• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆಯುಷ್ ಸಚಿವ ಶ್ರೀಪಾದ್‌ ನಾಯಕ್‌ಗೆ ಕೊರೊನಾ ಸೋಂಕು

|

ನವದೆಹಲಿ, ಆಗಸ್ಟ್ 12: ಕೇಂದ್ರದ ಆಯುಷ್ ಸಚಿವ ಶ್ರೀಪಾದ್ ಯಸ್ಸೋ ನಾಯಕ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಈ ಕುರಿತು ಖುದ್ದಾಗಿ ಅವರೇ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.ಇಂದು ಕೊರೊನಾ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ ಆದರೆ ಯಾವುದೇ ಲಕ್ಷಣವಿಲ್ಲ.

ನಾನು ಗೃಹ ಬಂಧನವನ್ನು ಆಯ್ಕೆ ಮಾಡಿಕೊಂಡಿದ್ದೇನೆ. ನನ್ನ ಸಂಪರ್ಕಕ್ಕೆ ಯಾರ್ಯಾರು ಬಂದಿದ್ದೀರೋ ಅವರು ಕೂಡ ಪರೀಕ್ಷೆ ಮಾಡಿಸಿಕೊಳ್ಳಿ, ಹಾಗೆಯೇ ಎಚ್ಚರಿಕೆಯಿಂದಿರಿ ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಜಲಸಂಪನ್ಮೂಲ ಸಚಿವ ಅರ್ಜುನ್ ರಾಮ್ ಮೇಘ್‌ವಾಲ್ ಅವರಿಗೂ ಕೂಡ ಕೊರೊನಾ ಸೋಂಕು ತಗುಲಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಗೂ ಕೊರೊನಾ ತಗುಲಿತ್ತು ಅವರೂ ಕೂಡ ಚೇತರಿಸಿಕೊಳ್ಳುತ್ತಿದ್ದಾರೆ.

English summary
Union AYUSH minister and North Goa MP Shripad Y Naik said he have tested Positive for coronavirus but no symptoms.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X