UPSC ಪೂರ್ವಭಾವಿ ಪರೀಕ್ಷೆ: ಮೇ 20 ರಂದು ದಿನಾಂಕ ಪ್ರಕಟ

ನವದೆಹಲಿ, ಮೇ 4: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಈ ವರ್ಷದ ಕೇಂದ್ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಮೇ 20 ರಂದು ಪ್ರಕಟಿಸಲಿದೆ.

Recommended Video

      ಪೋಷಕರಿಂದ ಹಣ ವಸೂಲಿ ಮಾಡಬೇಡಿ ಎಂದು ಖಾಸಗಿ ಶಾಲೆಗಳಿಗೆ ವಾರ್ನಿಂಗ್ ಕೊಟ್ಟ ಸರ್ಕಾರ..! | Suresh Kumar | Education

      ಯುಪಿಎಸ್‌ಸಿ ಅಧ್ಯಕ್ಷ ಅರವಿಂದ ಸಕ್ಸೇನಾ ಅವರ ಅಧ್ಯಕ್ಷತೆಯಲ್ಲಿ ಆಯೋಗದ ಸಭೆ ಜರುಗಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರದಿಂದ ಮುಂದಿನ ಸೂಚನೆ ಬರುವವರೆಗೂ ಪರೀಕ್ಷೆಗಳನ್ನು ಮುಂದೂಡಲು ಸಭೆ ತೀರ್ಮಾನಿಸಿದೆ. ಈ ಮೊದಲು ಪರೀಕ್ಷೆಯನ್ನು ಮೇ 31 ರಂದು ನಡೆಸಲು ನಿರ್ಧರಿಸಲಾಗಿತ್ತು.

      ಕೇಂದ್ರ ಸರ್ಕಾರ ಲಾಕ್‌ಡೌನ್ ಅನ್ನು ಮೇ 4 ರಿಂದ ಎರಡು ವಾರಗಳವರೆಗೆ ವಿಸ್ತರಿಸಿದ ನಂತರ ಯುಪಿಎಸ್‌ಸಿ ಈ ನಿರ್ಧಾರ ಕೈಗೊಂಡಿದೆ. ಮೇ 20 ರೊಳಗೆ ಲಾಕ್‌ಡೌನ್ ಮೌಲ್ಯಮಾಪನ ಮಾಡಿದ ನಂತರ ಪರೀಕ್ಷೆಗೆ ಕರೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

      UPSC 2020 Preliminary Exam Date To Be Announced On May 20

      ಯುಪಿಎಸ್ಸಿ ಮಾಡಬೇಕಾದದ್ದನ್ನು ಮಾಡಿದೆ. ಕೋವಿಡ್ -19 ಹರಡುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ, ಅಂತಹ ದೊಡ್ಡ ಪ್ರಮಾಣದ ಪರೀಕ್ಷೆಯನ್ನು ನಡೆಸುವುದು ಕಾರ್ಯಸಾಧ್ಯವಲ್ಲ. ಪರೀಕ್ಷಾರ್ಥಿಗಳು ಆತಂಕಗೊಳ್ಳುವ ಅವಶ್ಯಕತೆ ಇಲ್ಲ ಎಂದು ಯುಪಿಎಸ್‌ಸಿ ತಿಳಿಸಿದೆ.

      ಆಯೋಗವು ಈ ವಾರ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಬೇಕಾಗಿತ್ತು, ಆದರೆ ಪ್ರಸ್ತುತ ಕೊರೊನಾ ಬಿಕ್ಕಟ್ಟಿನ ದೃಷ್ಟಿಯಿಂದ ಪರೀಕ್ಷಾ ಪ್ರಕ್ರಿಯೆಯನ್ನು ಮುಂದೂಡಲು ಆಯೋಗ ನಿರ್ಧರಿಸಿತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+