ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಅವರಿಗೆ ಕೊರೊನಾವೈರಸ್

|
Google Oneindia Kannada News

ನವದೆಹಲಿ, ಏಪ್ರಿಲ್ 20: ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಪ್ರತಿನಿತ್ಯ 2 ಲಕ್ಷದ ಗಡಿ ದಾಟುತ್ತಿದೆ. ಇದರ ಮಧ್ಯೆ ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

"ಇಂದು ನನಗೆ ಕೊರೊನಾವೈರಸ್ ಸೋಂಕಿನ ಲಕ್ಷಣಗಳ ಕಾಣಿಸಿಕೊಂಡಿದ್ದು, ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಇತ್ತೀಚಿಗೆ ನನ್ನ ಸಂಪರ್ಕಕ್ಕೆ ಬಂದಿರು ಜನರು ದಯವಿಟ್ಟು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಕೊರೊನಾವೈರಸ್ ಸೋಂಕಿನ ತಪಾಸಣೆ ಮಾಡಿಸಿಕೊಳ್ಳಿ" ಎಂದು ಟ್ವೀಟ್ ಮಾಡಿದ್ದಾರೆ.

ಮೊದಲು ಓದಿ: ಭಾರತದಲ್ಲಿ ಕೊರೊನಾವೈರಸ್ 2ನೇ ಅಲೆ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿಮೊದಲು ಓದಿ: ಭಾರತದಲ್ಲಿ ಕೊರೊನಾವೈರಸ್ 2ನೇ ಅಲೆ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿ

ಭಾರತದಲ್ಲಿ ಸೋಮವಾರಕ್ಕೆ ಹೋಲಿಸಿದರೆ ಮಂಗಳವಾರ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಕೊಂಚ ಇಳಿಮುಖವಾಗಿದೆ. ಕಳೆದ 24 ಗಂಟೆಗಳಲ್ಲಿ 259170 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

 Union Minister Dr Jitendra Singh Tests Positive For Coronavirus

ಭಾರತದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:

ದೇಶದಲ್ಲಿ ಒಂದೇ ದಿನ 1,761 ಮಂದಿ ಪ್ರಾಣ ಬಿಟ್ಟಿದ್ದು, 1,54,761 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಒಟ್ಟು 1,53,21,089 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೆ 1,31,08,582 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 1,80,530 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 20,31,977 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

English summary
Union Minister Dr Jitendra Singh Tests Positive For Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X