ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಂಜೆ ಅಕ್ಬರ್ ನನ್ನನ್ನು ರೇಪ್ ಮಾಡಿದ್ರು : ಯುಎಸ್ ಪತ್ರಕರ್ತೆ

|
Google Oneindia Kannada News

ನವದೆಹಲಿ, ನವೆಂಬರ್ 02: ಕೇಂದ್ರದ ಮಾಜಿ ಸಚಿವ, ಮಾಜಿ ಸಂಪಾದಕ ಎಂಜೆ ಅಕ್ಬರ್ ವಿರುದ್ದ ಮತ್ತೊಮ್ಮೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಭಾರತದ ಹಲವು ಪತ್ರಕರ್ತೆಯರು ಆರೋಪ ಹೊರೆಸಿದ ಬಳಿಕ ಈಗ ಯುಎಸ್ ಮೂಲದ ಪತ್ರಕರ್ತೆಯೊಬ್ಬರು ಅಕ್ಬರ್ ವಿರುದ್ಧ ಆರೋಪ ಮಾಡಿದ್ದಾರೆ.

ಎಂಜೆ ಅಕ್ಬರ್‌ ಅವರೊಂದಿಗೆ ಈ ಹಿಂದೆ ಸಹದ್ಯೋಗಿಯಾಗಿದ್ದ ಪ್ರಿಯಾ ರಮಣಿ ಎಂಬುವರು ಮೊದಲಿಗೆ ಟ್ವಿಟ್ಟರ್‌ನಲ್ಲಿ #metoo ಅಭಿಯಾನದ ಅಡಿ ಎಂಜೆ ಅಕ್ಬರ್‌ ಅವರ ಕಾಮಚೇಷ್ಟೆಗಳ ಬಗ್ಗೆ ವಿವರವಾಗಿ ಬರೆದುಕೊಂಡಿದ್ದರು.

ಸರಿ ಸುಮಾರು 23 ವರ್ಷಗಳ ಹಿಂದೆ ಈ ಘಟನೆ ನಡೆದಿದ್ದು, ಅಕ್ಬರ್ ಅವರು ನನ್ನ ಬಟ್ಟೆ ಹರಿದು ಹಾಕಿ, ನನ್ನ ಮೇಲೆ ಬಲಾತ್ಕಾರ ಮಾಡಿದರು ಎಂದು ಯುಎಸ್ ಮೂಲದ ಭಾರತೀಯ ಸಂಜಾತೆ ಪತ್ರಕರ್ತೆ ಪಲ್ಲವಿ ಗೊಗಾಯಿ ಅವರು ಆರೋಪಿಸಿದ್ದಾರೆ.

#ಮಿಟೂಗೆ ಮೊದಲ ಜಯ, ಕೇಂದ್ರ ಮಂತ್ರಿ ಎಂಜೆ ಅಕ್ಬರ್‌ ರಾಜೀನಾಮೆ#ಮಿಟೂಗೆ ಮೊದಲ ಜಯ, ಕೇಂದ್ರ ಮಂತ್ರಿ ಎಂಜೆ ಅಕ್ಬರ್‌ ರಾಜೀನಾಮೆ

ಟೆಲಿಗ್ರಾಫ್, ಏಷ್ಯನ್ ಏಜ್, ದಿ ಸಂಡೇ ಗಾರ್ಡಿಯನ್ ಮುಂತಾದ ಪ್ರತಿಷ್ಠಿತ ಪತ್ರಿಕೆಗಳ ಸಂಪಾದಕರಾಗಿದ್ದ ಎಂಜೆ ಅಕ್ಬರ್ ಅವರು ಭಾರತೀಯ ಜನತಾ ಪಕ್ಷ ಸೇರಿದರು.

ರಾಜ್ಯಸಭಾ ಸದಸ್ಯರಾದ ಅಕ್ಬರ್ ಅವರು ನಂತರ ವಿದೇಶಾಂಗ ಖಾತೆಯ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. 20ಕ್ಕೂ ಅಧಿಕ ಪತ್ರಕರ್ತೆಯರು ಆರೋಪ ಮಾಡಿದ ಬಳಿಕ, ತೀವ್ರ ಒತ್ತಡಕ್ಕೆ ಒಳಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕಾಯಿತು.

ಜೈಪುರದಲ್ಲಿ 23ವರ್ಷಗಳ ಹಿಂದೆ ನಡೆದಿದ್ದೇನು?

ಜೈಪುರದಲ್ಲಿ 23ವರ್ಷಗಳ ಹಿಂದೆ ನಡೆದಿದ್ದೇನು?

ಜೈಪುರದ ಹೋಟೆಲ್ ವೊಂದರಲ್ಲಿ ಸಂಪಾದಕ ಎಂಜೆ ಅಕ್ಬರ್ ಅವರನ್ನು ಭೇಟಿ ಮಾಡಲು ಹೋಗಿದ್ದೆ. ನನ್ನ ಮೇಲೆ ಹಲ್ಲೆ ಮಾಡಿದ ಅಕ್ಬರ್, ನನ್ನ ಬಟ್ಟೆ ಹರಿದು ಹಾಕಿ, ಬಲವಂತವಾಗಿ ನನ್ನ ಮೇಲೆ ಅತ್ಯಾಚಾರ ಎಸಗಿದರು ಎಂದು ಪಲ್ಲವಿ ಗೊಗಾಯ್ ಅವರು ಆರೋಪಿಸಿದ್ದಾರೆ. ಇದಕ್ಕೂ ಮೊದಲು ದೆಹಲಿ ಕಚೇರಿಯಲ್ಲಿ ಹಲ್ಲೆ ಮಾಡಿದ್ದರು. ಮುಂಬೈನಲ್ಲಿ ಒಮ್ಮೆ ಕಿಸ್ ಮಾಡಲು ನಿರಾಕರಿಸಿದ್ದಕ್ಕೆ ನನ್ನ ಮುಖವನ್ನು ಪರಚಿದ್ದರು, ಇನ್ನೊಮ್ಮೆ ನಿರಾಕರಿಸಿದರೆ ಒದ್ದು ಹೊರಕ್ಕೆ ಹಾಕುತ್ತೇನೆ ಎಂದು ಬೆದರಿಸಿದ್ದರು

ಸುಳ್ಳು ಆರೋಪ ವಿರುದ್ಧ ಹೊರಾಡಲು ರಾಜೀನಾಮೆ

ಸುಳ್ಳು ಆರೋಪ ವಿರುದ್ಧ ಹೊರಾಡಲು ರಾಜೀನಾಮೆ

ವಿದೇಶಾಂಗ ಖಾತೆ ರಾಜ್ಯ ಸಚಿವ ಅಕ್ಬರ್‌ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸಿತ್ತು. ಕೇಂದ್ರ ಸರ್ಕಾರ ಕೂಡಾ ಈ ಪ್ರಕರಣದಿಂದ ಭಾರಿ ಮುಜುಗರಕ್ಕೆ ಒಳಗಾಗಿತ್ತು. ಅಂತಿಮವಾಗಿ ಎಂಜೆ ಅಕ್ಬರ್‌ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ರಾಜೀನಾಮೆ ನೀಡಿರುವ ಬಗ್ಗೆ ಹೇಳಿಕೆ ನೀಡಿ, ನನ್ನ ಮೇಲೆ ಸುಳ್ಳು ಆರೋಪಗಳು ಬಂದಿರುವ ಕಾರಣ, ರಾಜೀನಾಮೆ ನೀಡಿ ನ್ಯಾಯಾಲಯದಲ್ಲಿ ನ್ಯಾಯಕ್ಕಾಗಿ ಸ್ವಂತ ಬಲದ ಮೇಲೆ ಹೋರಾಡುತ್ತೇನೆ ಎಂದಿದ್ದರು.
ಪ್ರಿಯಾ ರಮಣಿ ವಿರುದ್ಧ ಮಾನನಷ್ಟ ಮೊಕದ್ದಮೆ

ಪ್ರಿಯಾ ರಮಣಿ ವಿರುದ್ಧ ಮಾನನಷ್ಟ ಮೊಕದ್ದಮೆ

ಲೈಂಗಿಕ ಕಿರುಕುಳ ಆರೋಪಕ್ಕೆ ಸಿಲುಕಿರುವ ಎಂಜೆ ಅಕ್ಬರ್‌ ಪರ ವಾದಿಸಲು 97 ವಕೀಲರ ದೊಡ್ಡ ತಂಡ ತಯಾರಾಗಿದೆ. ಈಗಾಗಲೇ ಅಕ್ಬರ್‌ ಅವರು ತಮ್ಮ ವಿರುದ್ಧ ಆರೋಪ ಮಾಡಿರುವ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಅಕ್ಬರ್ ವಿರುದ್ಧ 20ಕ್ಕೂ ಅಧಿಕ ಪತ್ರಕರ್ತೆಯರು ಆರೋಪ ಹೊರೆಸಿದ್ದರು. ದೂರು ದಾಖಲಿಸಿ, ಪೊಲೀಸರ ಮುಂದೆ ಹೇಳಿಕೆ ನೀಡಿದವರು ಕಡಿಮೆ. ಪತ್ರಕರ್ತೆ ಪ್ರಿಯಾ ರಮಣಿ ಅವರು ಮುಂಚೂಣಿಯಲ್ಲಿದ್ದಾರೆ.
 #metoo ಅಭಿಯಾನದ ಬಿಸಿ ತಟ್ಟಿದೆ

#metoo ಅಭಿಯಾನದ ಬಿಸಿ ತಟ್ಟಿದೆ

ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದ ನಂತರ, ಪ್ರಮುಖ ರಾಷ್ಟ್ರೀಯ ದೈನಿಕ ಹಿಂದೂಸ್ತಾನ್ ಟೈಮ್ಸ್ ನ ರಾಜಕೀಯ ವಿಭಾಗದ ಸಂಪಾದಕ, ಮುಖ್ಯ ಬ್ಯೂರೋ ಪ್ರಶಾಂತ್ ಝಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ಎಡಿಟರ್ ಕೆಆರ್ ಶ್ರೀನಿವಾಸನ್ ವಿರುದ್ಧ ಪತ್ರಕರ್ತೆ ಸಂಧ್ಯಾ ಮೆನನ್ ಏಳು ಮಂದಿ ಮಹಿಳೆಯರು ಆರೋಪಿಸಿದ್ದಾರೆ. ನಾನಾ ಪಾಟೇಕರ್, ಚಿತ್ರಕರ್ಮಿ ವಿಕಾಸ್ ಬೆಹ್ಲ್, ಲೇಖಕ ಚೇತನ್ ಭಗತ್, ಕಾಮಿಕ್ ಉತ್ಸವ್ ಚಕ್ರವರ್ತಿ, ನಟ ರಜತ್ ಕಪೂರ್ ಅವರಿಗೆ #metoo ಅಭಿಯಾನದ ಬಿಸಿ ತಟ್ಟಿದೆ.

ನನಗೀಗ ಧೈರ್ಯ ಬಂದಿದೆ : ಪಲ್ಲವಿ ಗೊಗಾಯ್

ಪ್ರಿಯಾ ರಮಣಿ, ಸುಪರ್ಣಾ ಶರ್ಮ, ತುಷಿತಾ ಪಟೇಲ್ ಮುಂತಾದವರು ಮುಂದೆ ಬಂದು ತಮಗಾದ ನೋವನ್ನು ತೋಡಿಕೊಂಡಿದ್ದರಿಂದ ನನಗೆ ಧೈರ್ಯ ಬಂದಿದೆ. ದಶಕಗಳ ಕೆಳಗೆ ನಾನು ಅನುಭವಿಸಿದ ಹಿಂಸೆಯನ್ನು ನಿಮ್ಮ ಮುಂದಿಡುತ್ತಿದ್ದೇನೆ ಎಂದು ವಾಷಿಂಗ್ಟನ್ ಪೋಸ್ಟ್ ನಲ್ಲಿ ಪತ್ರಕರ್ತೆ ಪಲ್ಲವಿ ಗೊಗಾಯ್ ತಮ್ಮ ನೋವನ್ನು ಬರೆದುಕೊಂಡಿದ್ದಾರೆ

English summary
US based Indian born journalist Pallavi Gogoi has alleged that former Editor and former Minister MJ Akbar ripped off her clothes and raped her 23 years ago at Jaipur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X