ಸಿಜೆಐ ವಿರುದ್ಧ ಮಹಾಭಿಯೋಗ ನಿಲುವಳಿ ಮಂಡನೆ: ನಾಯ್ಡು ಪರಿಶೀಲನೆ
ನವದೆಹಲಿ, ಏಪ್ರಿಲ್ 23: ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಮಂಡಿಸಿರುವ ಮಹಾಭಿಯೋಗ ನಿಲುವಳಿಯನ್ನು ರಾಜ್ಯಸಭಾ ಅಧ್ಯಕ್ಷ ಮತ್ತು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪರಿಶೀಲಿಸುವ ಕೆಲಸ ಆರಂಭಿಸಿದ್ದಾರೆ.
ತೆಲಂಗಾಣ ಪ್ರವಾಸದಲ್ಲಿದ್ದ ಅವರು ತಮ್ಮ ಪ್ರವಾಸವನ್ನು ಅರ್ಧಕ್ಕೇ ಮೊಟಕುಗೊಳಿಸಿ ಮಹಾಭಿಯೋಗ ನಿಲುವಳಿ ಮಂಡನೆಗೆ ಸಂಬಂಧಿಸಿದಂತೆ ಪರಿಶೀಲನೆ ಆರಂಭಿಸಿದ್ದಾರೆ.
ಭಾರತೀಯ ಸಂವಿಧಾನದ 217 ಮತ್ತು 124(4)ನೇ ವಿಧಿಯ ಅಡಿಯಲ್ಲಿ ದೀಪಕ್ ಮಿಶ್ರಾ ಅವರನ್ನು ಪದಚ್ಯುತಿಗೊಳಿಸುವಂತೆ ಒತ್ತಾಯಿಸಿ, ಕಾಂಗ್ರೆಸ್ ನೇತೃತ್ವದಲ್ಲಿ ನ್ಯಾಶ್ನಲ್ ಕಾಂಗ್ರೆಸ್ ಪಕ್ಷ, ಸಿಪಿಐ-ಎಂ ಮತ್ತು ಸಿಪಿಐ, ಸಮಾಜವಾದಿ ಪಕ್ಷ, ಬಹುಜನ ಸಮಾಜವಾದಿ ಪಕ್ಷ ಸೇರಿದಂತೆ 7 ವಿರೋಧ ಪಕ್ಷಗಳು ಮಹಾಭಿಯೋಗ ನಿಲುವಳಿ ಮಂಡಿಸಿದ್ದವು.

ದೀಪಕ್ ಮಿಶ್ರಾ ಅವರು ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದಾಗಿನಿಂದಲೂ ನ್ಯಾಯಾಂಗಕ್ಕೆ ಸಂಬಂಧಿಸಿದಂತೆ ಒಂದಿಲ್ಲೊಂದು ವಿವಾದ ಹುಟ್ಟಿಕೊಳ್ಳುತ್ತಿದೆ. ಹಲವು ಪ್ರಕರಣಗಳನ್ನು ಬೇರೆ ಬೇರೆ ಪೀಠಗಳಿಗೆ ಹಂಚುವಾಗಲೂ ತಾರತಮ್ಯವಾಗುತ್ತಿದೆ ಎಮದು ಸಿಜೆಐ ವಿರುದ್ಧ ಇತ್ತೀಚೆಗೆ ಆರೋಪ ಹೊರಿಸಲಾಗಿತ್ತು.












Click it and Unblock the Notifications