ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಬಿಎಸ್ಇ ಫಲಿತಾಂಶದ ಬಳಿಕ ಪದವಿ ಕೋರ್ಸ್‌ಗಳಿಗೆ ಪ್ರವೇಶ ಆರಂಭಿಸಲು ಸೂಚನೆ

|
Google Oneindia Kannada News

ಹೊಸದಿಲ್ಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) 2022 ಸಾಲಿನ 12ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿದ್ದು ಫಲಿತಾಂಶವನ್ನು ಪ್ರಕಟಿಸುವ ಹಂತದಲ್ಲಿದೆ. ಫಲಿತಾಂಶ ಪ್ರಕಟಿಸಿದ ಬಳಿಕವಷ್ಟೇ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅಂತಿಮ ದಿನಾಂಕವನ್ನು ಪ್ರಕಟಿಸುವಂತೆ ವಿಶ್ವವಿದ್ಯಾನಿಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಜಗದೀಶ್‌ ಕುಮಾರ್‌ ಶಿಕ್ಷಣ ಸಂಸ್ಥೆಗಳಿಗೆ ತಿಳಿಸಿದ್ದಾರೆ.

ಸಿಬಿಎಸ್‌ಇ ಫಲಿತಾಂಶದ ನಂತರ ಪದವಿ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಲು ಸಮಯವನ್ನ ಕಲ್ಪಿಸಲಾಗಿದೆ ಎಂದು ಯುಜಿಸಿ ಹೇಳಿದೆ. ಈ ಕುರಿತು ಯುಜಿಸಿ ಅಧ್ಯಕ್ಷ ಎಂ. ಜಗದೀಶ್‌ ಕುಮಾರ್ ಟ್ವೀಟ್ ಮಾಡಿ, ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು 12ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಿದ ನಂತರ ವಿದ್ಯಾರ್ಥಿಗಳಿಗೆ ಪದವಿ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು ಎಂದಿದ್ದಾರೆ.

ಫಲಿತಾಂಶದ ನಂತರ ಪದವಿ ಕೋರ್ಸ್‌ಗಳಿಗೆ ಅಂತಿಮ ದಿನಾಂಕವನ್ನು ನಿಗದಿಪಡಿಸುವಂತೆ ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ಅವರು ಉಪಕುಲಪತಿಗಳು, ಪ್ರಾಂಶುಪಾಲರು ಮತ್ತು ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಈಗಾಗಲೇ ಕೆಲವು ವಿಶ್ವವಿದ್ಯಾನಿಲಯಗಳು ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿರುವುದು ಗಮನಕ್ಕೆ ಬಂದಿದೆ. ಸಿಬಿಎಸ್‌ಇ ಫಲಿತಾಂಶ ಪ್ರಕಟಿಸುವ ಮೊದಲು ವಿಶ್ವವಿದ್ಯಾಲಯಗಳು ಅಂತಿಮ ದಿನಾಂಕವನ್ನು ನಿಗದಿಪಡಿಸಿದರೆ ವಿದ್ಯಾರ್ಥಿಗಳು ಪದವಿ ಕೋರ್ಸ್‌ಗಳ ಪ್ರವೇಶದಿಂದ ವಂಚಿತರಾಗುತ್ತಾರೆ ಎಂದು ಯುಜಿಸಿ ಪತ್ರದ ಮೂಲಕ ತಿಳಿಸಿದ್ದಾರೆ. ಟರ್ಮ್‌ 11ರ ಮೌಲ್ಯಮಾಪನ ನಡೆಯುತ್ತಿದ್ದು, ಫಲಿತಾಂಶ ತಯಾರಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಯುಜಿಸಿ ಪತ್ರದಲ್ಲಿ ತಿಳಿಸಿದೆ.

UGC asks Universities to fix UG admission last date after CBSE result 2022 declared

ನಿಯಮಗಳ ಆಧಾರದ ಮೇಲೆ ಅಂತಿಮ ಫಲಿತಾಂಶವನ್ನು ಘೋಷಿಸಲಾಗುತ್ತದೆ. ಸಂಪೂರ್ಣ ಪ್ರಕ್ರಿಯೆಯು ಫಲಿತಾಂಶವನ್ನು ಪ್ರಕಟಿಸಲು ಸುಮಾರು ಒಂದು ತಿಂಗಳು ಸಮಯ ಬೇಕಾಗುತ್ತದೆ. ಸಿಬಿಎಸ್‌ಇ ಜುಲೈ ಕೊನೆಯ ವಾರದ ವೇಳೆಗೆ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳ ಅಂತಿಮ ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ. ಫಲಿತಾಂಶ ಪ್ರಕಟಿಸುವವರೆಗೂ ಪದವಿ ಪ್ರವೇಶದ ಅಂತಿಮ ದಿನಾಂಕವನ್ನ ಪ್ರಟಕಟಿಸಬಾರದೆಂದು ವಿಶ್ವವಿದ್ಯಾಲಯಗಳಿಗೆ ಸೂಚನೆ ಯುಜಿಸಿ ಸೂಚಿಸಿದೆ. ಹಾಗೂ ಫಲಿತಾಂಶಕ್ಕೂ ಮುನ್ನ ಪದವಿ ಪ್ರವೇಶ ಪ್ರಕ್ರಿಯೆ ಆರಂಭಿಸಿದರೆ ವಿದ್ಯಾರ್ಥಿಗಳು ಕೋರ್ಸ್‌ಗಳಿಂದ ವಂಚಿತರಾಗುತ್ತಾರೆ ಎಂದು ಹೇಳಿದೆ.

Recommended Video

ಬಿಸಿಸಿಐ ಅಧ್ಯಕ್ಷನ ಮಾತಿಗೆ ನಿಟ್ಟುಸಿರು ಬಿಟ್ಟ ವಿರಾಟ್ | *Cricket | OneIndia Kannada

English summary
CBSE Class 12th Results 2022 : UGC Requests Universities to Fix Last Date of Undergraduate Admissions. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X