• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿದೇಶಾಂಗ ಸಚಿವಾಲಯದಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಪತ್ತೆ

|

ದೆಹಲಿ, ಮೇ 30: ಸಂಸತ್ ಭವನದ ನಂತರ ಈಗ ವಿದೇಶಾಂಗ ಸಚಿವಾಲಯಕ್ಕೆ ಕೊರೊನಾ ವೈರಸ್ ಬಿಸಿ ತಟ್ಟಿದೆ. ರಾಷ್ಟ್ರ ರಾಜಧಾನಿಯಲ್ಲಿರುವ ವಿದೇಶಾಂಗ ಕಚೇರಿಯಲ್ಲಿ ಇಬ್ಬರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ ಎಂದು ಶನಿವಾರ ಮಾಹಿತಿ ಸಿಕ್ಕಿದೆ.

ವಿದೇಶಾಂಗ ಸಚಿವಾಲಯದಲ್ಲಿ ಕೆಲಸ ಮಾಡುವ ಇಬ್ಬರು ಅಧಿಕಾರಿಗಳಿಗೆ ಸೋಂಕು ತಗುಲಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇತರೆ ಎಲ್ಲ ಸಿಬ್ಬಂದಿಗೆ ಕೊವಿಡ್ ಪರೀಕ್ಷೆ ಮಾಡಲು ಮುಂದಾಗಿದ್ದು, ಸೋಂಕಿತರ ಜೊತೆಯಲ್ಲಿದ್ದ ವ್ಯಕ್ತಿಗಳನ್ನು ಕ್ವಾರಂಟೈನ್‌ಗೆ ಒಳಗಾಗಿ ಎಂದು ಸೂಚಿಸಲಾಗಿದೆ.

ಸಂಸತ್ ಭವನದಲ್ಲಿ ಮತ್ತೊಂದು ಕೊರೊನಾ ಸೋಂಕು, ಮಹಡಿ ಸೀಲ್‌ಡೌನ್

ವಿದೇಶಾಂಗ ಇಲಾಖೆಯ ಯುರೋಪ್ ವಿಭಾಗದಲ್ಲಿ ಕೆಲಸ ಮಾಡುವ ಸಲಹೆಗಾರ ಮತ್ತು ಕಾನೂನು ವಿಭಾಗದ ಅಧಿಕಾರಿಗೆ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರು ಕೆಲಸ ಮಾಡುತ್ತಿದ್ದ ಕೊಠಡಿಗಳನ್ನು ಸ್ವಚ್ಛಗೊಳಿಸಲಾಗಿದೆ. ಅಂದ್ಹಾಗೆ, ವಿದೇಶಾಂಗ ಸಚಿವಾಲಯದಲ್ಲಿ ವರದಿಯಾದ ಮೊದಲ ಪ್ರಕರಣಗಳು ಇದಾಗಿದೆ.

ಶುಕ್ರವಾರಷ್ಟೇ ರಾಜ್ಯಸಭೆ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರಿಗೆ ಕೊವಿಡ್ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಆ ಅಧಿಕಾರಿ ಕೆಲಸ ಮಾಡುತ್ತಿದ್ದ ಎರಡನೇ ಮಹಡಿಯನ್ನು ಸೀಲ್‌ಡೌನ್‌ ಮಾಡಿ ಔಷಧಿ ಸಂಪಡಣೆ ಮಾಡಲಾಗಿದೆ.

ದೆಹಲಿಯಲ್ಲಿ ಒಟ್ಟು 17,386 ಮಂದಿಗೆ ಸೋಂಕು ದೃಢಪಟ್ಟಿದೆ. ಇದುವರೆಗೂ 7,846 ಜನರು ಸೋಂಕಿನಿಂದ ಚೇತರಿಕೆ ಕಂಡಿದ್ದಾರೆ. 9,142 ಮಂದಿ ಆಸ್ಪತ್ರೆಯಲ್ಲಿದ್ದಾರೆ.

English summary
Two Person tested positive for Covid 19 at Ministry of External Affairs. One of them work in the Central Europe division, and another one is Legal division.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X