• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ನಂತರದ ಆರೋಗ್ಯ ಸಮಸ್ಯೆ: ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ಆಸ್ಪತ್ರೆಗೆ ದಾಖಲು

|
Google Oneindia Kannada News

ನವದೆಹಲಿ, ಜೂನ್ 01: ಕೊರೊನಾ ನಂತರದ ಸಮಸ್ಯೆಯಿಂದಾಗಿ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಫೋಖ್ರಿಯಾಲ್‌ಗೆ ಏಪ್ರಿಲ್ 21ರಂದು ಕೊರೊನಾ ಸೋಂಕು ತಗುಲಿತ್ತು. ನನಗೆ ಕೊರೊನಾ ಸೋಂಕು ತಗುಲಿದೆ, ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಜತೆ ಸಂಪರ್ಕದಲ್ಲಿದ್ದವರೆಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದರು.

12ನೇ ತರಗತಿ ಬೋರ್ಡ್ ಪರೀಕ್ಷೆ ಕುರಿತು 2 ದಿನದಲ್ಲಿ ತೀರ್ಮಾನ: ಕೇಂದ್ರ12ನೇ ತರಗತಿ ಬೋರ್ಡ್ ಪರೀಕ್ಷೆ ಕುರಿತು 2 ದಿನದಲ್ಲಿ ತೀರ್ಮಾನ: ಕೇಂದ್ರ

ಬಳಿಕ ಅವರು ಸುಧಾರಿಸಿಕೊಂಡಿದ್ದರು, ಆದರೆ ಇಂದು ಅನಾರೋಗ್ಯ ಕಾಣಿಸಿಕೊಂಡ ಪರಿಣಾಮ ಬೆಳಗ್ಗೆ 11.30ರ ವೇಳೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ಕುರಿತು ಇಂದು ಅಂತಿಮ ತೀರ್ಮಾನ ತೆಗೆದುಕೊಳ್ಳುವವರಿದ್ದರು.

ಭಾರತದಲ್ಲಿ ಕಳೆದ 19 ದಿನಗಳಿಂದ ಸೋಂಕು ಇಳಿಮುಖವಾಗುತ್ತಿದ್ದು, ಮಂಗಳವಾರ 1,27,510 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದು ಕಳೆದ 51 ದಿನಗಳ ಕನಿಷ್ಠ ಸಂಖ್ಯೆಯಾಗಿದೆ. ಒಂದೇ ದಿನ 2,795 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,81,75,044ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿಗೀಡಾದವರ ಸಂಖ್ಯೆ 3,31,895ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,95,520ಕ್ಕೆ ಏರಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,55,287 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,59,47,629ಕ್ಕೆ ತಲುಪಿದೆ.

English summary
Union education minister Ramesh Pokhriyal Nishank was admitted to the All India Institute of Medical Sciences after he developed complications related to the coronavirus disease (Covid-19), AIIMS officials told news agency ANI on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X