ಫೆ.1 ರಂದು ಕೇಂದ್ರ ಬಜೆಟ್ ಮಂಡನೆಯಾಗುತ್ತಾ?

ನವದೆಹಲಿ, ಡಿಸೆಂಬರ್ 15: 2020-21 ನೇ ಸಾಲಿನ ಕೇಂದ್ರ ಬಜೆಟ್ ಫೆಬ್ರವರಿ 1 ರಂದು ಮಂಡನೆಯಾಗಲಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ. ಆರ್ಥಿಕ ಸಮೀಕ್ಷೆಯನ್ನು ಜನೆವರಿ 31 ರಂದು ಬಿಡುಗಡೆ ಮಾಡಲು ಕೇಂದ್ರ ನಿರ್ಧರಿಸಿದೆ.

ಆದರೆ ಈ ಬಾರಿ ಫೆಬ್ರವರಿ 1 ಶನಿವಾರ ಬಂದಿರುವುದರಿಂದ ಸಂಸತ್ ರಜೆ ಇರುತ್ತದೆ. ಆದ್ದರಿಂದ ಆ ದಿನ ಬಜೆಟ್ ಮಂಡನೆ ಮಾಡಲು ಸಾದ್ಯವಾಗುತ್ತೋ? ಇಲ್ಲವೋ? ಎಂಬ ಕುತೂಹಲಕಾರಿ ವಿಷಯವಾಗಿದೆ.

ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷ 2014 ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಫೆಬ್ರವರಿ 1 ರಂದು ಬಜೆಟ್ ಮಂಡನೆಯ ಸಂಪ್ರದಾಯ ಅನುಸರಿಸಿಕೊಂಡು ಬಂದಿತ್ತು. ಈ ಬಾರಿ ಏನು ಮಾಡುತ್ತದೆ ಎನ್ನುವುದನ್ನು ಕಾಅದು ನೋಡಬೇಕು.

Union Budget Being Turned On February 1st?

ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಫೆಬ್ರವರಿ ಕೊನೆಯ ವಾರ ಬಜೆಟ್ ಮಂಡಿಸುತ್ತಿದ್ದರು. ಸದ್ಯ ದೇಶದ ಆರ್ಥಿಕ ಸ್ಥಿತಿಗತಿ ಅಷ್ಟೇನೂ ಚೆನ್ನಾಗಿಲ್ಲದ್ದರಿಂದ ಆರ್ಥಿಕತೆಯನ್ನು ಸರಿಯಾದ ದಾರಿಗೆ ತರುವುದು ಮೋದಿ ಸರ್ಕಾರದ ಮುಂದಿರುವ ದೊಡ್ಡ ಸವಾಲಾಗಿದೆ.

ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯಾವ ಕ್ಷೇತ್ರಕ್ಕೆ ಏನು ಕೊಡುಗೆ ನೀಡಲಿದ್ದಾರೆ ಎಂದು ದೇಶದ ಆರ್ಥಿಕ ತಜ್ಞರು ಎದುರು ನೋಡುತ್ತಿದ್ದಾರೆ. ಜನಸಾಮಾನ್ಯರಿಗೆ ಏನು ಕೊಡಲಿದ್ದಾರೆ ಎಂದು ಕಾದು ನೋಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+