ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 20ರಂದು ಕೇಂದ್ರ ಸಚಿವ ಸಂಪುಟ ಸಭೆ

|
Google Oneindia Kannada News

ನವದೆಹಲಿ, ಮೇ 19: ಮೂರು ಹಂತದ ಕೊರೊನಾ ಲಾಕ್‌ಡೌನ್ ಮುಗಿದರೂ ಕೊರೊನಾ ಹಾವಳಿ ಮಾತ್ರ ಇನ್ನೂ ನಿಲ್ಲುತ್ತಿಲ್ಲ. ಕೊರೊನಾ ಸೋಂಕು ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರ ಹರಸಾಹಸ ಪಡುತ್ತಿದೆ.

Recommended Video

ಕರ್ನಾಟಕದಲ್ಲಿ ಒಂದೇ ದಿನಕ್ಕೆ 149 ಕೊರೊನಾ‌ ಕೇಸ್!! | Suresh Kumar

ಈ ಮಧ್ಯೆಯೇ 4.0 ಲಾಕ್‌ಡೌನ್ ಕೂಡ ಮಾಡಿರುವ ಕೇಂದ್ರ ಸರ್ಕಾರ, ಆರ್ಥಿಕ ಉತ್ತೇಜನಕ್ಕೆ ಮತ್ತಷ್ಟು ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ನಾಳೆ ಅಂದರೆ ಬುಧವಾರ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ ದೆಹಲಿಯಲ್ಲಿ ನಡೆಯಲಿದೆ.

ಲಾಕ್‌ಡೌನ್ ನಿಂದ ಸಂಕಷ್ಟಕ್ಕೆ ತುತ್ತಾಗಿರುವ ದೇಶದ ಪ್ರವಾಸೋದ್ಯಮದ ಮುಂದಿನ ಗತಿ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆಗೆ ಬರಲಿದೆ ಎಂದು ತಿಳಿದು ಬಂದಿದೆ.

Union Cabinet Meeting To Be Held On Wednseday

ಈಗಾಗಲೇ ಕೇಂದ್ರ ಸರ್ಕಾರ ಮೇ 31 ರವರೆಗೆ ಲಾಕ್‌ಡೌನ್ ವಿಸ್ತರಿಸಿದೆ. ಆದರೆ, ಗೃಹ ಸಚಿವಾಲಯ ಜೋನ್‌ಗಳ ನಿರ್ಧಾರವನ್ನು ರಾಜ್ಯ ಸರ್ಕಾರಕ್ಕೆ ಬಿಟ್ಟು ಕೊಟ್ಟಿದೆ. ಇತ್ತ ಭಾರತದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆಯಲ್ಲಿ ಚೀನಾವನ್ನು ಮೀರಿಸಿ ಹೋಗಿದೆ. ಒಂದು ಲಕ್ಷಕ್ಕೂ ಹೆಚ್ಚು ಜನ ಸೋಂಕಿಗೆ ತುತ್ತಾಗಿರುವುದು ಕೇಂದ್ರ ಸರ್ಕಾರವನ್ನು ಕಂಗೆಡಿಸುವಂತೆ ಮಾಡಿದೆ.

English summary
Union Cabinet Meeting To Be held On Wednseday May 20th at New Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X