ಕೇಂದ್ರ ಬಜೆಟ್ 2018: ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು
ನವದೆಹಲಿ, ಫೆಬ್ರವರಿ 01: ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಇಂದು ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಒತ್ತು ನೀಡಲಾಗಿದ್ದು, ಭಾರತದ ಆಯ್ದ 10 ಪ್ರವಾಸಿ ತಾಣಗಳನ್ನು ಮಾದರಿ ಪ್ರವಾಸಿ ತಾಣಗಳನ್ನಾಗಿ ಅಭಿವೃದ್ಧಿ ಪಡಿಸಲು ಸರ್ಕಾರ ಚಿಂತಿಸಿದೆ.
ಭಾರತೀಯ ಪುರಾತತ್ವ ಇಲಾಖೆ ಅಡಿಯಲ್ಲಿ 110 ಕ್ಕೂ ಹೆಚ್ಚು ಮಾದರಿ ಸ್ಮಾರಕಗಳನ್ನು ಅಭಿವೃದ್ಧಿಗೊಳಿಸುವುದು ಮತ್ತು ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಅಲ್ಲದೆ ಈಶಾನ್ಯ ರಾಜ್ಯಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಅರುಣಾಚಲ ಪ್ರದೇಶದ ಸೆಲಾ ಪಾಸ್ ನಲ್ಲಿ ಸುರಂಗ ನಿರ್ಮಾಣಕ್ಕೂ ಸರ್ಕಾರ ಮುಂದಾಗಿದೆ.












Click it and Unblock the Notifications