ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಂಸಾಚಾರ ಸಹಿಸಲು ಸಾಧ್ಯವಿಲ್ಲ: ಅಮಿತ್ ಶಾ ಭೇಟಿ ಬಳಿಕ ಚನ್ನಿ ಹೇಳಿಕೆ

|
Google Oneindia Kannada News

ನವದೆಹಲಿ, ಅಕ್ಟೋಬರ್‌ 06: ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜೀತ್‌ ಸಿಂಗ್‌ ಚನ್ನಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನು ದೆಹಲಿಯ ನಿವಾಸದಲ್ಲಿ ಮಂಗಳವಾರ ಭೇಟಿಯಾಗಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಹಾಗೂ ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಯ ಬಗ್ಗೆ ಮಾತನಾಡಿದ್ದಾರೆ.

ಈ ಬಗ್ಗೆ ಸಭೆಯ ನಂತರ ಮಾತನಾಡಿದ ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜೀತ್‌ ಸಿಂಗ್‌ ಚನ್ನಿ, "ನಾನು ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾದೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಅಮಾನತು ಮಾಡುವಂತೆ ಆಗ್ರಹಿಸಿದೆ. ಹಾಗೆಯೇ ಡ್ರಗ್ಸ್‌ ಹಾಗೂ ಶಸ್ತ್ರಾಸ್ತ್ರಗಳ ಅಕ್ರಮ ಸಾಗಾಟವನ್ನು ತಪ್ಪಿಸಲು ಪಂಜಾಬ್‌ನಲ್ಲಿ ಇರುವ ಅಂತಾರಾಷ್ಟ್ರೀಯ ಗಡಿಯನ್ನು ಮುಚ್ಚುವಂತೆ ಒತ್ತಾಯಿಸಿದೆ," ಎಂದು ತಿಳಿಸಿದ್ದಾರೆ.

'ಮೋದಿಜೀ ನೀವು ಲಖಿಂಪುರ ಖೇರಿಗೆ ಹೋಗುತ್ತೀರಾ?: ಪ್ರಿಯಾಂಕಾ ಗಾಂಧಿ ಪ್ರಶ್ನೆ'ಮೋದಿಜೀ ನೀವು ಲಖಿಂಪುರ ಖೇರಿಗೆ ಹೋಗುತ್ತೀರಾ?: ಪ್ರಿಯಾಂಕಾ ಗಾಂಧಿ ಪ್ರಶ್ನೆ

"ಇದೇ ಸಂದರ್ಭದಲ್ಲಿ ಉತ್ತರ ಪ್ರದೇಶದಲ್ಲಿ ರೈತರನ್ನು ಅನಾಗರಿಕ ಹತ್ಯೆ ಮಾಡಿರುವುದನ್ನು ನಾವು ಸಹಿಸಲಾರೆವು ಎಂದು ಹೇಳಿದ್ದೇನೆ. ಈ ಆಡಳಿತವು ನಮ್ಮ ನಾಯಕರನ್ನು ವಿನಾಕಾರಣ ಬಂಧನ ಮಾಡುವುದನ್ನು ನಿಲ್ಲಿಸಬೇಕು ಎಂದಿದ್ದೇನೆ. ಕರ್ತಾಪುರ ಕಾರಿಡಾರ್‌ ಅನ್ನು ಆದಷ್ಟು ಶೀಘ್ರದಲ್ಲಿ ತೆರೆಯಲು ಮನವಿ ಮಾಡಿ‌ದೇವೆ. ಈ ಹಿನ್ನೆಲೆ ಅತೀ ಶೀಘ್ರದಲ್ಲೇ ಸರ್ಕಾರ ನಿರ್ಧಾರ ಕೈಗೊಳ್ಳುವುದು ಎಂದು ಭರವಸೆಯನ್ನು ನೀಡಿದ್ದಾರೆ," ಎಂದು ಹೇಳಿದರು.

Told Him Wont Tolerate says Punjab Chief Minister After Meeting Amit Shah

ಇನ್ನು ದೆಹಲಿಗೆ ತೆರಳುವ ಮುನ್ನ ಚಂಡೀಗಢದಲ್ಲಿ ಮಾತನಾಡಿದ ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜೀತ್‌ ಸಿಂಗ್‌ ಚನ್ನಿ, "ಕೇಂದ್ರ ಸರ್ಕಾರದ ಈ ಮೂರು ಕೃಷಿ ಕಾಯ್ದೆಗಳನ್ನು ಆದಷ್ಟು ಬೇಗೆ ರದ್ದು ಮಾಡಬೇಕು. ಈ ಮೂಲಕ ಉತ್ತರ ಪ್ರದೇಶದ ಲಂಖೀಪುರ ಖೇರಿಯಲ್ಲಿ ನಡೆದಂತಹ ಘಟನೆಯನ್ನು ತಡೆಯಬೇಕು. ನಾನು ಈ ವಿಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಳಿ ಮಾತುಕತೆ ನಡೆಸುತ್ತೇನೆ," ಎಂದಿದ್ದರು.

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಇನ್ನು ಸಂಯುಕ್ತ ಕಿಸಾನ್‌ ಮೋರ್ಚಾ ಹಾಗೂ ಹಲವಾರು ರೈತ ಮುಖಂಡರುಗಳು ಈ ಪೈಕಿ ನಾಲ್ವರು ರೈತರು ಕಾರು ಹರಿದು ಹೋದ ಕಾರಣದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ವಾಹನ ಹರಿದ ವಿಡಿಯೋ ಶೇರ್‌ ಮಾಡಿದ ಕಾಂಗ್ರೆಸ್‌ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ವಾಹನ ಹರಿದ ವಿಡಿಯೋ ಶೇರ್‌ ಮಾಡಿದ ಕಾಂಗ್ರೆಸ್‌

ಉತ್ತರ ಪ್ರದೇಶದ ಲಖಿಂಪುರ ಖೇರಿಗೆ ಭೇಟಿ ನೀಡುವುದಕ್ಕೆ ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜೀತ್‌ ಸಿಂಗ್‌ ಚನ್ನಿಗೆ ಅವಕಾಶ ನಿರಾಕರಿಸಿದ ಒಂದು ದಿನದ ನಂತರ ಚನ್ನಿ ದೆಹಲಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾಗಿದ್ದಾರೆ. ಉಪಮುಖ್ಯಮಂತ್ರಿ ಸುಖ್ಜಿಂದರ್‌ ಸಿಂಗ್‌ ರಾಂಧಾವಾ ಹಾಗೂ ಕೆಲವು ಪಂಜಾಬ್‌ ಕಾಂಗ್ರೆಸ್‌ ಶಾಸಕರು ಈ ನಿಯೋಗದಲ್ಲಿ ಇದ್ದು ಅವರನ್ನು ಹರಿಯಾಣ ಗಡಿಯಲ್ಲಿ ತಡೆಯಲಾಗಿದೆ.

ಇನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸರ್ಕಾರ ಈ ಘಟನೆಗೆ ಸಂಬಂಧಿಸಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಬೇಕು ಎಂದು ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜೀತ್‌ ಸಿಂಗ್‌ ಚನ್ನಿ ಹೇಳಿದ್ದಾರೆ. ಹಾಗೆಯೇ ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡುವ ನಿಟ್ಟಿನಲ್ಲಿಯೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗಮನ ಹರಿಸಬೇಕು ಎಂದಿದ್ದಾರೆ. ಈ ಹಿಂದೆ ಕಳೆದ ಶುಕ್ರವಾರ ಚರಣ್‌ಜೀತ್‌ ಸಿಂಗ್‌ ಚನ್ನಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೊತೆಗೆ ಮಾತುಕತೆ ನಡೆಸಿದ್ದರು. ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡುವಂತೆ ಆಗ್ರಹ ಮಾಡಿದ್ದರು.

ಈ ನಡುವೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ವಾಹನ ಹರಿದು ಹೋದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಬಿಜೆಪಿಯ ಸಂಸದ ವರುಣ್‌ ಗಾಂಧಿ ಕೂಡಾ ಟ್ವೀಟ್‌ ಮಾಡಿದ್ದಾರೆ. "ಲಖಿಂಪುರ್ ಖೇರಿಯಲ್ಲಿ ಉದ್ದೇಶಪೂರ್ವಕವಾಗಿ ರೈತರ ಮೇಲೆ ವಾಹನವನ್ನು ಚಲಾಯಿಸುವ ಈ ವಿಡಿಯೋ ಯಾರ ಹೃದಯವನ್ನು ಕೂಡಾ ಕದಡಿಸುತ್ತದೆ. ಪೊಲೀಸರು ಈ ವಿಡಿಯೋವನ್ನು ನೋಡಿ ಪರಿಶೀಲನೆ ನಡೆಸಬೇಕು. ಈ ವಾಹನಗಳ ಮಾಲೀಕರು, ಅದರಲ್ಲಿ ಕುಳಿತಿರುವ ಜನರು ಮತ್ತು ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳನ್ನು ತಕ್ಷಣ ಬಂಧಿಸಬೇಕು," ಎಂದು ಆಗ್ರಹ ಮಾಡಿದ್ದಾರೆ.

(ಒನ್‌ಇಂಡಿಯಾ ಸುದ್ದಿ)

English summary
Told Him Won't Tolerate barbaric killings in Uttar Pradesh says Punjab Chief Minister Charanjit Singh Channi After Meeting Union Home Minister Amit Shah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X