ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

45 ವರ್ಷಗಳಲ್ಲೇ ಭಾರೀ ನಿರುದ್ಯೋಗ ಸಮಸ್ಯೆ, ಕೇಂದ್ರ ಸರ್ಕಾರಕ್ಕೆ ಸಂಕಷ್ಟ?

|
Google Oneindia Kannada News

ನವದೆಹಲಿ, ಜನವರಿ 31: ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಇರುವಾಗ ಕೇಂದ್ರ ಸರ್ಕಾರದ ಬಗ್ಗೆ ಜನ ಸಾಮಾನ್ಯನಲ್ಲಿ ನಂಬಿಕೆ ಕಡಿಮೆಯಾಗುವಂಥ ಸುದ್ದಿಯೊಂದು ಹೊರಬಿದ್ದಿದೆ.

ಬಿಸಿನೆಸ್ ಸ್ಟಾಂಡರ್ಡ್ ಪತ್ರಿಕೆಯ ವರದಿಯೊಂದರ ಪ್ರಕಾರ 2017-18 ರ ಅವಧಿಯಲ್ಲಿ ದೇಶ ಕಳೆದ 45 ವರ್ಷಗಳಲ್ಲಿ ಎಂದಿಗೂ ಎದುರಿಸದಷ್ಟು ನಿರುದ್ಯೋಗದ ಸಮಸ್ಯೆಯನ್ನು ಎದುರಿಸುತ್ತಿದೆ. 1972-73 ರಲ್ಲಿ ಭಾರತದ ನಿರುದ್ಯೋಗ ಪ್ರಮಾಣ 6.1 ರಷ್ಟಿತ್ತು. ಆದರೆ 2017-18 ರಲ್ಲಿ ಈ ಪ್ರಮಾಣ ಮತ್ತಷ್ಟು ಕುಸಿದಿದೆ.

ಭಾರೀ ಪ್ರಮಾಣದ ನಿರುದ್ಯೋಗ ಸಮಸ್ಯೆಯನ್ನು ಅಲ್ಲಗಳೆದ ಬಿಜೆಪಿ ಭಾರೀ ಪ್ರಮಾಣದ ನಿರುದ್ಯೋಗ ಸಮಸ್ಯೆಯನ್ನು ಅಲ್ಲಗಳೆದ ಬಿಜೆಪಿ

ನಗರ ಪ್ರದೇಶದಲ್ಲಿ ನಿರುದ್ಯೋಗದ ಪ್ರಮಾಣ 7.8 ರಷ್ಟಿದ್ದರೆ, ಗ್ರಾಮೀಣ ಪ್ರದೇಶದಲ್ಲಿ 5.3 ರಷ್ಟಿದೆ ಎಂದು ಈ ವರದಿ ಹೇಳಿದೆ.

Unemployment rate highest in 45 years in India

ಅಪನಗದೀಕರಣದ ನಂತರ ಹೊರಬಿದ್ದ ಮೊದಲ ನಿರುದ್ಯೋಗ ಡೆಟಾ ಇದಾಗಿದ್ದು, ಈ ಸಂಖ್ಯೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೇಲೆ ಸಾಕಷ್ಟು ಒತ್ತಡ ಸೃಷ್ಟಿಸುವ ಸಾಧ್ಯತೆ ಇದೆ.

13 ವೇಯ್ಟರ್ ಕೆಲಸಕ್ಕೆ 7,000 ಅರ್ಜಿ! ಇದು ವಿದ್ಯಾವಂತರ ಪಾಡು13 ವೇಯ್ಟರ್ ಕೆಲಸಕ್ಕೆ 7,000 ಅರ್ಜಿ! ಇದು ವಿದ್ಯಾವಂತರ ಪಾಡು

ಈಗಾಗಲೇ ಪ್ರಧಾನಿ ಮೋದಿ ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ವೈಫಲ್ಯ ಕಂಡಿದೆ, ನಿರುದ್ಯೋಗ ನಿವಾರಣೆಯ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಈ ಸಂದರ್ಭದಲ್ಲಿ ಹೊರಬಿದ್ದ ಈ ವರದಿ ಕೇಂದ್ರ ಸರ್ಕಾರಕ್ಕೆ ಸಂಕಷ್ಟ ತಂದೊಡ್ಡಿದರೆ ಅಚ್ಚರಿಯಿಲ್ಲ.

ರಾಷ್ಟ್ರದಲ್ಲಿ ನಿರುದ್ಯೋಗ ಬೃಹತ್ ಪ್ರಮಾಣದಲ್ಲಿ ತಾಂಡವವಾಡುತ್ತಿದೆ ಎಂಬುದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಮತ್ತು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಇತ್ತೀಚೆಗಷ್ಟೇ ನಿರಾಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
India’s unemployment rate rose to a 45-year high during 2017-2018, the Business Standard newspaper on Thursday quoted a government survey as showing, in the latest setback for Prime Minister Narendra Modi just months before a tightening election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X