• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Video: ಕೃಷಿ ಸಂಬಂಧಿತ ಮಸೂದೆ ವಿರೋಧಿಸಿ ಟ್ರ್ಯಾಕ್ಟರ್ ಗೆ ಬೆಂಕಿ!

|

ನವದೆಹಲಿ, ಸಪ್ಟೆಂಬರ್.28: ಕೃಷಿ ಸಂಬಂಧಿತ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ ನೀಡುತ್ತಿದ್ದಂತೆ ಪ್ರತಿಭಟನೆ ಕಿಚ್ಚು ಹೊತ್ತಿಕೊಂಡಿದೆ. ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲಾಗುತ್ತಿದೆ.

ನವದೆಹಲಿ ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚುವ ಮೂಲಕ ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಸೋಮವಾರ ಬೆಳಗ್ಗೆ 7.15 ರಿಂದ 7.30ರ ಸಂದರ್ಭದಲ್ಲಿ ದೆಹಲಿ ಕೇಂದ್ರ ಭಾಗವಾಗಿರುವ ಇಂಡಿಯಾ ಗೇಟ್ ಬಳಿ ನೆರೆದ 15 ರಿಂದ 20 ಮಂದಿ ಪ್ರತಿಭಟನಾಕಾರರು ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿದ್ದಾರೆ.

ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹೊತ್ತಿ ಉರಿದ ಟ್ರ್ಯಾಕ್ಟರ್ ನ್ನು ಅಲ್ಲಿಂದ ತೆರವುಗೊಳಿಸಿದ್ದಾರೆ. ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿದವರ ಗುರುತು ಪತ್ತೆ ಮಾಡುವ ನಿಟ್ಟಿನಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರೈಲ್ವೆ ಹಳಿ ಮೇಲೆ ಕುಳಿತು ಹೋರಾಟ:

ಕಳೆದ ಭಾನುವಾರ ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಕೃಷಿ ಸಂಬಂಧಿತ ಮೂರು ಮಸೂದೆಗಳನ್ನು ಕೈ ಬಿಡುವಂತೆ ಆಗ್ರಹಿಸಿ ಪಂಜಾಬ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ಅಮೃತಸರ್-ದೆಹಲಿ ರೈಲ್ವೆ ಮಾರ್ಗದ ಹಳಿಯ ಮೇಲೆ ಕುಳಿತು ರೈತರು ಪ್ರತಿಭಟನೆ ನಡೆಸಿದರು. ಭಾರತ್ ಬಂದ್ ಮತ್ತು ರೈತರ ತೀವ್ರ ವಿರೋಧದ ನಡುವೆಯೂ ಕೃಷಿ ಸಂಬಂಧಿತ ಮೂರು ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ ನೀಡಿದ್ದಾರೆ. ಕೇಂದ್ರ ಸರ್ಕಾರ ಕಳುಹಿಸಿದ್ದ ಮೂರು ಮಸೂದೆಗಳಿಗೆ ಈಗಾಗಲೇ ಅಂಕಿತ ಹಾಕಿದ್ದಾರೆ.

ಕೃಷಿ-ಎಪಿಎಂಸಿ ಮಸೂದೆಗೆ ವಿರೋಧ: ಇಂದು ಕರ್ನಾಟಕ ಬಂದ್

ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅಂಗೀಕಾರಗೊಂಡಿದ್ದ ಕೃಷಿ ಸಂಬಂಧಿತ ಮೂರು ಮಸೂದೆಗಳನ್ನು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಳುಹಿಸಲಾಗಿತ್ತು. ಶುಕ್ರವಾರವಷ್ಟೇ ಕೃಷಿ ಸಂಬಂಧಿತ ಮಸೂದೆ ಜಾರಿ ವಿರೋಧಿಸಿ ವಿವಿಧ ರೈತಪರ ಸಂಘಟನೆಗಳು ಭಾರತ್ ಬಂದ್ ನಡೆಸಿದ್ದವು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೃಷಿ ಸಂಬಂಧಿತ ಮಸೂದೆಗಳಿಗೆ ಅಂಕಿತ ಹಾಕಿದ ಕೆಲವೇ ಕ್ಷಣಗಳಲ್ಲಿ ಹಲವು ವರ್ಷಗಳಿಂದ ಬಿಜೆಪಿ ಜೊತೆಗೆ ಗುರುತಿಸಿಕೊಂಡಿದ್ದ ಶಿರೋಮಣಿ ಅಕಾಲಿ ದಳವು ಎನ್ ಡಿಎ ಮೈತ್ರಿಕೂಟದಿಂದ ಹೊರ ಬಂದಿದೆ.

English summary
Tractor Set On Fire At India Gate In Delhi To Protest Against Agriculture Bills.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X