• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಲಷ್ಕರ್ ದಾಳಿ ಎಚ್ಚರಿಕೆ, ದೆಹಲಿಯಲ್ಲಿ ಹೈ ಅಲರ್ಟ್

By Kiran B Hegde
|

ನವದೆಹಲಿ, ಡಿ. 13: ಭಾರತದ ರಾಜಧಾನಿ ನವದೆಹಲಿ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ತಯಾರಿ ನಡೆಸಲಿದೆ, ಎಚ್ಚರದಿಂದಿರಿ...

ಹೀಗೆಂದು ಭಾರತಕ್ಕೆ ಅಮೆರಿಕ ಸ್ಪಷ್ಟ ಎಚ್ಚರಿಕೆ ನೀಡಿದೆ. ಇದನ್ನು ಕೇಂದ್ರ ಗೃಹ ಸಚಿವಾಲಯ ದೃಢಪಡಿಸಿದೆ. ಹೌದು, ಭಾರತದ ಮೇಲೆ ದಾಳಿ ನಡೆಯಲಿದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆಗಳು ಸ್ಪಷ್ಟ ಎಚ್ಚರಿಕೆ ನೀಡಿವೆ. ಆದರೆ, ಎಲ್ಲಿ, ಯಾವಾಗ ದಾಳಿ ನಡೆಯುತ್ತದೆ ಎಂಬುದರ ಕುರಿತು ಮಾಹಿತಿ ಸಿಕ್ಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. [ಗಣರಾಜ್ಯೋತ್ಸವದಂದು ಲಷ್ಕರ್, ಸಿಮಿ ದಾಳಿ ಸಾಧ್ಯತೆ]

ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಗಣರಾಜ್ಯೋತ್ಸವದಂದು ಭಾರತದ ಅತಿಥಿಯಾಗಿ ಭಾಗವಹಿಸಲು ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಈ ಎಚ್ಚರಿಕೆಯನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ.

ಬಿಗಿ ಭದ್ರತೆ: ದೆಹಲಿಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದರ ಜೊತೆಗೆ ಪಕ್ಕದ ರಾಜ್ಯಗಳಾದ ಉತ್ತರ ಪ್ರದೇಶ ಹಾಗೂ ರಾಜಸ್ತಾನದೊಂದಿಗೂ ಇಂಟೆಲಿಜೆನ್ಸ್ ಬ್ಯೂರೊ ನಿರಂತರ ಸಂಪರ್ಕದಲ್ಲಿದೆ. ಈ ಕುರಿತು ಅಧಿಕಾರಿಗಳ ಮಟ್ಟದಲ್ಲಿ ಅನೇಕ ಸಭೆಗಳನ್ನು ನಡೆಸಲಾಗಿದೆ. ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್. ಬಸ್ಸಿ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿ ಕೈಗೊಂಡಿರುವ ಭದ್ರತಾ ಕ್ರಮಗಳ ಕುರಿತು ತಿಳಿಸಿದ್ದಾರೆ. [ಗಣರಾಜ್ಯೋತ್ಸವಕ್ಕೆ ಒಬಾಮಾ ಬರ್ತಾರೆ]

ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿರುವ ರಾಜಪಥದಲ್ಲಿ ದೆಹಲಿ ಪೊಲೀಸ್ ಮತ್ತು ನಾಗಾಲ್ಯಾಂಡ್ ಸಶಸ್ತ್ರ ಪೊಲೀಸರು ವಿವಿಐಪಿಗಳು ಸಾಗುವ ದಾರಿ ಹಾಗೂ ಗಣರಾಜ್ಯೋತ್ಸವದಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಕುಳಿತುಕೊಳ್ಳುವ ವೇದಿಕೆಗೆ ರಕ್ಷಣೆ ಒದಗಿಸುತ್ತಿದ್ದಾರೆ. [ಲಷ್ಕರ್ ಆರಂಭಿಸಿದೆ ಕಸಬ್ ಕ್ಲಾಸ್]

ಈ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಪೊಲೀಸ್ ಶ್ವಾನಗಳು ಎಲ್ಲ ಪ್ರದೇಶಗಳನ್ನು ಪರೀಕ್ಷಿಸುತ್ತಿದ್ದು, ಬಾಂಬ್ ಪತ್ತೆ ಯಂತ್ರ ಅಳವಡಿಸಲಾಗಿದೆ. ಇಲ್ಲಿ ಕೆಲಸ ಮಾಡುವವರಿಗೆ ವಿಶೇಷ ಗುರುತು ಪತ್ರ ನೀಡಲಾಗಿದೆ. [ಹಿಟ್ ಲಿಸ್ಟ್ ನಲ್ಲಿ ಅಡ್ವಾಣಿ, ಮೋದಿ]

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
United States alerts India of possible major terror strike in Delhi by Lashkar-e-Taiba triggering a comprehensive security review of the national capital by the Delhi Police and Intelligence Bureau. An official of Central home ministry has confirmed this.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more