Breaking: ಪ್ರವೀಣ್ ಕೊಲೆ: ಎಸ್‌ಡಿಪಿಐ, ಪಿಎಫ್‌ಐ ನಂಟು- ಪ್ರಲ್ಹಾದ್ ಜೋಶಿ

ನವದೆಹಲಿ ಜುಲೈ 27: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಾಥಮಿಕ ವರದಿ ಮತ್ತು ಕೆಲವು ಮಾಧ್ಯಮಗಳ ವರದಿ ಪ್ರಕಾರ ಎಸ್‌ಡಿಪಿಐ, ಪಿಎಫ್‌ಐ ಸಂಘಟೆನಗಳ ನಂಟಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಬಿಜೆಪಿ ಕಾರ್ಯಾಕಾರಿಣಿ ಸದಸ್ಯನ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬುಧವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಘಟನೆ ಬಳಿಕ ಪ್ರಾಥಮಿಕ ವರದಿಗಳು ಹಾಗೂ ಕೆಲವು ಮಾಧ್ಯಮಗಳು ಪ್ರವೀಣ್ ಹತ್ಯೆ ಕೃತ್ಯದಲ್ಲಿ ಸೊಸಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಮತ್ತು ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಗಳಿವೆ ಎಂದು ವರದಿ ಮಾಡಿದ್ದವು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕೇರಳದಲ್ಲಿ ಹಾಗೂ ಕರ್ನಾಕಟದಲ್ಲಿ ಎಸ್‌ಡಿಪಿಐ ಹಾಗೂ ಪಿಎಫ್‌ಐ ಸಂಘಟನೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ನವರೆ ಆ ಸಂಘಟನೆಗಳನ್ನು ಬೆಂಬಲಿಸುತ್ತಾರೆ ಎಂದು ಕಿಡಿ ಕಾರಿದರು.

Union Minister Pralhad Joshi Reaction to BJP Leader Praveen Nettar murder

ಬಿಜೆಪಿ ಯುವಕನನ್ನು ಬರ್ಬವಾಗಿ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಹತ್ಯೆಗೈದ ದುಷ್ಕರ್ಮಿಕಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+