ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನ್ ಲಾಕ್-3.0 ಮಾರ್ಗಸೂಚಿ ಬಿಡುಗಡೆ: ಪ್ರಮುಖ ಅಂಶಗಳು ಇಲ್ಲಿವೆ

|
Google Oneindia Kannada News

ನವದೆಹಲಿ, ಜುಲೈ.29: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆ ಕೇಂದ್ರ ಸರ್ಕಾರವು ಅನ್ ಲಾಕ್-3.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಜುಲೈ.31ರಂದು ಅನ್ ಲಾಕ್ 2.0 ಅವಧಿ ಅಂತ್ಯಗೊಳ್ಳುವ ಹಿನ್ನೆಲೆ ಹೊಸ ಮಾರ್ಗಸೂಚಿಯನ್ನು ರಿಲೀಸ್ ಮಾಡಲಾಗಿದೆ.

ಭಾರತದಾದ್ಯಂತ ಆಗಸ್ಟ್.01ರಿಂದ ಆಗಸ್ಟ್.30ರವರೆಗೂ ಅನ್ ಲಾಕ್ 3.0 ಮಾರ್ಗಸೂಚಿಗಳು ಜಾರಿಯಲ್ಲಿರುತ್ತವೆ. ಕೇಂದ್ರ ಸರ್ಕಾರವು ಜಿಮ್ ಮತ್ತು ಯೋಗ ಇನ್ಸ್ ಟ್ಯೂಟ್ ಗಳನ್ನು ತೆರೆಯುವುದಕ್ಕೆ ಅನುಮತಿ ನೀಡಿದ್ದು, ಶಾಲಾ-ಕಾಲೇಜುಗಳನ್ನು ತಿಂಗಳಾಂತ್ಯದವರೆಗೂ ತೆರೆಯುವಂತಿಲ್ಲ ಎಂದು ತಿಳಿಸಿದೆ.

ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್ ಆ.31ರ ತನಕ ವಿಸ್ತರಣೆಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್ ಆ.31ರ ತನಕ ವಿಸ್ತರಣೆ

ಕೇಂದ್ರ ಗೃಹ ಸಚಿವಾಲಯವು ಬಿಡುಗಡೆಗೊಳಿಸಿರುವ ಅನ್ ಲಾಕ್-3.0 ಮಾರ್ಗಸೂಚಿಯಲ್ಲಿರುವ ಪ್ರಮುಖ ಅಂಶಗಳು ಯಾವವು ಎನ್ನುವ ಪಟ್ಟಿ ಇಲ್ಲಿದೆ ನೋಡಿ.

Unlock-3.0 Highlights: Ministry Of Home Affairs Released Guidelines

ಭಾರತ ಅನ್ ಲಾಕ್-3.0 ಪ್ರಮುಖಾಂಶಗಳು:

- ದೇಶಾದ್ಯಂತ ರಾತ್ರಿ ಸಂದರ್ಭದಲ್ಲಿ ಸಂಚಾರಕ್ಕೆ ವಿಧಿಸಿದ್ದ ನಿರ್ಬಂಧ(ರಾತ್ರಿ ಕರ್ಫ್ಯೂ)ವನ್ನು ತೆರವುಗೊಳಿಸಲಾಗಿದೆ

- ಆಗಸ್ಟ್.05ರಿಂದ ಜಿಮ್ ಮತ್ತು ಯೋಗ ಇನ್ಸ್ ಟ್ಯೂಟ್ ತೆರೆಯುವುದಕ್ಕೆ ಕೇಂದ್ರ ಸರ್ಕಾರದ ಅನುಮತಿ

- ಆಗಸ್ಟ್.15ರಂದು ಸ್ವಾತಂತ್ರ್ಯ ದಿನ ಆಚರಿಸುವುದಕ್ಕೆ ಅನುಮತಿ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಸೇರಿದಂತೆ ಶಿಷ್ಟಾಚಾರವನ್ನು ಪಾಲನೆ ಮಾಡುವುದು ಕಡ್ಡಾಯವಾಗಿದೆ.

- ದೇಶದ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಗಸ್ಟ್.31ರವರೆಗೂ ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ

- ವಂದೇ ಭಾರತ್ ಮಿಷನ್ ಅಡಿಯಲ್ಲಿ ಸೀಮಿತ ಸಂಖ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ.

ಕಂಟೇನ್ಮೆಂಟ್ ಝೋನ್ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಈ ಕೆಳಗಿನ ಸೌಲಭ್ಯಗಳಿಗೆ ಅನುಮತಿ:

- ಮೆಟ್ರೋ ಸಂಚಾರಕ್ಕೆ ಅನುಮತಿ.

- ಚಿತ್ರಮಂದಿರ, ಸ್ವಿಮ್ಮಿಂಗ್ ಪೂಲ್, ಮನರಂಜನಾ ಉದ್ಯಾನವನ, ಬಾರ್, ಆಡಿಟೋರಿಯಮ್, ಸಿನಿಮಾ ಹಾಲ್, ಸಭಾಭವನಗಳನ್ನು ತೆರೆಯುವುದಕ್ಕೆ ಅನುಮತಿ.

- ಸಾಮಾಜಿಕ / ರಾಜಕೀಯ / ಕ್ರೀಡಾ / ಮನರಂಜನಾ / ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾರ್ವಜನಿಕವಾಗಿ ನಡೆಸುವುದಕ್ಕೆ ಅನುಮತಿ ನೀಡಲಾಗಿದೆ. ಆದರೆ ಯಾವ ದಿನಾಂಕದಿಂದ ಈ ಸೌಲಭ್ಯಗಳು ಜಾರಿಗೆ ಬರುತ್ತವೆ ಎನ್ನುವುದು ಇನ್ನೂ ನಿಗದಿಯಾಗಿಲ್ಲ. ಕಂಟೇನ್ಮೆಂಟ್ ಝೋನ್ ಗಳಲ್ಲಿ ಈ ಯಾವುದೇ ಚಟುವಟಿಕೆಗಳಿಗೆ ಅನುಮತಿ ಇರುವುದಿಲ್ಲ.

- ಆಗಸ್ಟ್.31ರವರೆಗೂ ಕಂಟೇನ್ಮೆಂಟ್ ಝೋನ್ ಗಳಲ್ಲಿ ಕಟ್ಟುನಿಟ್ಟಾಗಿ ಲಾಕ್ ಡೌನ್ ಜಾರಿಯಲ್ಲಿ ಇರುತ್ತದೆ. ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಕೇಂದ್ರ ಗೃಹ ಸಚಿವಾಲಯವು ತಿಳಿಸಿದೆ.

- ಕಂಟೇನ್ಮೆಂಟ್ ಝೋನ್ ಗಳ ಪಟ್ಟಿಯನ್ನು ಆಯಾ ಜಿಲ್ಲಾಡಳಿತದ ವೆಬ್ ಸೈಟ್, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ವೆಬ್ ಸೈಟ್ ಗಳಲ್ಲಿ ಅಪ್ ಲೋಡ್ ಮಾಡುವುದು. ಹಾಗೂ ಕಂಟೇನ್ಮೆಂಟ್ ಝೋನ್ ಗಳ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ಮಾಹಿತಿ ನೀಡುವುದು.

- ಕಂಟೇನ್ಮೆಂಟ್ ಝೋನ್ ಗಳಲ್ಲಿ ಚಟುವಟಿಕೆಗಳ ಮೇಲೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ ಮತ್ತು ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು. ಕಟ್ಟುನಿಟ್ಟಾಗಿ ಲಾಕ್ ಡೌನ್ ನಿಯಮಗಳು ಪಾಲನೆ ಆಗುವಂತೆ ನೋಡಿಕೊಳ್ಳುವುದು.

- ಕಂಟೇನ್ಮೆಂಟ್ ಝೋನ್ ಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆಯೇ ಇಲ್ಲವೇ ಎನ್ನುವುದರ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕೂಡಾ ನಿಗಾ ವಹಿಸಿರುತ್ತದೆ.

ರಾಜ್ಯ ಸರ್ಕಾರಕ್ಕೆ ಹೊಣೆ:

- ರಾಜ್ಯದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ಮತ್ತು ಕಂಟೇನ್ಮೆಂಟ್ ಝೋನ್ ಗಳಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಕ್ರಮ ತೆಗೆದುಕೊಳ್ಳುವುದಕ್ಕೆ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರಗಳಿಗೂ ಹೊಣೆಯನ್ನು ನೀಡಲಾಗಿದೆ. ಕಂಟೇನ್ಮೆಂಟ್ ಝೋನ್ ಗಳಲ್ಲಿ ಯಾವೆಲ್ಲ ಸೌಲಭ್ಯಗಳಿಗೆ ಅನುಮತಿ ನೀಡಬೇಕು. ಯಾವ ಕಂಟೇನ್ಮೆಂಟ್ ಝೋನ್ ಗಳಲ್ಲಿ ಯಾವ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಬೇಕು. ರಾಜ್ಯದೊಳಗೆ ಮತ್ತು ಹೊರರಾಜ್ಯಗಳಿಗೆ ಬಸ್ ಸಂಚಾರ ಮತ್ತು ಅಗತ್ಯ ಸರಕು-ಸೇವೆಗಳ ರಫ್ತು ಮತ್ತು ಆಮದಿಗೆ ಸಂಬಂಧಿಸಿದಂತೆ ತೀರ್ಮಾನಗಳನ್ನು ರಾಜ್ಯ ಸರ್ಕಾರಗಳೇ ನಿರ್ಧರಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

English summary
Unlock-3.0 Highlights: Ministry Of Home Affairs Released Guidelines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X