ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭೇಟಿ

|
Google Oneindia Kannada News

ನವದೆಹಲಿ, ಜೂನ್ 10: ಉತ್ತರಪ್ರದೇಶ ರಾಜಕಾರಣದಲ್ಲಿ ಕುತೂಹಲಕಾರಿ ಬೆಳವಣಿಗೆಗಳು ಮುಂದುವರಿದಿದೆ. ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳು ಮೂಡಿದೆ ಎಂಬ ವರದಿಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿಯಾಗಲಿದ್ದಾರೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಂತರ ನಡೆಯುತ್ತಿರುವ ಮೊದಲ ಭೇಟಿ ಇದಾಗಿದೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎರಡು ದಿನಗಳ ಕಾಲ ದೆಹಲಿಯಲ್ಲಿ ಇರಲಿದ್ದಾರೆ. ಈ ಸಂದರ್ಭದಲ್ಲಿ ಮೊದಲಿಗೆ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ. ಬಳಿಕ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸುವ ಸಾಧ್ಯತೆಯಿದೆ.

 ಸಾರ್ವಜನಿಕ ವಲಯದ 2 ಬ್ಯಾಂಕ್, ಸರಕಾರೀ ಸ್ವಾಮ್ಯದ 1 ವಿಮಾ ಸಂಸ್ಥೆ ಖಾಸಗಿ ತೆಕ್ಕೆಗೆ ಸಾರ್ವಜನಿಕ ವಲಯದ 2 ಬ್ಯಾಂಕ್, ಸರಕಾರೀ ಸ್ವಾಮ್ಯದ 1 ವಿಮಾ ಸಂಸ್ಥೆ ಖಾಸಗಿ ತೆಕ್ಕೆಗೆ

ಕೊರೊನಾವೈರಸ್ ನಿರ್ವಹಣೆಯಲ್ಲಿ ಉತ್ತರಪ್ರದೇಶ ಸರ್ಕಾರ ಹಿನ್ನೆಡೆ ಅನುಭವಿಸಿತು ಎಂಬ ಆರೋಪಗಳು ಕೇಳಿ ಬಂದಿತ್ತು. ಕೆಲ ಬಿಜೆಪಿ ಶಾಸಕರು ಹಾಗೂ ಸಂಸದರೇ ಸಾರ್ವಜನಿಕವಾಗಿ ಸಿಎಂ ಯೋಗಿ ಆದಿತ್ಯನಾಥ್ ಅವರ ಕಾರ್ಯನಿರ್ವಹಣೆಯ ಬಗ್ಗೆ ಅಸಮಾಧಾನವವನ್ನು ವ್ಯಕ್ತಪಡಿಸಿದ್ದರು. ಈ ಬೆಳವಣಿಗೆ ಉತ್ತರ ಪ್ರದೇಶ ಬಿಜೆಪಿಯಲ್ಲಿ ಪ್ರಕ್ಷುಬ್ಧ ವಾತಾವರಣಕ್ಕೆ ಕಾರಣವಾಗಿದೆ. ಅಲ್ಲದೆ ಉತ್ತರಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಯನ್ನು ಕೂಡ ಅನುಭವಿಸಿತ್ತು. ಹೀಗಾಗಿ ಮುಂದಿನ ವರ್ಷ ವಿಧಾನ ಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಬಿಜೆಪಿಯ ನಾಯಕತ್ವ ಬದಲಾವಣೆಯ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ ಎಂದು ವರದಿಯಾಗಿದೆ. ಆದರೆ ಈ ಬೆಳವಣಿಗೆಗಳನ್ನು ಬಿಜೆಪಿ ನಿರಾಕರಿಸಿದೆ.

UP CM Adityanath To Meet PM Modi In Delhi after Reports Of Dissent In Uttar Pradesh

ಇನ್ನು ಇತ್ತೀಚೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭ ಹಾರೈಸಿಲ್ಲ ಎಂಬುದು ಕೂಡ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅಲ್ಲದೆ ಉತ್ತರ ಪ್ರದೇಶ ಸರ್ಕಾರಿ ಜಾಹೀರಾತುಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾವಚಿತ್ರವೂ ಮರೆಯಾಗಿದೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರ ನಾಯಕರು ಹಾಗೂ ಯೋಗಿ ಆದಿತ್ಯನಾಥ್ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗತೊಡಗುತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಹಾಗೂ ಪ್ರಧಾನಿ ಮೋದಿ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

English summary
UP CM Adityanath To Meet PM Modi In Delhi after Reports Of Dissent In Uttar Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X