ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

UPSC ಪರೀಕ್ಷೆ 2021: ವಯೋಮಿತಿ ಮೀರಿದವರಿಗೆ ಅವಕಾಶವಿಲ್ಲ

|
Google Oneindia Kannada News

ನವದೆಹಲಿ,ಫೆಬ್ರವರಿ 10: 2021ರ ಯುಪಿಎಸ್‌ಇ ಪರೀಕ್ಷೆಯಲ್ಲಿ ವಯೋಮಿತಿ ಮೀರಿದವರಿಗೆ ಅವಕಾಶವಿಲ್ಲ ಎಂದು ಸರ್ಕಾರವು ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ.

ಕೋವಿಡ್-19 ಕಾರಣದಿಂದಾಗಿ ನಾಗರಿಕ ಸೇವೆಗಳ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅವಕಾಶವನ್ನು ಕೋರಿ ಅರ್ಜಿ ಸಲ್ಲಿಕೆಯಾಗಿತ್ತು.

UPSC ಪರೀಕ್ಷೆ; ಕೊನೆ ಪ್ರಯತ್ನದಿಂದ ವಂಚಿತರಾದವರಿಗೆ ಮತ್ತೊಂದು ಅವಕಾಶ ನೀಡಲು ಗ್ರೀನ್ ಸಿಗ್ನಲ್UPSC ಪರೀಕ್ಷೆ; ಕೊನೆ ಪ್ರಯತ್ನದಿಂದ ವಂಚಿತರಾದವರಿಗೆ ಮತ್ತೊಂದು ಅವಕಾಶ ನೀಡಲು ಗ್ರೀನ್ ಸಿಗ್ನಲ್

ಯುಪಿಎಸ್ ಸಿ ನಾಗರಿಕ ಸೇವಾ ಆಕಾಂಕ್ಷಿಗಳಿಗೆ ವಯಸ್ಸಿನ ಮಿತಿಯಲ್ಲಿ ಒಂದು ಬಾರಿ ವಿಶ್ರಾಂತಿ ನೀಡಲಾಗದು ಮತ್ತು ಕೊರೊನಾ ಪೀಡಿತ ನಾಗರಿಕ ಸೇವಾ ಅಭ್ಯರ್ಥಿಗಳಿಗೆ ಯಾವುದೇ ಹೆಚ್ಚುವರಿ ಅವಕಾಶ ನೀಡಲಾಗದು ಎಂದು ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

Supreme court

2020ರ ಅಕ್ಟೋಬರ್ ನಲ್ಲಿ ನಡೆದ ಪ್ರಾಥಮಿಕ ಪರೀಕ್ಷೆಯಲ್ಲಿ ಕೊನೆಯ ಪ್ರಯತ್ನ ಮಾಡಿದ ಅಭ್ಯರ್ಥಿಗಳಿಗೆ ಯುಪಿಎಸ್ ಸಿ ಪರೀಕ್ಷೆಯಲ್ಲಿ ಹೆಚ್ಚುವರಿ ಪ್ರಯತ್ನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು.

ಯುಪಿಎಸ್ ಸಿ ಪರೀಕ್ಷೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠಕ್ಕೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ಅವರು ಮಾಹಿತಿ ನೀಡಿದರು.

ಆತುರಾತುರವಾಗಿ ಸಿದ್ಧಪಡಿಸಿರುವ ಪರೀಕ್ಷೆಯು ಇದಲ್ಲ, ಹೀಗಾಗಿ ಅದರಲ್ಲಿ ಬದಲಾವಣೆ ಮಾಡಲಾಗದು ಜನರು ಒಟ್ಟಿಗೆ ವರ್ಷಗಳ ಕಾಲ ತಯಾರಿ ನಡೆಸುತ್ತಾರೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

English summary
The government on Tuesday informed the Supreme Court that it is against granting one-time relaxation on the age limit to UPSC civil service candidates, including those who had exhausted their last attempt in the 2020 exam amid the novel coronavirus pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X