ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ವೈದ್ಯ ದಂಪತಿಗೆ ಕೊರೊನಾ: ವೈದ್ಯೆ 9 ತಿಂಗಳ ಗರ್ಭಿಣಿ

|
Google Oneindia Kannada News

ನವದೆಹಲಿ, ಏಪ್ರಿಲ್ 3: ದೆಹಲಿಯಲ್ಲಿ ವೈದ್ಯ ದಂಪತಿಗೆ ಕೊರೊನಾ ಕಾಣಿಸಿಕೊಂಡಿದೆ.

ವೈದ್ಯೆ ಈಗ 9 ತಿಂಗಳ ತುಂಬು ಗರ್ಭಿಣಿಯಾಗಿದ್ದು, ಇನ್ನು ಎರಡು ಮೂರು ದಿನಗಳಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ.

ತುಂಬು ಗರ್ಭಿಣಿಗೆ ಕೊರೊನಾ ಪಾಸಿಟಿವ್ ಬಂದಿದೆ. ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯನಿಗೆ ಕೊರೊನಾ ಸೋಂಕು ಕಂಡು ಬಂದಿತ್ತು. ಹೀಗಾಗಿ ವಿಶೇಷ ವಾರ್ಡಿಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

Two Delhi Doctors One Of Them Pregnant Test Corona Positive

ಇನ್ನೂ ಎರಡು ಮೂರು ದಿನಗಳಲ್ಲಿ ಹೆರಿಗೆ ಆಗುವ ಸಾಧ್ಯತೆ ಇದೆ. ಆದರೆ ಇದೇ ವೇಳೆ ಗರ್ಭಿಣಿಗೂ ಕೊರೊನಾ ಸೋಂಕು ಇರುವುದು ಧೃಡಪಟ್ಟಿದೆ. ಇತ್ತೀಚೆಗೆ ಖಾಸಗಿ ಆಸ್ಪತ್ರೆ ವೈದ್ಯೆಗೆ ಕೊರೊನಾ ಇರುವುದು ಸ್ಪಷ್ಟವಾಗಿತ್ತು. ಇದಕ್ಕೂ ಮುನ್ನ ಮೊಹಲ್ಲಾ ಕ್ಲೀನಿಕ್ ವೈದ್ಯನಿಗೆ ಕೊರೊನಾ ಪಾಸಿಟಿವ್ ಆಗಿತ್ತು.

ವೈದ್ಯನಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪತ್ನಿಯನ್ನು ತಪಾಸಣೆ ಒಳಪಡಿಸಲಾಗಿತ್ತು. ತಪಾಸಣೆ ವೇಳೆ ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದೀಗ ಗರ್ಭಿಣಿಯನ್ನು ಎಮರ್ಜೆನ್ಸಿ ವಾರ್ಡಿನಲ್ಲಿ ಐಸೋಲೇಷನ್ ವ್ಯವಸ್ಥೆ ಮಾಡಲಾಗಿದೆ. ಅಲ್ಲಿ ಗರ್ಭಿಣಿಗೆ ಚಿಕಿತ್ಸೆ ನೀಡಲಾಗುತ್ತಿದೆ.

English summary
A resident doctor from Delhi's prestigious All India Institute of Medical Sciences has tested positive for coronavirus, sources said. His wife, also a doctor who is 9 months pregnant, also tested positive. Sources said neither of them have any travel history.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X