and must-see stories!

ರಾಜ್ಯಸಭೆ ಪ್ರವೇಶಿಸದಂತೆ ಟಿಎಂಸಿ ಸಂಸದರಿಗೆ ತಡೆ; ಇದೆಂಥಾ ಪ್ರಜಾಪ್ರಭುತ್ವವೇ?

ನವದೆಹಲಿ, ಆಗಸ್ಟ್ 5: ರಾಜ್ಯಸಭೆ ಕಲಾಪ ಮುಂದೂಡಿಕೆ ನಂತರದಲ್ಲಿ ಮೇಲ್ಮನೆ ಪ್ರವೇಶಿಸುವುದಕ್ಕೆ ಮುಂದಾದ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದರನ್ನು ತಡೆ ಹಿಡಿಯುವುದು ಎಂಥಾ ಪ್ರಜಾಪ್ರಭುತ್ವ ಎಂದು ಟಿಎಂಸಿ ಸಂಸದ ದೆರೆಕ್ ಒಬ್ರಿಯನ್ ಪ್ರಶ್ನೆ ಮಾಡಿದ್ದಾರೆ.

"ಸತ್ಯವೆಂದರೆ, ಆಗಸ್ಟ್ 4ರಂದು ಬೆಳಗ್ಗೆ 11.10 ಗಂಟೆಗೆ ಪೆಗಾಸಸ್ ಬೇಹುಗಾರಿಕೆಗೆ ಸಂಬಂಧಿಸಿದಂತೆ ಚರ್ಚಿಸಲು ಕೇಂದ್ರ ಸರ್ಕಾರ ನಿರಾಕರಿಸಿದ ಹಿನ್ನೆಲೆ ವಿರೋಧ ಪಕ್ಷದ 30 ಸಂಸದರು ರಾಜ್ಯಸಭೆಯಲ್ಲಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. 11.13ಕ್ಕೆ ನಾಮಫಲಕವನ್ನು ತೋರಿದ 6 ಮಂದಿ ಟಿಎಂಸಿ ಸಂಸದರನ್ನು ಅಮಾನತುಗೊಳಿಸಲಾಯಿತು. 3.35ಕ್ಕೆ ಸದನವನ್ನು ಮರುದಿನಕ್ಕೆ ಮುಂದೂಡಲಾಯಿತು. ಈ ವೇಳೆ ರಾಜ್ಯಸಭೆಗೆ ಮರು ಪ್ರವೇಶಿಸಲು ಪ್ರಯತ್ನಿಸಿದ 3 ಟಿಎಂಸಿ ಸಂಸದೆಯರನ್ನು ಪುರುಷ ಮಾರ್ಷಲ್ ತಡೆದಿದ್ದು, ನಿಜವಾದ ಪ್ರಜಾಪ್ರಭುತ್ವವೇ?," ಎಂದು ಟಿಎಂಸಿ ಸಂಸದ ದೆರೆಕ್ ಒಬ್ರಿಯನ್ ಟ್ವೀಟ್ ಮಾಡಿದ್ದಾರೆ. ಈ ಕುರಿತು ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

ಇಸ್ರೇಲಿನ ಪೆಗಾಸಸ್ ತಂತ್ರಾಂಶವನ್ನು ಬಳಸಿ ಬೇಹುಗಾರಿಕೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಗದ್ದಲ ಸೃಷ್ಟಿಸಿದ ತೃಣಮೂಲ ಕಾಂಗ್ರೆಸ್ ಪಕ್ಷದ ಆರು ಸಂಸದರನ್ನು ಅಮಾನತುಗೊಳಿಸಲಾಗಿದೆ. ಆಗಸ್ಟ್ 13ರವರೆಗೂ ನಡೆಯಲಿರುವ ಮುಂಗಾರು ಅಧಿವೇಶನದಿಂದ ದೂರ ಇರುವಂತೆ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಸೂಚನೆ ನೀಡಿದ್ದರು.

TMCs Suspended MPs stopped from re-entering Parliament, this is Democracy?, Derek OBrien Question

ರಾಜ್ಯಸಭೆಯಿಂದ ಅಮಾನತುಗೊಂಡ ಸಂಸದರು:

ರಾಜ್ಯಸಭೆಯಲ್ಲಿ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಕುರ್ಚಿಗಳನ್ನು ಎಳೆದಾಡಿ, ನಾಮಫಲಕಗಳನ್ನು ಪ್ರದರ್ಶಿಸುತ್ತಾ ಗದ್ದಲ ಸೃಷ್ಟಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಡೋಲಾ ಸೇನ್, ಮೊಹಮ್ಮದ್ ನಬೀಮುಲ್, ಅಬಿರ್ ರಂಜನ್ ಬಿಸ್ವಾಸ್, ಶಾಂತ ಛೆತ್ರಿ, ಅರ್ಪಿತಾ ಘೋಷ್, ಮೌಸಮ್ ನೂರ್ ಎಂಬ ಆರು ಸಂಸದರನ್ನು ಅಮಾನತುಗೊಳಿಸಲಾಗಿದೆ. ರಾಜ್ಯಸಭೆ ಕಲಾಪದ ಸಂದರ್ಭದಲ್ಲಿ ಆರು ಮಂದಿ ಟಿಎಂಸಿ ಸಂಸದರ ನಡವಳಿಕೆ ಸರಿಯಾಗಿರಲಿಲ್ಲ. ಆದ್ದರಿಂದ ಅವರನ್ನು ಗೌರವಾನ್ವಿತ ಅಧ್ಯಕ್ಷರು ನಿಯಮ 255ರ ಅಡಿಯಲ್ಲಿ ಕೌನ್ಸಿಲ್‌ನಿಂದ ತಕ್ಷಣವೇ ಹಿಂತೆಗೆದುಕೊಳ್ಳುವಂತೆ ನಿರ್ದೇಶಿಸಲಾಗಿದೆ" ಎಂದು ಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಧಾನಿ ಮೋದಿ ಸರ್ಕಾರ ಸೋಲನ್ನು ಒಪ್ಪಿಕೊಂಡಿದೆ:

"ನಮ್ಮ ಸಂಸದರ ಮೇಲಿನ ದೌರ್ಜನ್ಯವನ್ನು ನೋಡತ್ತಿದ್ದರೆ ಭಾರತೀಯ ಜನತಾ ಪಕ್ಷ ಮತ್ತು ಅದರ 56 ಇಂಚಿನ ಎದೆಯ ನಾಯಕರು ಸೋತಿರುವುದನ್ನು ಸ್ಪಷ್ಟವಾಗಿ ತೋರಿಸುತ್ತಿದೆ. ನೀವು ನಮ್ಮನ್ನು ಅಮಾನತುಗೊಳಿಸಬಹುದೇ ವಿನಃ, ನಮ್ಮ ಧ್ವನಿಯನ್ನು ಅಡಗಿಸುವುದಕ್ಕೆ ಸಾಧ್ಯವಿಲ್ಲ. ನಮ್ಮ ದೇಹದಲ್ಲಿ ರಕ್ತದ ಕೊನೆಯ ಹನಿಯವರಿಗೂ ಜನರು ಮತ್ತು ಸತ್ಯಕ್ಕಾಗಿ ನಡೆಸುತ್ತಿರುವ ನಮ್ಮ ಹೋರಾಟದಿಂದ ಒಂದೇ ಒಂದು ಹೆಜ್ಜೆ ಹಿಂದೆ ಸರಿಯುವುದಿಲ್ಲ," ಎಂದು ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

ಜುಲೈ 23ರಂದು ಟಿಎಂಸಿ ಸಂಸದ ಅಮಾನತು:

ಕಳೆದ ಜುಲೈ 23ರಂದು ರಾಜ್ಯಸಭೆಯ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯ ಸಂತಾನು ಸೇನ್ ಅಮಾನತುಗೊಂಡಿದ್ದರು. ರಾಜ್ಯಸಭೆಯಲ್ಲಿ ಇಸ್ರೇಲಿನ ಬೇಹುಗಾರಿಕೆ ತಂತ್ರಾಂಶ ಪೆಗಾಸಸ್ ಕುರಿತು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಉತ್ತರ ನೀಡುತ್ತಿದ್ದರು. ಈ ವೇಳೆ ಸಚಿವರ ಕೈಯಲ್ಲಿದ್ದ ಪತ್ರಗಳನ್ನು ಕಸಿದುಕೊಂಡ ಸಂಸದ ಸಂತಾನು ಸೇನ್ ಅದನ್ನು ಹರಿದು ಹಾಕಿದ್ದರು. "ಸದನದಲ್ಲಿ ನಡೆದ ಘಟನೆಗಳ ಬಗ್ಗೆ ನನಗೆ ತುಂಬಾ ನೋವಾಗುತ್ತದೆ. ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ಸಚಿವರ ಕೈಯಲ್ಲಿರುವ ಪತ್ರಗಳನ್ನು ಕಸಿದು ಹರಿದು ಹಾಕುವಷ್ಟು ಕೆಳಮಟ್ಟಕ್ಕೆ ಇಳಿದಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಇಂಥ ನಡುವಳಿಕೆಯು ಸಂಸದೀಯ ಪ್ರಜಾಪ್ರಭುತ್ವದ ಮೇಲಿನ ದಾಳಿ ಆಗಿರುತ್ತದೆ," ಎಂದು ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಬೇಸರ ವ್ಯಕ್ತಪಡಿಸಿದದ್ದರು.

ಸಂಸತ್ ಕಲಾಪದಲ್ಲಿ ಚರ್ಚೆ ನಡೆದಿದ್ದೇ 18 ಗಂಟೆ:

ಕಳೆದ ಜುಲೈ 19ರಿಂದ ಮುಂಗಾರು ಅಧಿವೇಶನ ಆರಂಭವಾಗಿದ್ದು, ಎರಡು ವಾರಗಳಲ್ಲಿ ಒಂದೇ ಒಂದು ದಿನ ಸುಗಮ ಕಲಾಪ ನಡೆದಿಲ್ಲ. ಒಟ್ಟು 107 ಗಂಟೆಗಳಲ್ಲಿ ಕೇವಲ 18 ಗಂಟೆ ಮಾತ್ರ ಸಂಸತ್ ಕಲಾಪ ನಡೆದಿದೆ. ಇದರ ಹೊರತಾಗಿ ಸಂಸತ್ತಿನಲ್ಲಿ ನಡೆದ ಗದ್ದಲ ಗಲಾಟೆಯಿಂದ ದೇಶದ 133 ಕೋಟಿ ತೆರಿಗೆದಾರರ ಹಣ ವ್ಯರ್ಥವಾಗಿ ಪೋಲಾಗುತ್ತಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಏನಿದು ಪೆಗಾಸಸ್ ಬೇಹುಗಾರಿಕೆ ಪ್ರಕರಣ?

ಜಾಗತಿಕ ತನಿಖಾ ಸಂಸ್ಥೆಗಳು ಮಾಡಿರುವ ವರದಿಯ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಮಾರಾಟವಾಗಿರುವ ಇಸ್ರೇಲಿನ ಬೇಹುಗಾರಿಕೆ ತಂತ್ರಾಂಶವನ್ನು ಬಳಸಿಕೊಂಡು ವಿರೋಧ ಪಕ್ಷದ ಹಲವು ನಾಯಕರ ಮೇಲೆ ಕಣ್ಗಾವಲು ಇಡಲಾಗಿದೆ. ದೇಶದ ಪ್ರಮುಖ 142ಕ್ಕೂ ಹೆಚ್ಚು ರಾಜಕೀಯ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲಾಗಿದೆ ಎಂಬ ಆರೋಪವಿದೆ. ಇದರ ಜೊತೆಗೆ ದೇಶದ 300ಕ್ಕೂ ಹೆಚ್ಚು ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗುತ್ತಿದೆ. ಈ ಬೇಹಾಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಸ್ವತಃ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ 40 ಮಂದಿ ಪತ್ರಕರ್ತರ ಹೆಸರು ಕೂಡ ಸೇರಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+