ಕೇಂದ್ರ ಸಚಿವ ಕೃಷ್ಣ ಪಾಲ್ ಗುರ್ಜರ್‌ಗೆ ಕೊರೊನಾ ಸೋಂಕು
ನವದೆಹಲಿ, ಆಗಸ್ಟ್ 27: ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ. ಈಗ ಕೇಂದ್ರ ಸಚಿವ ಕೃಷ್ಣ ಪಾಲ್ ಗುರ್ಜರ್ ಅವರಿಗೂ ಸೋಂಕು ತಗುಲಿದೆ.
Recommended Video
ಈ ಕುರಿತು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿದ್ದೆ, ಫಲಿತಾಂಶ ಕೊರೊನಾ ಇರುವುದು ದೃಢಪಟ್ಟಿದೆ.
ಚಿಕಿತ್ಸೆ ಮುಂದುವರಯಲಿದೆ. ಕಳೆದ ಒಂದು ವಾರದಿಂದ ಯಾರು ನನ್ನ ಸಂಪರ್ಕಕ್ಕೆ ಬಂದಿದ್ದೀರೋ ಅವರು ಖುದ್ದಾಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಮಾಡಿಸಿಕೊಳ್ಳಿ ಎಂದಿದ್ದಾರೆ.

ಗುರ್ಜರ್ ಅವರ ಮೊದಲು ಮನೋಹರ್ ಲಾಲ್ ಖಟ್ಟರ್, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಗೃಹ ಸಚಿವ ಅಮಿತ್ ಶಾ, ಸಚಿವ ಧರ್ಮೇಂದ್ರ ಪ್ರಧಾನ್, ಶ್ರೀಪಾದ್ ನಾಯಕ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು.
ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮಿಳುನಾಡು ರಾಜ್ಯಪಾಲ ಬನವಾರಿಲಾಲ್ ಪುರೋಹಿತ್ ಅವರಿಗೂ ಸೋಂಕು ತಗುಲಿತ್ತು.












Click it and Unblock the Notifications