• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಯೋಧ್ಯೆ ಭೂಮಿ ಪೂಜೆಗೆ ಹೋಗಲ್ಲ: ಬಿಜೆಪಿ ನಾಯಕಿ ಉಮಾ ಭಾರತಿ

|

ನವದೆಹಲಿ, ಆಗಸ್ಟ್ 03: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಭೂಮಿ ಪೂಜೆ ಕಾರ್ಯಕ್ರಮಕ್ಕೆ ತೆರಳುವುದಿಲ್ಲ ಎಂದು ಬಿಜೆಪಿ ನಾಯಕಿ ಉಮಾ ಭಾರತಿ ತಿಳಿಸಿದ್ದಾರೆ.

ಆಗಸ್ಟ್ 05ರಂದು ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆ ನೆರವೇರಲಿದೆ. ಈಗಾಗಲೇ ಅಮಿತ್ ಶಾ ಹಾಗೂ ಬಿಜೆಪಿಯ ನಾಯಕರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ನಾನು ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ ಎಂದು ಉಮಾ ಭಾರತಿ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾವೈರಸ್ ಪಾಸಿಟಿವ್!

ಕಾರ್ಯಕ್ರಮವೆಲ್ಲಾ ಮುಗಿದ ಬಳಿಕ ಒಮ್ಮೆ ದೇವಸ್ಥಾನಕ್ಕೆ ಹೋಗಿಬರುತ್ತೇನೆ. ಅಮಿತ್ ಶಾ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಮೋದಿ ಆರೋಗ್ಯದ ಮೇಲೆ ಆತಂಕ ಎದುರಾಗಿದೆ.

ಭೋಪಾಲ್‌ನಿಂದ ಉತ್ತರ ಪ್ರದೇಶಕ್ಕೆ ರೈಲಿನಲ್ಲಿ ಬರಬೇಕು, ಹೀಗಾಗಿ ಭೇಟಿಯನ್ನು ರದ್ದುಗೊಳಿಸಿರುವುದಾಗಿ ತಿಳಿಸಿದ್ದಾರೆ.ನಾಳೆ ಉತ್ತರ ಪ್ರದೇಶಕ್ಕೆ ತಲುಪಬೇಕಿದ್ದರೆ ಇಂದೇ ಸಂಜೆ ಭೋಪಾಲ್‌ನಿಂದ ತೆರಳಬೇಕು, ಕೊರೊನಾ ಸೋಂಕು ತಗುಲುವ ಭಯವೂ ಇದೆ. ಮೋದಿ ಹಾಗೂ ಬಿಜೆಪಿ ನಾಯಕರಿಂದ ದೂರ ಉಳಿಯುತ್ತೇನೆ. ಅವರೆಲ್ಲ ತೆರಳಿದ ಬಳಿಕ ದೇವಸ್ಥಾನಕ್ಕೆ ಹೋಗಿ ಬರುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾಗೂ ಕೊರೊನಾ ಸೋಂಕು ತಗುಲಿದೆ. ಹಾಗೆಯೇ ಅಯೋಧ್ಯೆ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊರತುಪಡಿಸಿ ಯಾವುದೇ ರಾಜ್ಯದ ಮುಖ್ಯಮಂತ್ರಿಗಳಿಗೆ ಆಹ್ವಾನವಿಲ್ಲ.

English summary
Veteran BJP leader Uma Bharti, a stalwart of the Ram temple movement, tweeted today that she would travel to Ayodhya but avoid the groundbreaking event on Wednesday as a precaution against the coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X