ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉನ್ನಾವೋ ಅತ್ಯಾಚಾರ: ಬಿಜೆಪಿ ಶಾಸಕನ ಪಾತ್ರ ಖಚಿತಪಡಿಸಿದ CBI

|
Google Oneindia Kannada News

ನವದೆಹಲಿ, ಮೇ 11: ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೇನ್ಗಾರ್ ಪಾತ್ರವನ್ನು ಕೇಂದ್ರ ತನಿಖಾ ದಳ(ಸಿಬಿಐ) ಖಚಿತಪಡಿಸಿದೆ.

ಕಳೆದ ವರ್ಷ ಜೂನ್ 4 ರಂದು ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ 16 ವರ್ಷದ ಯುವತಿಯ ಮೇಲೆ ತಮ್ಮ ಮನೆಯಲ್ಲಿಯೇ ಅತ್ಯಾಚಾರ ನಡೆಸಿದ್ದರು ಎಂದು ದೂರಿನಲ್ಲಿ ಹೇಳಲಾಗಿತ್ತು. ಕುಲ್ದೀಪ್ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ಕುಲ್ದೀಪ್ ಈ ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಒಡ್ಡಿದ್ದರು ಎಂದು ದೂರು ನೀಡಲಾಗಿತ್ತು.

ಉನ್ನಾವೋ ಅತ್ಯಾಚಾರ ಸಂತ್ರಸ್ಥೆ ಬಿಚ್ಚಿಟ್ಟ ಆ ಕರಾಳ ದಿನದ ನೆನಪು..ಉನ್ನಾವೋ ಅತ್ಯಾಚಾರ ಸಂತ್ರಸ್ಥೆ ಬಿಚ್ಚಿಟ್ಟ ಆ ಕರಾಳ ದಿನದ ನೆನಪು..

ಅಷ್ಟೇ ಅಲ್ಲ, ನಂತರ ಶಾಸಕರ ಆಪ್ತರು ಸಹ ಯುವತಿಯ ಮೇಲೆ ಹಲವು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ್ದರು ಎಂದೂ ಯುವತಿ ಆರೋಪಿಸಿದ್ದರು. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ, ನ್ಯಾಯ ನೀಡುವಂತೆ ಆಗ್ರಹಿಸಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮನೆ ಮುಂದೆ ಯುವತಿಯ ತಂದೆ ವಿಷಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಈ ಸಂದರ್ಭದಲ್ಲಿ ಅವರನ್ನು ಪೊಲಿಸರು ಬಂಧಿಸಿದ್ದರು. ಆದರೆ ಅವರು ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು.

Unnao rape case: CBI confirms BJP MLAs role

ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣದಲ್ಲಿ ಬಿಜೆಪಿ ಶಾಸಕನ ಹೆಸರು ತಳುಕುಹಾಕಿಕೊಂಡಿದ್ದರಿಂದ ಉತ್ತರ ಪ್ರದೇಶದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರಕ್ಕೂ ಇರಿಸು ಮುರಿಸಾಗಿತ್ತು. ಈ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂಬ ಧ್ವನಿ ಎದ್ದ ಕಾರಣ ಯೋಗಿ ಆದಿತ್ಯನಾಥ್ ಸರ್ಕಾರ, ಪಾರದರ್ಶಕ ತನಿಖೆಗಾಗಿ ಈ ಪ್ರಕರಣವನ್ನು ಸಿಬಿಐ ಗೆ ವಹಿಸಿತ್ತು.

ಬಿಜೆಪಿ ಶಾಸಕನ ವಿರುದ್ಧ ಕೇಳಿಬಂದ ಉನ್ನಾವೋ ಅತ್ಯಾಚಾರ ಪ್ರಕರಣ ಸಿಬಿಐಗೆಬಿಜೆಪಿ ಶಾಸಕನ ವಿರುದ್ಧ ಕೇಳಿಬಂದ ಉನ್ನಾವೋ ಅತ್ಯಾಚಾರ ಪ್ರಕರಣ ಸಿಬಿಐಗೆ

ವಿಚಾರಣೆ ಕೈಗೆತ್ತಿಕೊಂಡಿದ್ದ ಸಿಬಿಐ ಕುಲ್ದೀಪ್ ಸಿಂಗ್ ಅತ್ಯಾಚಾರ ಎಸಗಿದ್ದನ್ನು ಖಚಿತಪಡಿಸಿದೆ. ಅಲ್ಲದೆ ಉತ್ತರ ಪ್ರದೇಶ ಪೊಲೀಸರು ಅತ್ಯಾಚಾರ ಪ್ರಕರಣದ ಹಾದಿ ತಪ್ಪಿಸಲು ಪ್ರಯತ್ನಿಸಿದ್ದರು ಎಂದೂ ಸಿಬಿಐ ದೂರಿದೆ. ಶಾಸಕ ಮತ್ತು ಇತರ ಆರೋಪಿಗಳ ವಿರುದ್ಧ ಎಫ್ ಐಆರ್ ಮತ್ತು ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದರೂ ಅವರನ್ನು ಬಂಧಿಸಿರಲಿಲ್ಲ ಮತ್ತು ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿರಲಿಲ್ಲ ಎಂದು ಸಿಬಿಐ ದೂರಿದೆ.

English summary
Unnao rape case: Central Bureau of Investigation(CBI) confirms role of BJP MLA Kuldeep Sing Sengar in Unnao rape case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X