ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್‌ಗೆ ಕೊರೊನಾ ಸೋಂಕು

|
Google Oneindia Kannada News

ನವದೆಹಲಿ, ಏಪ್ರಿಲ್ 16: ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕಳೆದ ಮೂರು ದಿನಗಳಿಂದ ತನ್ನ ಸಂಪರ್ಕಕ್ಕೆ ಯಾರ್ಯಾರು ಬಂದಿದ್ದೀರಿ ಅವರೆಲ್ಲರೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಜಾವಡೇಕರ್ ಹೇಳಿದ್ದಾರೆ.

ಬೆಚ್ಚಿ ಬೀಳಿಸುವ ಸುದ್ದಿ: ಭಾರತದಲ್ಲಿ ಕೊರೊನಾವೈರಸ್ ಕಥೆ ಹೀಗ್ಯಾಕಾಯ್ತು?ಬೆಚ್ಚಿ ಬೀಳಿಸುವ ಸುದ್ದಿ: ಭಾರತದಲ್ಲಿ ಕೊರೊನಾವೈರಸ್ ಕಥೆ ಹೀಗ್ಯಾಕಾಯ್ತು?

ಅವರೇ ಖುದ್ದಾಗಿ ಟ್ವೀಟ್ ಮಾಡಿದ್ದು, ನನಗೆ ಇಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಯಾರು ನನ್ನ ಸಂಪರ್ಕಕ್ಕೆ ಬಂದಿದ್ದೀರಿ ಅವರೆಲ್ಲರೂ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

Union Minister Prakash Javadekar Tests Positive For Covid19

ಪ್ರಕಾಶ್ ಜಾವಡೇಕರ್ ಅವರು ಅವರು ಕಳೆದ ತಿಂಗಳು ಪುಣೆಯ ದೀನಾನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,17,353 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಖಾತ್ರಿಯಾಗಿದೆ.

ಒಂದು ದಿನದಲ್ಲಿ 1185 ಮಂದಿ ಕೊವಿಡ್-19 ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 1,74,308ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 1,18,302 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 1,25,47,866 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಒಟ್ಟು 1,42,91,917 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಪ್ರಸ್ತುತ 15,69,743 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 14,73,210 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 26,34,76,625 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

English summary
Union Minister of Environment, Forest and Climate Change Prakash Javadekar on Friday said that he has tested positive for the novel coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X