ಸಿಜೆಐ ಪದಚ್ಯುತಿ ಮನವಿ ತಿರಸ್ಕರಿಸಿದ ವೆಂಕಯ್ಯ ನಾಯ್ಡು

ನವದೆಹಲಿ, ಏಪ್ರಿಲ್ 23: ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಕಾಂಗ್ರೆಸ್ ನೇತೃತ್ವದ ಏಳು ಪಕ್ಷಗಳು ಮಂಡಿಸಿದ್ದ ಮಹಾಭಿಯೋಗ(impeachment) ನಿಲುವಳಿಯನ್ನು ರಾಜ್ಯಸಭಾ ಅಧ್ಯಕ್ಷ ಮತ್ತು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿರಸ್ಕರಿಸಿದ್ದಾರೆ.

"ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಮಾಡಿರುವ ಆರೋಪಗಳನ್ನು ನಾನು ಪರಿಶೀಲಿಸಿದ್ದೇನೆ. ಆದರೆ ಈ ಆರೋಪಗಳಲ್ಲಿ ಮುಖ್ಯನ್ಯಾಯಮೂರ್ತಿಗಳು ದೋಷಿಗಳು ಎಂದು ಪರಿಗಣಿಸುವುದಕ್ಕೆ ಸಾಧ್ಯವಿಲ್ಲ. ಈ ಆರೋಪಗಳಲ್ಲಿ ಹುರುಳಿಲ್ಲ. ಆದ್ದರಿಂದ ಪದಚ್ಯುತಿ ನಿಲುವಳಿ ಮಂಡನೆಯನ್ನು ನಾನು ತಿರಸ್ಕರಿಸುತ್ತೇನೆ" ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.

Venkaiah Naidu begins consultation on impeachment motion against CJI

ಭಾರತೀಯ ಸಂವಿಧಾನದ 217 ಮತ್ತು 124(4)ನೇ ವಿಧಿಯ ಅಡಿಯಲ್ಲಿ ದೀಪಕ್ ಮಿಶ್ರಾ ಅವರನ್ನು ಪದಚ್ಯುತಿಗೊಳಿಸುವಂತೆ ಒತ್ತಾಯಿಸಿ, ಕಾಂಗ್ರೆಸ್ ನೇತೃತ್ವದಲ್ಲಿ ಎನ್ ಸಿಪಿ, ಸಿಪಿಐ-ಎಂ ಮತ್ತು ಸಿಪಿಐ, ಸಮಾಜವಾದಿ ಪಕ್ಷ, ಬಹುಜನ ಸಮಾಜವಾದಿ ಪಕ್ಷ ಸೇರಿದಂತೆ 7 ವಿರೋಧ ಪಕ್ಷಗಳು ಮಹಾಭಿಯೋಗ ನಿಲುವಳಿ ಮಂಡಿಸಿದ್ದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+