ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿವಾದಿತ ಕೃಷಿ ಕಾಯ್ದೆ ಕುರಿತು ದೋವಲ್-ಬ್ಲಿಂಕೆನ್ ಮಾತುಕತೆ

|
Google Oneindia Kannada News

ನವದೆಹಲಿ, ಜುಲೈ 28: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾಯ್ದೆ ಮತ್ತು ಅದರ ವಿರುದ್ಧ ನವದೆಹಲಿಯ ಮೂರು ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ಜೊತೆ ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಚರ್ಚಿಸಿದ್ದಾರೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್, ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಜೊತೆಗಿನ ದುಂಡು ಮೇಜಿನ ಸಭೆಯ ನಂತರದಲ್ಲಿ ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದರು.

ಅಜಿತ್ ದೋವಲ್-ಬ್ಲಿಂಕೆನ್ ಭೇಟಿ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಚರ್ಚೆ ಅಜಿತ್ ದೋವಲ್-ಬ್ಲಿಂಕೆನ್ ಭೇಟಿ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಚರ್ಚೆ

"ತಮ್ಮ ರಾಷ್ಟ್ರದ ಸರ್ಕಾರವನ್ನು ಪ್ರಶ್ನೆ ಮಾಡುವುದಕ್ಕೆ ದೇಶದ ಪ್ರತಿಯೊಬ್ಬ ಪ್ರಜೆಯೂ ಅರ್ಹರಾಗಿದ್ದಾರೆ ಎಂದು ನಾವು ನಂಬುತ್ತೇವೆ," ಎಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಹೇಳಿದ್ದಾರೆ. ಅಲ್ಲದೇ ಭಾರತದಲ್ಲಿ ಇತ್ತೀಚಿಗೆ ನಡೆದ ಪ್ರತಿಭಟನೆಗಳು ಮತ್ತು ಸರ್ಕಾರ ತೆಗೆದುಕೊಂಡ ತೀರ್ಮಾನಗಳ ಕುರಿತು ವ್ಯಕ್ತವಾದ ಭಿನ್ನಾಭಿಪ್ರಾಯಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

US Foreign Secretary Antony Blinken Discusses With Ajit Doval About controversial Farm Laws

ಯಾವ ಯಾವ ವಿಷಯಗಳ ಬಗ್ಗೆ ಚರ್ಚೆ?:

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ, ಲವ್ ಜಿಹಾದ್, ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ನಾಗರಿಕ ನೋಂದಣಿ ಕಾಯ್ದೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಭಯ ನಾಯಕರ ನಡುವೆ ಪ್ರಸ್ತಾಪವಾಗಿದೆ ಎಂದು ಹೇಳಲಾಗುತ್ತಿದೆ.

"ಭಾರತ ಮತ್ತು ಅಮೆರಿಕಾದ ಜನರು ಮಾನವೀಯ ಮೌಲ್ಯಗಳು, ಸಮಾನ ಅವಕಾಶ, ಕಾನೂನು, ಮೂಲಭೂತ ಹಕ್ಕುಗಳ ಜೊತೆಗೆ ಮೂಲಭೂತ ಪ್ರಾದೇಶಿಕತೆಯ ಮೇಲೆ ಹೆಚ್ಚು ವಿಶ್ವಾಸವನ್ನು ಇಟ್ಟುಕೊಂಡಿದ್ದಾರೆ," ಎಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ವಾತಂತ್ರ್ಯ ಎನ್ನುವುದು "ನಮ್ಮಂತಹ ಪ್ರಜಾಪ್ರಭುತ್ವಗಳ ಮೂಲಭೂತ ಸಿದ್ಧಾಂತಗಳಿವೆ ಸಂಬಂಧಿಸಿವೆ ಎಂದು ಕರೆದಿರುವ ಅವರು, ಭಾರತ ಮತ್ತು ಯು.ಎಸ್ ಪ್ರಗತಿಯಲ್ಲಿರುವ ಪ್ರಜಾಪ್ರಭುತ್ವ ರಾಷ್ಟ್ರಗಳು" ಎಂದು ಹೇಳಿದ್ದಾರೆ.

ಸರ್ಕಾರವನ್ನು ಪ್ರಶ್ನಿಸುವ ಹಕ್ಕು ಎಲ್ಲ ಪ್ರಜೆಗಳಿಗಿದೆ:

ನವದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಕೂಗು:

ಕಳೆದ ನವೆಂಬರ್ 26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಕೂಗು ಎತ್ತಿದ್ದಾರೆ. ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

English summary
US Foreign Secretary Antony Blinken Discusses With Ajit Doval About controversial Farm Laws And Farmers Protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X