ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭೆಯಲ್ಲಾಯ್ತು, ಇಂದು ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಚರ್ಚೆ

|
Google Oneindia Kannada News

ನವದೆಹಲಿ, ಡಿಸೆಂಬರ್ 31: ತ್ರಿವಳಿ ತಲಾಖ್ ಅನ್ನು ಅಪರಾಧವನ್ನಾಗಿ ಪರಿಗಣಿಸುವ ತ್ರಿವಳಿ ತಲಾಖ್ ಮಸೂದೆ ಇಂದು ರಾಜ್ಯ ಸಭೆಯಲ್ಲಿ ಚರ್ಚೆಗೊಳಗಾಗಲಿದೆ.

ಡಿ.27 ರಂದು ಸಂಸತ್ತುನ ಚಳಿಗಾಲದ ಅಧಿವೇಶನದ ಸಮಯದಲ್ಲಿ ತಿದ್ದುಪಡಿ ಮಾಡಳಾದ ತ್ರಿವಳಿ ತಲಾಖ್ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿತ್ತು.

ತ್ರಿವಳಿ ತಲಾಖ್ ಮಸೂದೆ : ಧ್ವನಿ ಮತದ ಮೂಲಕ ಅಂಗೀಕಾರತ್ರಿವಳಿ ತಲಾಖ್ ಮಸೂದೆ : ಧ್ವನಿ ಮತದ ಮೂಲಕ ಅಂಗೀಕಾರ

ಚರ್ಚೆಯ ನಡುವೆ ಮಸೂದೆ ಮಂಡನೆಯನ್ನು ವಿರೋಧಿಸಿ ಕಾಂಗ್ರೆಸ್ ಮತ್ತು ಎಐಎಡಿಎಂಕೆ ಸದಸ್ಯರು ಕಲಾಪದಿಂದ ಹೊರ ನಡೆದಿದ್ದರಾದರೂ ಮಸೂದೆ ಪರ ಬಿದ್ದ 245 ಮತಗಳ ಮೂಲಕ ಈ ಮಸೂದೆಯನ್ನು ಅಂಗೀಕರಿಸಲಾಯಿತು. ಮಸೂದೆಗೆ ಧ್ವನಿಮತದ ಅಂಗೀಕಾರ ದೊರಕಿತ್ತು.

Triple Talaq bill to be tabled to debate in Rajya Sabha today

ಇಂದು ರಾಜ್ಯಸಭೆಯಲ್ಲೂ ಈ ಮಸೂದೆ ಮಂಡನೆಯಾದರೆ ತ್ರಿವಳಿ ತಲಾಖ್ ಅನ್ನು ಅಸಾಂವಿಧಾನಿಕ ಮತ್ತು ಅಪರಾಧ ಎಂದ ಸುಪ್ರೀಂ ಕೋರ್ಟ್ ನಿಲುವನ್ನು ಸರ್ಕಾರ ಅನುಮೋದಿಸಿದಂತಾಗುತ್ತದೆ.

ತ್ರಿವಳಿ ತಲಾಖ್ ಮೂಲಕ ಮುಸ್ಲಿಂ ಪತಿಯು, ತನ್ನ ಪತ್ನಿಗೆ ಮೂರು ಬಾರಿ ತಲಾಖ್ ಎನ್ನುವ ಮೂಲಕ ಯಾವುದೇ ಲಿಖಿತ ದಾಖಲೆಗಳಿಲ್ಲದೆ ವಿಚ್ಛೇದನ ನೀಡುವುದಕ್ಕೆ ತ್ರಿವಳಿ ತಲಾಖ್ ನಲ್ಲಿ ಅವಕಾಶವಿತ್ತು.

ಏನಿದು ತ್ರಿವಳಿ ತಲಾಖ್ ಕಾಯ್ದೆ: ಪ್ರಸ್ತುತ ತಿದ್ದುಪಡಿಯಲ್ಲೇನಿದೆ?ಏನಿದು ತ್ರಿವಳಿ ತಲಾಖ್ ಕಾಯ್ದೆ: ಪ್ರಸ್ತುತ ತಿದ್ದುಪಡಿಯಲ್ಲೇನಿದೆ?

ಆದರೆ ತ್ರಿವಳಿ ತಲಾಖ್ ನಿಂದಾಗಿ ಮುಸ್ಲಿಂ ಮಹಿಳೆಯರ ಹಕ್ಕನ್ನು ಕಸಿಯಲಾಗುತ್ತಿದೆ, ಮತ್ತು ಅವರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂಬುದನ್ನು ಮನಗಂಡ ಸರ್ಕಾರ, ತ್ರಿವಳಿ ತಲಾಖ್ ಅನ್ನು ಅಪರಾಧವನ್ನಾಗಿ ಪರಿಗಣಿಸುವಂತೆ ಮುಸ್ಲಿಂ ಮಹಿಳೆಯರ ಕಾಯ್ದೆಯಲ್ಲಿ ತಿದ್ದುಪಡಿ ತರಲು ನಿರ್ಧರಿಸಿತ್ತು.

ಮುಸ್ಲಿಂ ಮಹಿಳೆಯರಿಗೆ ತಕ್ಷಣವೇ ವಿಚ್ಛೇದನ ನೀಡುವಂತಹ ಪದ್ಧತಿಗೆ ಕಡಿವಾಣ ಹಾಕಲು ಮುಸ್ಲಿಂ ಮಹಿಳೆಯರ ಮಸೂದೆ 2018 (ವಿವಾಹದ ಹಕ್ಕುಗಳ ರಕ್ಷಣೆ) ಮುಂದಾಗಿದೆ.

ತ್ರಿವಳಿ ತಲಾಖ್ ಮಸೂದೆಯಲ್ಲಿ ಕೆಲವು ಗೊಂದಲವಿದ್ದಿದ್ದರಿಂದ ಕಳೆದ ಸೆಪ್ಟೆಂಬರ್ ನಲ್ಲಿ ಈ ಮಸೂದೆಯಲ್ಲಿ ಕೇಂದ್ರ ಸರ್ಕಾರ ಕೆಲವು ತಿದ್ದುಪಡಿ ತಂದಿತ್ತು. ಆ ತಿದ್ದುಪಡಿಯ ಪ್ರಕಾರ ಅಕಸ್ಮಾತ್ ಮುಸ್ಲಿಂ ಪತಿ ತ್ರಿವಳಿ ತಲಾಖ್ ನೀಡಿದರೆ ಆತನ ವಿರುದ್ಧ ಪತ್ನಿ ಅಥವಾ ಯಾವುದೇ ಹತ್ತಿರದ ಬಂಧುಗಳು ದೂರು ನೀಡಬಹುದು.

ಲೋಕಸಭೆಯಲ್ಲಿ ತ್ರಿವಳಿ ತಲಾಖ್‌ ಮಸೂದೆ ಅಂಗೀಕಾರಲೋಕಸಭೆಯಲ್ಲಿ ತ್ರಿವಳಿ ತಲಾಖ್‌ ಮಸೂದೆ ಅಂಗೀಕಾರ

ಮೌಖಿಕವಾಗಿ ತಲಾಖ್ ಹೇಳುವುದು ಅಥವಾ ವಾಟ್ಸಾಪ್, ಟೆಲಿಫೋನ್, ಪತ್ರ ಯಾವುದೇ ತಂತ್ರಜ್ಞಾನವನ್ನು ಬಳಸಿಕೊಂಡು ತಲಾಖ್ ಸಂದೇಶ ಕಳಿಸಿ ವಿಚ್ಛೇದನ ಪಡೆಯುವುದನ್ನೂ ಈ ಕಾಯ್ದೆ ಅಪರಾಧವೆಂದಿದೆ.

English summary
The revised bill to make instant Triple Talaq - the practice of Muslim men to instantly divorce their wives by uttering "Talaq" thrice -- a punishable offence will be tabled for debate and passing in the Rajya Sabha today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X