ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮಿತ್ ಶಾ ಮೇ ತಿಂಗಳಲ್ಲಿ 7 ರಾಜ್ಯಗಳಿಗೆ ಭೇಟಿ: ಯಾಕೆ ಗೊತ್ತಾ?

|
Google Oneindia Kannada News

ನವದೆಹಲಿ, ಮೇ 06: ಕೇಂದ್ರ ಗೃಹ ಅಮಿತ್ ಶಾ ಅವರು ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿದ್ದಾರೆ. ಇದಾದ ಬಳಿಕ ಇನ್ನೂ 7 ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ.
ಅಮಿತ್ ಶಾ ಅವರ ಈ ಭೇಟಿಯನ್ನು ಮೆಗಾ ಕ್ರಾಸ್ ಕಂಟ್ರಿ ಟೂರ್ ಎಂದೂ ಕರೆಯಲಾಗುತ್ತಿದೆ. ಕೋವಿಡ್ ಮುಗಿದ ನಂತರ ಸಿಎಎ ಜಾರಿಗೆ ತರಲಾಗುವುದು ಎಂದಿರುವ ಅಮಿತ್ ಶಾ ಅವರು ಈ ಕುರಿತು ದೇಶದ ಜನತೆಗೆ ಮನವರಿಕೆ ಮಾಡಲು ಅನೇಕ ರಾಜ್ಯಗಳ ಪ್ರವಾಸ ಕೈಗೊಳ್ಳಲಿದ್ದಾರೆ.

ಈ ಭೇಟಿಗೆ ಸಂಬಂಧಿಸಿದ ಮಾಹಿತಿಯನ್ನು ಗೃಹ ಸಚಿವಾಲಯಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಅಮಿತ್ ಶಾ ಅವರು ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿದ್ದಾರೆ. ಈ ಪ್ರವಾಸದ ನಂತರ ಅವರು ಮೆಗಾ ಕ್ರಾಸ್ ಕಂಟ್ರಿ ಪ್ರವಾಸಕ್ಕೆ ಹೋಗಲಿದ್ದಾರೆ. ಈ ಸಮಯದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಮುಂದಿನ ಮೂರು ವಾರಗಳಲ್ಲಿ 7 ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಅನೇಕ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸದ್ಯ ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿದ್ದು, ಬಳಿಕ ಅಸ್ಸಾಂ, ತೆಲಂಗಾಣ, ಕೇರಳ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್‌ಗೆ ಪ್ರವಾಸ ಕೈಗೊಳ್ಳಲಿದ್ದಾರೆ.

2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಈ ಪ್ರವಾಸವನ್ನು ಅತ್ಯಂತ ಮಹತ್ವದ್ದಾಗಿ ಪರಿಗಣಿಸಲಾಗಿದೆ. ಪಕ್ಷದ ಸ್ಥಾನ ಮತ್ತು ಭವಿಷ್ಯದ ಕಾರ್ಯತಂತ್ರವನ್ನು ಹೇಗೆ ರೂಪಿಸಬೇಕು ಎಂಬುದರ ಕುರಿತು ಅಮಿತ್ ಶಾ ಈಗಿನಿಂದಲೇ ಗ್ರೌಂಡ್ ವರ್ಕ್ ಪ್ರಾರಂಭಿಸುತ್ತಿದ್ದಾರೆ.

Union Home Minister Amit Shah to visit 7 states in next 3 weeks

ಅಸ್ಸಾಂ ಪ್ರವಾಸ:

ಅಮಿತ್ ಶಾ ಅವರು ಮೇ 9 ಮತ್ತು 10 ರಂದು ಅಸ್ಸಾಂಗೆ ತೆರಳಲಿದ್ದಾರೆ ಎಂದು ಗೃಹ ಸಚಿವಾಲಯಕ್ಕೆ ಸಂಬಂಧಿಸಿದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಸಂದರ್ಭದಲ್ಲಿ, ರಾಜ್ಯದಲ್ಲಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರದ ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅವರು ಅನೇಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ತೆಲಂಗಾಣ ಪ್ರವಾಸ:

ಅಮಿತ್ ಶಾ ಮೇ 14 ರಂದು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಇಲ್ಲಿ ಅವರು ರಂಗಾರೆಡ್ಡಿ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಾರ್ವಜನಿಕ ಸಭೆಯು ತೆಲಂಗಾಣದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಎರಡನೇ ಹಂತದ ಪ್ರಜಾ ಸಂಗ್ರಾಮ ಯಾತ್ರೆಯ ಮುಕ್ತಾಯವನ್ನು ಸೂಚಿಸುತ್ತದೆ.

Union Home Minister Amit Shah to visit 7 states in next 3 weeks

ಕೇರಳ ಪ್ರವಾಸ:

ಮೇ 15 ರಂದು ಅಮಿತ್ ಶಾ ಇಲ್ಲಿ ಬಿಜೆಪಿ ಸಭೆಯಲ್ಲಿ ಭಾಗವಹಿಸಬಹುದು ಮತ್ತು ಇತರ ಪಕ್ಷದ ನಾಯಕರನ್ನು ಭೇಟಿ ಮಾಡಬಹುದು. 2024 ರ ಸಾರ್ವತ್ರಿಕ ಚುನಾವಣೆಯ ದೃಷ್ಟಿಯಿಂದ ಈ ಸಭೆಯನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ.

ಉತ್ತರಾಖಂಡ ಪ್ರವಾಸ:

ಮೇ 20 ರಂದು ಅಮಿತ್ ಶಾ ಉತ್ತರಾಖಂಡ ಪ್ರವಾಸಕ್ಕೆ ಹೋಗಬಹುದು. ಈ ಸಮಯದಲ್ಲಿ, ಅವರು ಅಧಿಕೃತ ಮತ್ತು ಪಕ್ಷಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದು. ಇದಲ್ಲದೇ ಪಕ್ಷದ ಕಾರ್ಯಕರ್ತರನ್ನೂ ಭೇಟಿ ಮಾಡಲಿದ್ದಾರೆ.

ಆಂಧ್ರಪ್ರದೇಶ ಪ್ರವಾಸ:

ಇದರ ನಂತರ ಅಮಿತ್ ಶಾ ಅವರು ಮೇ 21-22 ರ ನಡುವೆ ಆಂಧ್ರಪ್ರದೇಶದಲ್ಲಿ ಎರಡು ದಿನಗಳ ಪ್ರವಾಸಕ್ಕೆ ಹೋಗುತ್ತಾರೆ ಮತ್ತು ಇಲ್ಲಿಯೂ ಅವರು ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದು.

ಮಹಾರಾಷ್ಟ್ರ ಪ್ರವಾಸ:

ಮಹಾರಾಷ್ಟ್ರ ಮತ್ತು ಗುಜರಾತ್ ಪ್ರವಾಸವನ್ನು ಮೇ 27ರಂದು ಅಮಿತ್ ಶಾ ಮಹಾರಾಷ್ಟ್ರ ಪ್ರವಾಸಕ್ಕೆ ತೆರಳಲಿದ್ದಾರೆ. ಇದಾದ ಬಳಿಕ ಮೇ 28-29ರಂದು ಅವರು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಎರಡೂ ರಾಜ್ಯಗಳಲ್ಲಿ ಹಲವು ಅಧಿಕೃತ ಹಾಗೂ ಪಕ್ಷಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮೇ 15 ರಂದು ಅಮಿತ್ ಶಾ ಇಲ್ಲಿ ಬಿಜೆಪಿ ಸಭೆಯಲ್ಲಿ ಭಾಗವಹಿಸಬಹುದು ಮತ್ತು ಇತರ ಪಕ್ಷದ ನಾಯಕರನ್ನು ಭೇಟಿ ಮಾಡಬಹುದು. 2024 ರ ಸಾರ್ವತ್ರಿಕ ಚುನಾವಣೆಯ ದೃಷ್ಟಿಯಿಂದ ಈ ಸಭೆಯನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ.

ಗುಜರಾತ್
ಇದಾದ ಬಳಿಕ ಮೇ 28-29ರಂದು ಅವರು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಎರಡೂ ರಾಜ್ಯಗಳಲ್ಲಿ ಹಲವು ಅಧಿಕೃತ ಹಾಗೂ ಪಕ್ಷಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

English summary
Union Home Minister Amit Shah will travel to seven states in the next three weeks as part of a mega cross-country tour, during which he will attend public, political and official events. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X