ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆಗೆ ಕೊರೊನಾ ಸೋಂಕು

|
Google Oneindia Kannada News

ನವದೆಹಲಿ, ಡಿಸೆಂಬರ್ 28: ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ರಾಜ್ಯ ಖಾತೆ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರಿಗೆ ಸೋಮವಾರ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ತಿಳಿದುಬಂದಿದೆ.

ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಸ್ವತಃ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕೆಲವು ದಿನಗಳಿಂದೀಚೆ ನನ್ನೊಂದಿಗೆ ಸಂಪರ್ಕಕ್ಕೆ ಬಂದಿರುವವರು ತಪಾಸಣೆ ಮಾಡಿಸಿಕೊಳ್ಳಿ ಎಂದು ಸಚಿವ ಅಶ್ವಿನ್ ಕುಮಾರ್ ಮನವಿ ಮಾಡಿದ್ದಾರೆ.

ಡಿ 28: ವಿಶ್ವದಲ್ಲಿ ಕೊವಿಡ್ 19ರಿಂದ ಚೇತರಿಕೆ ಹೊಂದಿದವರೆಷ್ಟು?ಡಿ 28: ವಿಶ್ವದಲ್ಲಿ ಕೊವಿಡ್ 19ರಿಂದ ಚೇತರಿಕೆ ಹೊಂದಿದವರೆಷ್ಟು?

ವೈದ್ಯರ ಸಲಹೆ ಮೇರೆಗೆ ತಾವು ಸದ್ಯಕ್ಕೆ ಮನೆಯಲ್ಲೇ ಐಸೊಲೇಷನ್ ನಲ್ಲಿದ್ದು, ಐಸೊಲೇಷನ್ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇನೆ. ನನ್ನ ಆರೋಗ್ಯ ಸ್ಥಿರವಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

Union Minister Ashwini Kumar Choubey Tested Coronavirus Positive

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 20,021 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,02,07,871ಗೆ ಏರಿಕೆಯಾಗಿದೆ. ಸದ್ಯಕ್ಕೆ 2,77,301 ಸಕ್ರಿಯ ಪ್ರಕರಣಗಳಿದ್ದು, 97,82,669 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇದುವರೆಗೂ ದೇಶದಲ್ಲಿ 1,47,901 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

English summary
Union minister of state for health and family welfare ashwimi kumar choubey tested coronavirus positive on monday,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X