• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಕೊವಿಡ್-19 ಪಾಸಿಟಿವ್

|
Google Oneindia Kannada News

ನವದೆಹಲಿ, ಆಗಸ್ಟ್.04: ಕೇಂದ್ರದ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಮತ್ತು ಉಕ್ಕಿನ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.

   Sushant ತಂದೆ ಪ್ರಕಾರ ಕೊಲೆ, Police report ಪ್ರಕಾರ ಆತ್ಮಹತ್ಯೆ | Oneindia Kannada

   ಹರಿಯಾಣದ ಗುರುಗ್ರಾಮ್ ನಲ್ಲಿ ಇರುವ ಮೇದಾಂತ ಆಸ್ಪತ್ರೆಗೆ ಕೇಂದ್ರ ಸಚಿವ ಧರ್ಮೇಂದ್ ಪ್ರಧಾನ್ ದಾಖಲಾಗಿದ್ದು, ತಜ್ಞ ವೈದ್ಯರ ತಂಡವು ಸಚಿವರ ಆರೋಗ್ಯ ತಪಾಸಣೆಯನ್ನು ಮಾಡುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

   ಅಮಿತ್ ಶಾ ಆಸ್ಪತ್ರೆಗೆ ದಾಖಲು: ಕಾಂಗ್ರೆಸ್ ಮುಖಂಡ ಶಶಿ ತರೂರ್ ಗೆ ಕಾಡಿದ ಪ್ರಶ್ನೆಅಮಿತ್ ಶಾ ಆಸ್ಪತ್ರೆಗೆ ದಾಖಲು: ಕಾಂಗ್ರೆಸ್ ಮುಖಂಡ ಶಶಿ ತರೂರ್ ಗೆ ಕಾಡಿದ ಪ್ರಶ್ನೆ

   ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಈ ವಾರದ ಆರಂಭದಲ್ಲಿ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದರು. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಕಳೆದ ಜುಲೈ 29ರಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಧರ್ಮೇಂದ್ರ ಪ್ರಧಾನ್ ಭಾಗವಹಿಸಿರಲಿಲ್ಲ. ಬದಲಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಉನ್ನತ ಮಂತ್ರಿಗಳು ಮಾತ್ರ ಭಾಗವಹಿಸಿದ್ದರು.

   ಭಾರತದಲ್ಲಿ ಎರಡನೇ ಕೇಂದ್ರ ಸಚಿವರಿಗೆ ಸೋಂಕು:

   ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಈಗಾಗಲೇ ಕೊರೊನಾವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ. ಇದರ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ್ ಅವರಲ್ಲಿ ಕೊವಿಡ್-19 ಪತ್ತೆಯಾಗಿದ್ದು, ಇದುವರೆಗೂ ದೇಶದ ಇಬ್ಬರು ಕೇಂದ್ರ ಸಚಿವರಿಗೆ ಮಹಾಮಾರಿ ಅಂಟಿಕೊಂಡಂತೆ ಆಗಿದೆ.

   ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಯೂರಪ್ಪ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮಿಳುನಾಡಿನ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ.

   English summary
   Union Minister Dharmendra Pradhan Tests Positive For Coronavirus.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X