ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು, ರಾಜ್ಯಸಭೆಯಲ್ಲಿ ಅಂಗೀಕಾರ
ಶ್ರೀನಗರ, ಆಗಸ್ಟ್ 5: ನರೇಂದ್ರ ಮೋದಿ ಸರ್ಕಾರದಿಂದ ಐತಿಹಾಸಿಕ ಮಸೂದೆ ಮಂಡನೆ ಮಾಡಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ, ಸ್ಥಾನಮಾನ ನೀಡುವ ಸಂವಿಧಾನದ 370 ಮತ್ತು 35ಎ ಅನುಚ್ಛೇದ ರದ್ದುಗೊಳಿಸುವಂತೆ ಮಸೂದೆ ಮಂಡಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದೊಂದು ವಾರದಿಂದ ಸೃಷ್ಟಿಯಾಗಿರುವ ಆತಂಕದ ವಾತಾವರಣಕ್ಕೆ ಸೋಮವಾರ ಉತ್ತರ ಉತ್ತರ ಸಿಕ್ಕಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವಾಲಯ ಸಭೆ ಬೆಳಗ್ಗೆ 9. 30ಕ್ಕೆ ಆರಂವಾಗಿದೆ. ಈ ಸಭೆಯಲ್ಲಿ ಪ್ರಮುಖ ನಿರ್ಧಾರಗಳು ಸಂಪುಟ ಸಭೆ ಬಳಿಕ ರಾಜ್ಯಸಭೆಯಲ್ಲಿ ಮಂಡನೆ ಮಾಡಲಾಗಿದೆ.
ಲೋಕಸಭೆ ಅಧಿವೇಶನದಲ್ಲಿ ಕೇಂದ್ರ ಈ ವಿಷಯವನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಬುಧವಾರ ಅಥವಾ ಗುರುವಾರ ನಡೆಯಬೇಕಿದ್ದ, ಕೇಂದ್ರ ಸಚಿವ ಸಂಪುಟ ಸಭೆ ಇಂದು ಸಂಸತ್ ಭವನದಲ್ಲಿ ನಡೆಯುತ್ತಿದೆ.

ಕಾಶ್ಮೀರ ವಿಚಾರದ ಬಗ್ಗೆ ಈ ಸಭೆಯಲ್ಲಿ ಏನಾದರೂ ತೀರ್ಮಾನ ಮಾಡಬಹುದೇನೋ ಎಂಬ ಸಂದೇಹಗಳು ವ್ಯಕ್ತವಾಗುತ್ತಿದೆ.
ಇದಕ್ಕೆ ಪೂರಕವಾಗಿಯೇ ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಗೃಹ ಕಾರ್ಯದರ್ಶಿ ಹಾಗೂ ಭದ್ರತಾ ಸಲಹೆಗಾರರೊಂದಿಗೆ ತುರ್ತು ಸಭೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಒಟ್ಟಾರೆ ಕಾಶ್ಮೀರ ಕುತೂಹಲಕ್ಕೆ ಇಂದು ತೆರೆ ಬೀಳುವ ಸಾಧ್ಯತೆ ಇದೆ.














Click it and Unblock the Notifications