ಗೃಹಬಂಧನ ಸಚಿವ ಮುರಳೀಧರನ್ ಖುಷಿಯಿಂದ ಟ್ವೀಟ್

ನವದೆಹಲಿ, ಮಾರ್ಚ್ 17: ಕೊರೊನಾವೈರಸ್ ಭೀತಿ ಎದುರಿಸಿದ್ದ ಕೇಂದ್ರ ರಾಜ್ಯ ಸಚಿವ ವಿ ಮುರಳೀಧರನ್ ನಿರಾಳವಾಗಿದ್ದಾರೆ. ಸೋಂಕಿನ ಭೀತಿಯಿಂದ ಪಾರಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಕೇರಳ ಪ್ರವಾಸಕ್ಕೆ ತೆರಳಿದ್ದ ಸಚಿವರು, ದೆಹಲಿಗೆ ಹಿಂತಿರುಗಿದ ಬಳಿಕ ಗೃಹಬಂಧನಕ್ಕೊಳಪಟ್ಟಿದ್ದಾರೆ.

ಮಾರ್ಚ್ 14ರಂದು ಕೇರಳದ ತಿರುವನಂತಪುರಂನಲ್ಲಿ ಸಭೆಯೊಂದರಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸೋಂಕು ಪೀಡಿತ ವೈದ್ಯರನ್ನು ಭೇಟಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿಗೆ ಹಿಂತಿರುಗಿದ ಬಳಿಕ ಸ್ವಯಂಪ್ರೇರಿತರಾಗಿ ದೆಹಲಿಯ ತಮ್ಮ ಮನೆಯಲ್ಲೇ ಪ್ರತ್ಯೇಕ ಕೊಠಡಿಯಲ್ಲಿದ್ದರು. ಸಚಿವರ ರಕ್ತದ ಸ್ಯಾಂಪಲ್ ಪರೀಕ್ಷೆಗೆ ಕಳಿಸಲಾಗಿತ್ತು.

Union Minister Muraleedharan tweets Have tested negative for COvid19 Self Quarantine

ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ವಿ ಮುರಳೀಧರನ್ ಅವರಿಗೆ ವೈದ್ಯಕೀಯ ನೆರವು ನೀಡಲಾಗಿದ್ದು, ಸೋಂಕು ತಗುಲಿರುವ ಬಗ್ಗೆ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪರೀಕ್ಷಾ ವರದಿಗಳು ಬಂದಿದ್ದು, ಕೊರೊನಾವೈರಸ್ ತಗುಲಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಭಾರತದಲ್ಲಿ ಕೊರೊನಾವೈರಸ್ ಭೀತಿ ವ್ಯಾಪಿಸುತ್ತಲೇ ಇದೆ. ಕೇರಳ, ಮಹಾರಾಷ್ಟ್ರದಲ್ಲಿ ತೀವ್ರತೆ ಹೆಚ್ಚಾಗಿದೆ. ಕರ್ನಾಟಕ,ದೆಹಲಿ ಹಾಗೂ ಮಹಾರಾಷ್ಟ್ರದಲ್ಲಿ ಸಾವಿನ ನೋವು ಕಂಡು ಬಂದಿದೆ. ಪ್ರಸ್ತುತ ಕೇರಳದಲ್ಲಿ ಒಟ್ಟು 24 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಸದಾಗಿ ಮೂರು ಪ್ರಕರಣಗಳೊಂದಿಗೆ ದೇಶದಲ್ಲಿ ಒಟ್ಟಾರೆ ಈ ಸೋಂಕು ತಗುಲಿದವರ ಸಂಖ್ಯೆ 130ಕ್ಕೆ ಏರಿಕೆ ಆಗಿದೆ. ಮಾರ್ಚ್ 17ರ ಈ ಸಮಯಕ್ಕೆ ಭಾರತದಲ್ಲಿ ಮೂವರು ಕೊವಿಡ್19ಕ್ಕೆ ಬಲಿಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+