ಭಾರತಕ್ಕೆ ಜಯ, ಪಾಕಿಸ್ತಾನಕ್ಕೆ ಮುಖಭಂಗ: ಮಸೂದ್ ಅಜರ್ ಜಾಗತಿಕ ಉಗ್ರ
Recommended Video
ನವದೆಹಲಿ, ಮೇ 02: ಪಾಕಿಸ್ತಾನಿ ಮೂಲದ ಉಗ್ರ ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಘೋಷಣೆ ಮಾಡಲಾಗಿದೆ. ಈ ಮೂಲಕ ಭಅರತಕ್ಕೆ ರಾಜತಾಂತ್ರಿಕ ಗೆಲುವು ಲಭಿಸಿದೆ.
Big,small, all join together.
— Syed Akbaruddin (@AkbaruddinIndia) May 1, 2019
Masood Azhar designated as a terrorist in @UN Sanctions list
Grateful to all for their support. 🙏🏽#Zerotolerance4Terrorism
ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ನಾಯಕ ಮಸೂದ್ ಅಜರ್, ಫೆಬ್ರವರಿ 14 ರಂದು ನಡೆದ ಪುಲ್ವಾಮಾ ದಾಳಿಯ ಸಂಚುಕೋರನಾಗಿದ್ದ ಎಂಬುದು ತಿಳಿಯುತ್ತಿದ್ದಂತೆಯೇ ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೇರಿ, ಆತನನ್ನು ಜಾಗತಿಕ ಉಗ್ರ ಎಂದು ಘೋಷಿಸುವಂತೆ ವಿಶ್ವಸಂಸ್ಥೆಗೆ ಮನವಿ ಮಾಡಿತ್ತು.

ಅಜರ್ ನನ್ನು ಜಾಗತಿಕ ಉಗ್ರ ಎಂದು ಘೋಷಿಸಲು ಅಡ್ಡಗಾಲು ಹಾಕಿದ್ದ ಚೀನಾ, ಕೊನೆಗೂ ತನ್ನ ಪಟ್ಟು ಸಡಲಿಸಿದ ಕಾರಣ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಈ ಘೋಷಣೆ ಮಾಡಿದೆ. ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್ ಒತ್ತಡಕ್ಕೆ ಮಣಿದು ಚೀನಾ ತನ್ನ ನಡೆಯನ್ನು ಬದಲಿಸಿಕೊಂಡಿದೆ ಎನ್ನಲಾಗಿದೆ. ಈ ನಡೆ ಪಾಕಿಸ್ತಾನಕ್ಕೆ ಭಾರೀ ಮುಖಭಂಗವೆನ್ನಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು 'ಇದು ಪ್ರತಿ ಭಾರತೀಯನ ಹೆಮ್ಮೆ, ನಮಗೆ ಸಿಕ್ಕ ಗೆಲುವು' ಎಂದಿದ್ದಾರೆ.












Click it and Unblock the Notifications