ಕ್ರೈಸ್ತ ಸನ್ಯಾಸಿನಿಯರ ಮೇಲಿನ ಮುತ್ತಿಗೆ ಆರೋಪ ಸುಳ್ಳು; ಪಿಯೂಶ್ ಗೋಯಲ್
ನವದೆಹಲಿ, ಮಾರ್ಚ್ 29: ಈಚೆಗೆ ಉತ್ತರ ಪ್ರದೇಶದಲ್ಲಿ ರೈಲು ಪ್ರಯಾಣದ ವೇಳೆ ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರ ಮೇಲೆ ಮುತ್ತಿಗೆ ಹಾಕಿ ಅವರನ್ನು ರೈಲಿನಿಂದ ಇಳಿಸಿರುವ ಆರೋಪ ಸುಳ್ಳು ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ತಿಳಿಸಿದ್ದು, ಕೇರಳ ಸಿಎಂ ಪಿಣರಾಯಿ ವಿಜಯನ್ ತಪ್ಪು ಹೇಳಿಕೆ ನೀಡಿದ್ದಾರೆ ಎಂದು ಹೇಳಿದ್ದಾರೆ.
"ಉತ್ತರ ಪ್ರದೇಶದಲ್ಲಿ ಯಾವುದೇ ಕ್ರೈಸ್ತ ಸನ್ಯಾಸಿನಿಯರ ಮೇಲೆ ದಾಳಿ ನಡೆಸಿಲ್ಲ. ಕೇರಳ ಮುಖ್ಯಮಂತ್ರಿ ಈ ಬಗ್ಗೆ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ" ಎಂದು ದೂರಿದ್ದಾರೆ.
ಮಾರ್ಚ್ 19ರಂದು ಉತ್ತರ ಪ್ರದೇಶದ ಝಾನ್ಸಿ ರೈಲು ನಿಲ್ದಾಣದಲ್ಲಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇಬ್ಬರು ಕ್ರೈಸ್ತ ಸನ್ಯಾಸಿನಿಯರು ಮತ್ತು ಅವರ ಇಬ್ಬರು ಶಿಷ್ಯೆಯರ ಮೇಲೆ ಮುತ್ತಿಗೆ ಹಾಕಿದ್ದ ಆರೋಪ ಕೇಳಿಬಂದಿತ್ತು. ಕೇರಳ ಸಿಎಂ ಪಿಣರಾಯಿ ವಿಜಯನ್ ಈ ವಿಷಯವನ್ನು ಎತ್ತಿ ಹಿಡಿದು, ಗೃಹ ಸಚಿವರಿಗೆ ಪತ್ರವನ್ನೂ ಬರೆದಿದ್ದರು. ಅಮಿತ್ ಶಾ ಅವರು ಕಠಿಣ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದರು.

ಕ್ರೈಸ್ತ ಸನ್ಯಾಸಿನಿಯರ ವಿರುದ್ಧ ದೂರು ಕೇಳಿಬಂದ ನಂತರ ಅಲ್ಲಿನ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದಾರೆ. ಆ ದೂರು ಸರಿಯಿದೆಯೇ ಎಂಬುದನ್ನು ಪರಿಶೀಲಿಸುವುದು ಪೊಲೀಸರ ಕರ್ತವ್ಯ. ಪೊಲೀಸರು ವಿಚಾರಣೆ ನಡೆಸಿ ಅವರ ದಾಖಲೆಗಳನ್ನು ಪರಿಶೀಲಿಸಿ ನಂತರ ಅವರ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಈ ಘಟನೆ ಕಳೆದ ಶುಕ್ರವಾರ ನಡೆದಿದ್ದು, ತೀವ್ರ ವಿವಾದ ಸೃಷ್ಟಿಸಿತ್ತು. ಮಾರ್ಚ್ 19ರಂದು ಹರಿದ್ವಾರ- ಪುರಿ ಉತ್ಕಲ್ ಎಕ್ಸ್‌ಪ್ರೆಸ್‌ನಲ್ಲಿ ಸನ್ಯಾಸಿನಿಯರು ಪ್ರಯಾಣಿಸುತ್ತಿದ್ದರು. ರೈಲ್ವೆ ಬೋಗಿಯಲ್ಲಿ ಕೆಲವು ವ್ಯಕ್ತಿಗಳು ನಾಲ್ವರು ಮಹಿಳೆಯರನ್ನು ಸುತ್ತುವರಿದಿರುವುದು 25 ಸೆಕೆಂಡುಗಳ ವಿಡಿಯೋದಲ್ಲಿ ದಾಖಲಾಗಿತ್ತು.
-
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
Vande Bharat Express: ದೇಶದಲ್ಲಿ ವಂದೇ ಭಾರತ್ ರೈಲಿನ ಹವಾ: ಪ್ರಯಾಣಿಕರ ಸಂಖ್ಯೆ ಶೇ.34ರಷ್ಟು ಏರಿಕೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ











Click it and Unblock the Notifications