ಕಾನ್ಪುರ ರೈಲು ದುರಂತಕ್ಕೆ ಕಂಬನಿ ಮಿಡಿದ ಗಣ್ಯರು

Posted By:
Subscribe to Oneindia Kannada

ನವದೆಹಲಿ, ನವೆಂಬರ್, 20: ಭಾನುವಾರ ಮುಂಜಾನೆ ಸಂಭವಿಸಿದ ಇಂದೋರ್-ಪಾಟ್ನಾ ಎಕ್ಸ್ ಪ್ರೆಸ್ ರೈಲು ದರುಂತಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

"ಪಾಟ್ನ-ಇಂದೋರ್ ಎಕ್ಸ್ ಪ್ರೆಸ್ ರೈಲು ದುರಂತ ಅತ್ಯಂತ ದಾರುಣ ಘಟನೆ. ಘಟನೆಯಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡ ಕುಟುಂಬಗಳಿಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇನೆ". ಎಂದು ಅವರು ಟ್ವೀಟ್ ಮಾಡಿದ್ದಾರೆ.[ಕಾನ್ಪುರ ಬಳಿ ರೈಲು ದುರಂತ, ಸಾವಿನ ಸಂಖ್ಯೆ 91ಕ್ಕೇರಿಕೆ]

"ರೈಲ್ವೇ ಸಚಿವ ಸುರೇಶ್ ಪ್ರಭು ಅವರು ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ. ಅವರೊಂದಿಗೆ ಸಂಪರ್ಕದಲ್ಲಿದ್ದೇನೆ. ಘಟನೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು" ಅವರು ಹೇಳಿದ್ದಾರೆ.

ರೈಲು ದುರಂತದಲ್ಲಿ ಸಂಭವಿಸಿದ ಸಾವು ನೋವುಗಳು ತೀವ್ರ ದಃಖ ತಂದಿವೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮ ಕೈಗೊಳ್ಳುವಂತೆ ಎನ್ ಡಿ ಆರ್ ಎಫ್ ಪಡೆಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸಹ ಟ್ವೀಟ್ ಮಾಡಿದ್ದಾರೆ.

"ಇಂದೋರ್ ಪಾಟ್ನಾ ಎಕ್ಸ್ ಪ್ರೆಸ್ ರೈಲು ದುರಂತ ಅತ್ಯಂತ ದುರದೃಷ್ಟಕರ, ಮೃತಪಟ್ಟ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದೇನೆ. ನಾವು ಸಹ ಪರಿಸ್ಥಿತಿಯನ್ನು ಗಮನಿಸುತ್ತಿದ್ದೇವೆ" ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

"ರೈಲು ದುರಂತದ ತೀವ್ರ ವಿಷಾದ ಉಂಟು ಮಾಡಿದೆ. ಮೃತಪಟ್ಟ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸುತ್ತಿದ್ದೇನೆ" ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಕಾನ್ಪುರದಲ್ಲಿ ನಡೆದ ರೈಲು ದುರಂತದ ವಿಚಾರ ತಿಳಿದು ಅತೀವ ದುಃಖವಾಗಿದೆ. ಮೃತಪಟ್ಟವರಿಗೆ ಮತ್ತು ಸಂತ್ರಸ್ತರಿಗೆ ತೀವ್ರ ಸಂತಾಪಗಳು ಎಂದು ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಸಹ ಟ್ವೀಟ್ ಮಾಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
PM Narendra modi expresses his condolences over Kanpur train accident. At least 91 people were killed and more than 100 injured as 14 coaches of the Indore-Patna Express ran off the tracks near Kanpur in Uttar Pradesh this morning.
Please Wait while comments are loading...