ಅನ್ ಲಾಕ್ 3.0: ವೃದ್ಧರು, ಪುಟ್ಟ ಮಕ್ಕಳಿಗೆ ಮಾರ್ಗಸೂಚಿ ಇಲ್ಲಿದೆ
ನವದೆಹಲಿ, ಜುಲೈ.29: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯ ಜೊತೆಗೆ ಇತ್ತೀಚಿಗೆ ಸಾವಿನ ಸಂಖ್ಯೆ ಕೂಡಾ ಏರಿಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ದುರ್ಬಲ ವ್ಯಕ್ತಿಗಳ ಆರೋಗ್ಯದ ಬಗ್ಗೆ ಹೆಚ್ಚು ನಿಗಾ ವಹಿಸುವಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.
ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆ ಕೇಂದ್ರ ಸರ್ಕಾರವು ಅನ್ ಲಾಕ್-3.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಜುಲೈ.31ರಂದು ಅನ್ ಲಾಕ್ 2.0 ಅವಧಿ ಅಂತ್ಯಗೊಳ್ಳುವ ಹಿನ್ನೆಲೆ ಹೊಸ ಮಾರ್ಗಸೂಚಿಯನ್ನು ರಿಲೀಸ್ ಮಾಡಲಾಗಿದೆ. ದೇಶಾದ್ಯಂತ ಆಗಸ್ಟ್.01ರಿಂದ ಆಗಸ್ಟ್.30ರವರೆಗೂ ಅನ್ ಲಾಕ್ 3.0 ಮಾರ್ಗಸೂಚಿಗಳು ಜಾರಿಯಲ್ಲಿರುತ್ತವೆ.
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕೊರೊನಾವೈರಸ್ ಸೋಂಕು ತಗಲಿದ್ದಲ್ಲಿ ಗುಣಮುಖರಾದ ಪ್ರಕರಣಗಳು ತೀರಾ ವಿರಳವಾಗಿವೆ. ಈ ಹಿನ್ನೆಲೆ ಮಾರ್ಗಸೂಚಿಯಲ್ಲಿ ದುರ್ಬಲ ವ್ಯಕ್ತಿಗಳ ಆರೋಗ್ಯದ ಮೇಲೆ ಹೆಚ್ಚು ನಿಗಾ ವಹಿಸುವಂತೆ ಸಲಹೆ ನೀಡಲಾಗಿದೆ.

ಈ ವಯಸ್ಸಿನವರು ಮನೆಯಲ್ಲಿ ಇರುವುದೇ ಸುರಕ್ಷಿತ:
ಅನಾರೋಗ್ಯ ಪೀಡಿತರು, 65 ವರ್ಷಕ್ಕಿಂತ ಮೇಲ್ಪಟ್ಟವರು, 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ಗರ್ಭಿಣಿಯರು ಸಾರ್ವಜನಿಕವಾಗಿ ಓಡಾಡುವುದಕ್ಕಿಂತ ಮನೆಗಳಲ್ಲೇ ಸುರಕ್ಷಿತವಾಗಿ ಇರುವುದು ಉತ್ತಮ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ವೈದ್ಯಕೀಯ ತಪಾಸಣೆ, ಅಗತ್ಯ ವಸ್ತುಗಳ ಖರೀದಿಗೆ ತೆರಳಲು ಅನುಮತಿ ನೀಡಲಾಗಿದೆ. ಈ ಸಂದರ್ಭಗಳಲ್ಲೂ ಸಾಮಾಜಿಕ ಅಂತರ, ಮುಖಕ್ಕೆ ಮಾಸ್ಕ್ ಧರಿಸುವುದು ಮತ್ತು ಸ್ಯಾನಿಟೈಸರ್ ಬಳಸುವಂತೆ ಸಲಹೆ ನೀಡಲಾಗಿದೆ.












Click it and Unblock the Notifications