ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಕೊರೊನಾ ವೈರಸ್ ವೈದ್ಯಕೀಯ ತಪಾಸಣೆಗೆ 111 ಲ್ಯಾಬ್

|
Google Oneindia Kannada News

ನವದೆಹಲಿ, ಮಾರ್ಚ್.21: ಭಾರತದಲ್ಲೂ ಕೊರೊನಾ ವೈರಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ 300ರ ಗಡಿ ದಾಟುತ್ತಿದ್ದು, ವೈದ್ಯಕೀಯ ತಪಾಸಣಾ ಕೇಂದ್ರಗಳನ್ನು ತೆರೆಯಲು ಕೇಂದ್ರ ಆರೋಗ್ಯ ಸಚಿವಾಲಯವು ಮುಂದಾಗಿದೆ.
ಮಾರ್ಚ್.21ರ ಶನಿವಾರದಿಂದ ದೇಶಾದ್ಯಂತ ಕೊರೊನಾ ವೈರಸ್ ವೈದ್ಯಕೀಯ ತಪಾಸಣಾ ಕೇಂದ್ರಗಳ ಸಂಖ್ಯೆಯನ್ನು 111ಕ್ಕೆ ಏರಿಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲುವಾ ಅಗರ್ ವಾಲ್ ತಿಳಿಸಿದ್ದಾರೆ.

ಭಾರತದಲ್ಲಿ 300ರ ಗಡಿ ದಾಟಿದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ
ಖಾಸಗಿ ವೈದ್ಯಕೀಯ ತಪಾಸಣಾ ಕೇಂದ್ರಗಳಿಗೆ ಕೊರೊನಾ ವೈರಸ್ ಸೋಂಕಿತರ ರಕ್ತ ಮತ್ತು ಗಂಟಲು ದ್ರವ್ಯ ಸಂಗ್ರಹ ಮತ್ತು ಪರೀಕ್ಷೆಗೆ ಮಾರ್ಗಸೂಚಿಯನ್ನು ನೀಡಲಾಗಿದೆ. ಇದರ ಜೊತೆಗೆ ವೈದ್ಯಕೀಯ ತಪಾಸಣಾ ದರವನ್ನು ಸರ್ಕಾರ ನಿಗದಿಗೊಳಿಸಿದೆ ಎಂದು ಲಾವಾ ಅಗರ್ ವಾಲ್ ಹೇಳಿದರು.

Total 111 Coronavirus Testing Lab Start Work Across India

ಸುಳ್ ಸುದ್ದಿ ನಂಬದಿರಲು ಆರೋಗ್ಯ ಸಚಿವಾಲಯದ ಮನವಿ:
ದೇಶದ ಪ್ರಜೆಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂಬುವಂತಾ ಸುಳ್ಳು ಸುದ್ದಿಗಳನ್ನು ನಂಬುವುದನ್ನು ಬಿಡಿ. ಶೀತಜ್ವರ ಮತ್ತು ಕೆಮ್ಮಿನ ಲಕ್ಷಣಗಳು ಕಾಣಿಸಿಕೊಂಡವರು ಮಾತ್ರ ಮುಖಕ್ಕೆ ಮಾಸ್ಕ್ ಧರಿಸಿ ಎಂದು ಆರೋಗ್ಯ ಸಚಿವಾಲಯವು ಮನವಿ ಮಾಡಿಕೊಂಡಿದೆ.
ಎಲ್ಲ ಸಂದರ್ಭಗಳಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಗಳನ್ನು ಬಳಸಬೇಕು ಎಂಬ ನಿಯಮವಿಲ್ಲ. ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವೂ ಇಲ್ಲ. ಇದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಸದ್ಯದರಲ್ಲೇ ಬಿಡುಗಡೆ ಮಾಡಲಾಗುತ್ತದೆ. ಎನ್-95 ಮಾಸ್ಕ್ ಗಳನ್ನು ಧರಿಸಬೇಕು ಎಂಬುದು ಕಡ್ಡಾಯವಲ್ಲ. ಅದಕ್ಕಿಂತ ಕರವಸ್ತ್ರಗಳನ್ನೇ ಎರಡು ಪದರಗಳನ್ನಾಗಿ ಮಾಡಿಕೊಂಡು ಮುಖಕ್ಕೆ ಕಟ್ಟಿಕೊಂಡರೆ ಸಾಕು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವಾ ಅಗರ್ ವಾಲ್ ತಿಳಿಸಿದ್ದಾರೆ.

READ IN ENGLISH

English summary
Total 111 Coronavirus Testing Lab Start Work Across India From Saturday. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X